ರಾಜ್ಯ

ರಾಜ್ಯದ 222 ಕ್ಕೂ ಹೆಚ್ಚು ತಾಲ್ಲೂಕುಗಳಿಗೆ ಬರ ಪರಿಹಾರ ಮಾಡದ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ

*ರಾಜ್ಯದ 222 ಕ್ಕೂ ಹೆಚ್ಚು ತಾಲ್ಲೂಕುಗಳಿಗೆ ಬರ ಪರಿಹಾರ ಮಾಡದ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ*

ಬೆಂಗಳೂರು ಪ್ರಜಾಕಿರಣ.ಕಾಮ್ :
ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದೆ‌.
ಆದರೆ, ಈವರೆವಿಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಬುಧವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿದರು.
ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆ ಎದುರು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *