ಸಿನಿಮಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

ಮುಂಬೈ prajakiran.com :  ಹಿಂದಿ ಸಿನಿಮಾ ರಂಗದ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭಾನುವಾರ ಅವರ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ ಈ ವಿಚಾರ ಇಡೀ ಬಾಲಿವುಡ್ ನ್ನೇ ಬೆಚ್ಚಿಬೀಳಿಸಿದೆ.

ಮಹೇಂದ್ರ ಸಿಂಗ್ ಧೋನಿಯವರ ಜೀವಾನಾಧರಿತ ಚಿತ್ರದಲ್ಲಿ ನಟಿಸಿದ್ದ, ಸುಶಾಂತ್ ಸಿಂಗ್ ರಜಪೂತ್ ಅವರು 11 ಚಿತ್ರಗಳಲ್ಲಿ ನಟಿಸಿದ್ದರು.

ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆನ್ನಲಾಗಿದ್ದು, ಮನೆಗೆಲಸಗಾರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಮೊಬೈಲ್ ಜಪ್ತಿ ಮಾಡಿ ತನಿಖೆ ಕೈಗೊಂಡಿದ್ದಾರೆ.

ಅವರು ಕಳೆದ ಹಲವು ದಿನಗಳಿಂದ ತಾಯಿಯನ್ನು ನೆನೆದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಬಿಹಾರದ ಪಾಟ್ನಾದಲ್ಲಿ 1986 ಜನವರಿ 21 ರಂದು ಜನಿಸಿದ್ದ ಅವರು, ಕೇವಲ 34ನೇ ವಯಸ್ಸಿಗೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಪರಿಸ್ಥೀತಿ ಏನಾಗಿತ್ತು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.  

ಹಲವಾರು ಬಾಲಿವುಡ್ ಚಿತ್ರಗಳಲ್ಲಿ ತಮ್ಮಅಭಿನಯದಿಂದಲೇ ಖ್ಯಾತಿ ಗಳಿಸಿದ್ದ ಸುಶಾಂತ್ ಸಾವಿಗೆ ಇಡೀ ದೇಶವೇ ಮರಗುತ್ತಿದೆ.

ಸುಶಾಂತ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟಅಕ್ಷಯಕುಮಾರ್ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *