ನವದೆಹಲಿ prajakiran.com : ದೆಹಲಿಯಲ್ಲಿ ಕೊರೋನಾ ಆರ್ಭಟದಿಂದ ಮೇಲಿಂದ ಮೇಲೆ ಲಾಕ್ಡೌನ್ ಮಾಡಲಾಗುತ್ತಿದೆ. ಈ ನಡುವೆ ಬ್ಲಾಕ್ ಫಂಗಸ್ ಕೂಡ ಹೆಚ್ಚಾಗಿದೆ.
ರಾಜ್ಯದಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ, 59 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಇವರಲ್ಲಿ 748 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಬ್ಲ್ಯಾಕ್ ಫಂಗಸ್ ಸೋಂಕಿಗೆ ಔಷಧದ ಕೊರತೆಯಾಗಿದ್ದು, ಓರ್ವ ವ್ಯಕ್ತಿಗೆ ದಿನಕ್ಕೆ 3-4 ಚುಚ್ಚುಮದ್ದಿನ ಅಗತ್ಯವಿದೆ.
ರಾಜ್ಯದಲ್ಲಿ ಸದ್ಯ 4,670 ಚುಚ್ಚುಮದ್ದು ಲಭ್ಯವಿದೆ. ಸೋಂಕಿತರ ಅನುಗುಣವಾಗಿ ಔಷಧಗಳನ್ನು ಆಸ್ಪತ್ರೆಗಳಿಗೆ ವಿತರಿಸುತ್ತೇವೆ ಎಂದು ತಿಳಿಸಿದ್ದಾರೆ.