ಪುಣೆ prajakiran.com : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಕಪ್ಪುಶಿಲೀಂದ್ರ ಭೀತಿ ಕೂಡ ಹೆಚ್ಚಾಗಿದ್ದು, ಇದೀಗ ಪುಣೆಯಲ್ಲಿ 270 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಈವರೆಗೆ ಸುಮಾರು 270 ಪ್ರಕರಣ ದೃಢಪಟ್ಟಿದೆ ಎಂದು ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ.
ಬ್ಲಾಕ್ ಫಂಗಸ್ ಕೊರೋನಾದಿಂದ ಚೇತರಿಸಿಕೊಂಡವರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಫಂಗಸ್ ಮೆದುಳು ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ.
ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಮಧುಮೇಹಿಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎನ್ನಲಾಗಿದೆ.