ರಾಜ್ಯ

ಜುಲೈ 14 ರಿಂದ 7 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್





ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದ್ದಾರೆ.



ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದ್ದಾರೆ.

ಸ್ವತಃ ಸಿಎಂ ಬಿ.ಎಸ್. ಯಡಿಯೂರಪ್ಪಅವರಬೆಂಗಾವಲು ಪಡೆಯ ಇಬ್ಬರಿಗೆ ಕೋವಿಡ್ ಪಾಸಿಟಿವ್ ದೃಢವಾದ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಹೋಂ ಕ್ವಾರಂಟಿನ್ ನಲ್ಲಿದ್ದಾರೆ. ಲಾಕ್ ಡೌನ್ ಪರ ವಿರೋಧದ ನಡುವೆ ಸಿಎಂ ಈ ನಿರ್ಧಾರ ಬೆಂಗಳೂರಿನ ಜನತೆಗೆ ಸ್ವಲ್ಪ ನಿರಾಳತೆ ಮೂಡಿಸಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *