ಬೆಂಗಳೂರು ಪ್ರಜಾಕಿರಣ.ಕಾಮ್ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಹಾಲಿ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೇಮಕಗೊಳಿಸಿ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸಿದ ಬೆನ್ನ ಹಿಂದೆಯೇ ಈ ನೇಮಕ ಆದೇಶ ಹೊರಬಿದ್ದಿರುವುದು ವಿಶೇಷವಾಗಿದೆ.
ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ನಂತ ಬಳಿಕವೂ ಕಳೆದ ಹಲವು ತಿಂಗಳಿಂದ ಆಯ್ಕೆ ನೆನೆಗುದಿಗೆ ಬಿದ್ದಿದ್ದನ್ನು ಕಾಂಗ್ರೆಸ್ ಪಕ್ಷ ಟೀಕಿಸುತ್ತಾ ಬಂದಿತ್ತು.
ಆದರೂ ಬಿಜೆಪಿಯ ರಾಷ್ಟ್ರೀಯ ನಾಯಕರು ಯಾರೊಬ್ಬರೂ ಕ್ಯಾರೆ ಅಂದಿರಲಿಲ್ಲ.
ಇದೀಗ ಲಿಂಗಾಯತ ಮತಗಳು ವಿಭಜನೆ ಆಗಬಾರದು ಎಂದು ಅದರ ಮೇಲೆ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪುತ್ರನಿಗೆ ಮನ್ನಣೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಅದರ ಜೊತೆಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ಮಾಡಿರುವುದು ವಿಜಯೇಂದ್ರಗೆ ಪಕ್ಷದಲ್ಲಿ ಇನ್ನಷ್ಟು ಹಿಡಿತ ಸಾಧಿಸಲು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.