ಅಂತಾರಾಷ್ಟ್ರೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಬಿಜೆಪಿಯಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಬಿಜೆಪಿಯಿಂದ ವಿಕಾಸಸೌಧ ಬಳಿ‌ಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿ ವಿಕಾಸಸೌಧದ ಗಾಂಧಿ ಪ್ರತಿಮೆ ಬಳಿ ಬುಧವಾರ ಬೆಳಿಗ್ಗೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯದ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿ ಕಾರಿದರು‌.

 ಬೆಳಗಾವಿಯಲ್ಲಿ ಜೈನಮುನಿಗಳ ಬರ್ಬರ ಹತ್ಯೆ ಹಾಗೂ ಟಿ. ನರಸಿಪುರದಲ್ಲಿ ಯುವ ಬ್ರಿಗ್ರೇಡ್ ವೇಣುಗೋಪಾಲ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಸಿ. ಅಶ್ವತನಾರಾಯಣ, ಸುನೀಲ್ ಕುಮಾರ, ಅರಗ ಜ್ಞಾನೇಂದ್ರ, ಎನ್. ರವಿಕುಮಾರ್, ಶಶಿಲ್ ನಮೋಶಿ, ಸಿದ್ದು ಸವದಿ, ಅಭಯ ಪಾಟೀಲ್, ಭಾರತಿ ಶೆಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *