ರಾಜ್ಯ

ಕಲಬುರಗಿಯಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಕೊಲೆ

*ಕಲಬುರಗಿ ಜಿಲ್ಲೆಯಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಹತ್ಯೆ*

*ಸಂಸದ ಉಮೇಶ ಜಾಧವ ಆಪ್ತ*

*ಪಾರ್ಟಿ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದು ಕಣ್ಣಿಗೆ ಕಾರದ ಪುಡಿ ಎರಚಿ ಕೊಲೆ ಮಾಡಿದರಾ ಸ್ನೇಹಿತರು*

ಕಲಬುರಗಿ ಪ್ರಜಾಕಿರಣ.ಕಾಮ್ : ಕಲಬುರಗಿ ಜಿಲ್ಲೆಯಲ್ಲಿ ಮೊನ್ಬಯಷ್ಟೇ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆ ಮರೆಯುವ ಮುನ್ನವೇ ಮತ್ತೊಬ್ವನ ಕೊಲೆಯಾಗಿದೆ.

ಕಲಬುರಗಿ ಜಿಲ್ಲೆಯ ಲೋಕಸಭಾ ಸಂಸದ ಡಾ. ಉಮೇಶ್​ ಜಾಧವ್ ಬೆಂಬಲಿಗನಾಗಿದ್ದ ಬಿಜೆಪಿ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕೊಲೆಯಾದ ಬಿಜೆಪಿ ಮುಖಂಡ ಗಿರೀಶ್ ಚಕ್ರ ಎಂದು ತಿಳಿದುಬಂದಿದೆ.

ಈತನನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಬಿ ಎಸ್ ಎನ್ ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು.

ಅದರ ನೆಪವಾಗಿಸಿಕೊಂಡು ಪಾರ್ಟಿ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದು ಕಣ್ಣಿಗೆ ಕಾರದ ಪುಡಿ ಎರಚಿ ಆತನ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಮಾಹಿತಿ ಅರಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ದೇವಲ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *