ಧಾರವಾಡ (prajakiran. com) ಜೂ.2: ಧಾರವಾಡ ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 158 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಲ್ಲಿ ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಒಬ್ಬ ಸೋಂಕಿತ ಗುಣಮುಖರಾಗಿದ್ದಾರೆ ಎಂದು ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ಬ್ಲಾಕ್ ಫಂಗಸ್ ಸೋಂಕಿತರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸೇರಿ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.