ಅಂತಾರಾಷ್ಟ್ರೀಯ

ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ಬಿಜೆಪಿ ಸೇರ್ಪಡೆ

ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಪಕ್ಷದಲ್ಲಿ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಮುಖಂಡ ಹಾಗೂ ಹೈಕೋರ್ಟ್ ವಕೀಲರಾದ ಪಿ.ಎಚ್.ನೀರಲಕೇರಿ ಅವರು ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ದಾವಣಗೆರೆಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಶಾಲನ್ನು ಹಾಕುವ ಮ‌ೂಲಕ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನೀರಲಕೇರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಪಿ.ಎಚ್.ನೀರಲಕೇರಿಯವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಹಾಗೂ ಪ್ರಧಾನಿ ಮೋದಿಯವರ ನಾಯಕತ್ವವನ್ನು ಮೆಚ್ಚಿಕೊಂಡು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಬಹಳಷ್ಟು ಖುಷಿಯ ವಿಷಯವಾಗಿದೆ‌.

ಬರುವ ದಿನಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಪಡಿಸುವ ಕೆಲಸವನ್ನು ಅವರು ಮಾಡುತ್ತಾರೆ ಎಂಬ ವಿಶ್ವಾಸವಿದೆ.

ಸದ್ಯ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಜನಪ್ರಿಯ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಅಭೂತಪೂರ್ವ ಗೆಲುವಿಗೆ ಶ್ರಮಿಸುವಂತೆ ಸಲಹೆ ನೀಡಿದರು.

ನಂತರ ಮಾತನಾಡಿದ ಪಿ.ಎಚ್.ನೀರಲಕೇರಿಯವರು,
ದೇಶದಲ್ಲಿ ಶಾಂತಿ, ಸುರಕ್ಷತೆ ಹಾಗೂ ಸುಭದ್ರ ಆಡಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅನಿವಾರ್ಯವಾಗಿದೆ.

ವಿಕಸಿತ ಭಾರತದ ಕನಸನ್ನು ನನಸಾಗಿಸಲು ಶ್ರಮಿಸುತ್ತಿರುವ ಪ್ರಧಾನಿ ಮೋದಿ ಪರಿವಾರಕ್ಕೆ ನಾನು ಸೇರ್ಪಡೆಯಾಗಿರುವುದು ಖುಷಿ ತಂದಿದರ. ಪ್ರಧಾನಿಯವರ 10 ವರ್ಷದ ಅವಧಿಯಲ್ಲಿ ದೇಶದಲ್ಲಿ ಆಗಿರುವ ಅಭಿವೃದ್ಧಿ ಹಾಗೂ ಜನಪ್ರಿಯ ಯೋಜನೆಗಳಿಂದ ವಿಶ್ವ ಮೆಚ್ಚಿದ ನಾಯಕರಾಗಿದ್ದಾರೆ.

ಬರುವ ದಿನಗಳಲ್ಲಿ ಮೋದಿಯವರು ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವುದು ನಿಶ್ಚಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

*ಮತ್ತಷ್ಟು ನಾಯಕರು ಬಿಜೆಪಿಗೆ:*
ಕಾಂಗ್ರೆಸ್ ಪಕ್ಷದಲ್ಲಿ ತನು-ಮನ-ಧನದಿಂದ ನಾನು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ,

ಆದರೆ ಪಕ್ಷದಲ್ಲಿ ರಾಷ್ಟ್ರೀಯ ನಾಯಕತ್ವ ಇಲ್ಲದೇ ಇರುವ ಕಾರಣಕ್ಕೆ ಪ್ರಾಮಾಣಿಕ ಕಾರ್ಯಕರ್ತರು ಮತ್ತು ಮುಖಂಡರಿಗೆ ಬೆಲೆ ಇಲ್ಲದಂತಾಗಿದೆ.

ಸದ್ಯದಲ್ಲಿಯೇ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮತ್ತಷ್ಟು ಪ್ರಮುಖ ನಾಯಕರು ಕಾಂಗ್ರೆಸ್ ತೊರೆದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ, ಎನ್.ರಾಜಶೇಖರ, ಲೀಗಲ್ ಸೆಲ್ ರಾಜ್ಯ ಸಮಿತಿ ಸದಸ್ಯರು ಎ.ಸಿ.ರಾಘವೇಂದ್ರ‌,‌ರಾಜು ಟಿ.ಮಸವಳ್ಳಿ, ಅಂಜನ್ ಕುಮಾರ, ಸುರೇಶ ಮಸವಳ್ಳಿ ಸೇರಿದಂತೆ ಅನೇಕರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *