ಅಂತಾರಾಷ್ಟ್ರೀಯ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪರ್ವ : ಲಕ್ಷ್ಮಣ ಸವದಿ ಮುಂದಿನ ಸಿಎಂ…!  

ನವದೆಹಲಿ/ಬೆಂಗಳೂರು prajakiran.com : ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಬಿಡಾರ ಹೂಡಿರುವ ರಾಜ್ಯದ ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಆಗ್ತಾರಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ.

ಇದಕ್ಕೆ ಕಾರಣಅವರು ನಿನ್ನೇ ರಾಜ್ಯ ಸರಕಾರದ ಸಾಧನೆಯಿಂದ ದೂರು ಉಳಿದು ನವದೆಹಲಿಯಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿರುವುದು ಒಂದಡೆಯಾದರೆ, ಇನ್ನೊಂದಡೆ ಅವರು ನಿನ್ನೇ ನಡೆಸಿದ ರಾಜಕೀಯ ಮುಖಂಡರ ಭೇಟಿ ಅಂತಹ ಪ್ರಶ್ನೆ ಹುಟ್ಟು ಹಾಕಿದೆ.

ಡಿಸಿಎಂ ಲಕ್ಷ್ಮಣ ಸವದಿ ನಿನ್ನೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೆಂಗಳೂರಿನಲ್ಲಿ ಹಲವು ಶಾಸಕರನ್ನು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅಚ್ಚರಿ ಮೂಡಿಸಿದ್ದಾರೆ.

ಅದರ ಬೆನ್ನಲ್ಲೇ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಫೇಸ್ ಬುಕ್ ನಲ್ಲಿ ಮುಂದಿನ ಸಿಎಂ ನಮ್ಮ ನಾಯಕ ಲಕ್ಷ್ಮಣ ಸವದಿ ಎಂಬಅಭಿಯಾನ ಆರಂಭಿಸಿದ್ದಾರೆ.

ಹಾಗಿದ್ದರೆ ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವಬದಲಾವಣೆಗೆ ಮುನ್ನುಡಿ ಹಾಡಲಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಯಾಕೆಂದರೆ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದರೂ ಕೇಂದ್ರ ಸರಕಾರ ನಾಯಕರು ಒಂದೇ ಒಂದು ಮೆಚ್ಚುಗೆ ಮಾತಗಳನ್ನು ಆಡಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಆಗಲಿ, ಕೇಂದ್ರ ಗೃಹ ಸಚಿವಅಮಿತ್ ಶಾ ಅವರಾಗಲಿ ಒಂದು ಟ್ವೀಟ್ ಕೂಡ ಮಾಡಿಲ್ಲ.

ಇದು ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಪರ್ವಕ್ಕೆ ವೇದಿಕೆ ಸಜ್ಜಾಗಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಕೆಲ ದಿನಗಳ ಹಿಂದೆಯಷ್ಟೆ ಡಿಸಿಎಂ ಲಕ್ಷ್ಮಣ ಸವದಿ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆನಂತರ ಸಿದಾ ರಾಜ್ಯ ಸರಕಾರದ ಸಂಭ್ರಮಾಚರಣೆ ಕೈಬಿಟ್ಟು ಅವರು ದೆಹಲಿಗೆ ಹೋಗಿದ್ದರು.

ದೆಹಲಿಯಲ್ಲಿ ಕರ್ನಾಟಕ ರಾಜ್ಯ ರಾಜಕಾರಣದ ಮಹತ್ವದ ಬೆಳೆವಣಿಗೆಗಳು ನಡೆಯುತ್ತಿವಾ ಎಂಬಅನುಮಾನ ಬಲಗೊಳ್ಳಲು ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಬಿಜೆಪಿ ನಾಯಕರು ಯಾರು ಮೌನ ಮುರಿಯದಿರುವುದು ಕುತೂಹಲ ಕೆರಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *