ಹುಬ್ಬಳ್ಳಿ prajakiran. com : ಸೆಕ್ಯುರಿಟಿ ಗಾರ್ಡ್ ಒಬ್ಬರು ಭೀಕರವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹುಬ್ಬಳ್ಳಿ ಐಟಿ ಪಾರ್ಕ್ ನ ಶೌಚಾಲಯ ಬಳಿ ನಡೆದಿದೆ.
ಮೃತ ದುರ್ದೈವಿ ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಎಂದು ತಿಳಿದು ಬಂದಿದ್ದು, ಇತ ಮೂಲತಃ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಿವಾಸಿ
ಆದರೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಈತ ಐಟಿ ಪಾರ್ಕ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದು, ಇಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಈ ಘಟನೆಗೆ ಕಾರಣ ತಿಳಿದುಬಂದಿಲ್ಲ. ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ.