ಅಂತಾರಾಷ್ಟ್ರೀಯ

ರಾಜ್ಯಸಭೆ ಚುನಾವಣೆ : ಕೈ-ದಳ ತಿಕ್ಕಾಟದ ನಡುವೆ ಬಿಜೆಪಿಯ ಮೂವರು ಸದಸ್ಯರು ಆಯ್ಕೆ

ಬೆಂಗಳೂರು prajakiran.com :
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆಯಲ್ಲಿ ಕೊನೆ ಕ್ಷಣದ ಕೈ-ದಳ ತಿಕ್ಕಾಟದ ನಡುವೆ ಬಿಜೆಪಿಯ ಮೂವರು ಸದಸ್ಯರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ ನಿಂದ ಮನ್ಸೂರ್ ಅಲಿ ಹಾಗೂ. ಜನತಾದಳದಿಂದ ಕುಪೇಂದ್ರರಡ್ಡಿ ಸ್ಪರ್ಧೆಯಲ್ಲಿ ಇದ್ದರು.

ಆದರೆ ಇವರಿಬ್ಬರ ನಡುವಿನ ಲೆಕ್ಕಾಚಾರ ಬುಡಮೇಲು ಮಾಡುವ ಮೂಲಕ ಬಿಜೆಪಿಯ ಲೆಹರ್ ಸಿಂಗ ಜಯಶಾಲಿಯಾದರು.

ಇವರು ಮಾಜಿ ಸಿಎಂ ಯಡಿಯೂರಪ್ಪ ಆಪ್ತರು ಈ ಹಿಂದೆ ಇವರಿಗೆ ವಿಧಾನ ಪರಿಷತ್ ಟಿಕೇಟ್ ಕೈ ತಪ್ಪಿತ್ತು. ಇದೀಗ ರಾಜ್ಯ ಸಭೆ ಪ್ರವೇಶಿಸಿ ವಿಜಯದ ನಗೆ ಬೀರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್, ಜಗ್ಗೇಶ ಹಾಗೂ ಲೇಹರ್ ಸಿಂಗ್ ಅವರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ, ಮುನಿರತ್ನ , ಬೈರತಿ ಬಸವರಾಜ್ ಸೇರಿದಂತೆ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಶುಭಾಶಯ ಕೋರಿ ಶ್ಲಾಘಿಸಿದರು.

ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ ಸರಣಿಯ ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತೆ ಪ್ರಧಾನಿ ಮೋದಿಯವರು ಬೊಮ್ಮಾಯಿ ಅವರನ್ನು ಪ್ರೋತ್ಸಾಹಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಗೆದ್ದಿ ರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿರುವುದಕ್ಕಾಗಿ ಶುಭಾಶಯ ಕೋರಿದರು.

ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೆ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಅಮಿತ ಶಾ ಹೇಳಿದರು.

ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದರು ನೀವು ಇದಕ್ಕಾಗಿ ಪಟ್ಟ ಶ್ರಮ ಇಂದು ಸಾರ್ಥಕ ವಾಗಿದೆ ಎಲ್ಲ ತಂತ್ರಗಳು ಫಲಿಸಿವೆ ಎಂದು ಜೆ.ಪಿ. ನಡ್ಡಾ ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *