ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರುಗಳಿಗೆ ಪುಸ್ತಕ, ಪತ್ರಿಕೆ, ಮನರಂಜನಾ ಚಟುವಟಿಕೆ

*ಪುಸ್ತಕ ದಾನ ನೀಡಲು ಸಾರ್ವಜನಿಕರಿಗೆ ಮನವಿ

ಧಾರವಾಡ prajakiran.com :   ಕೋವಿಡ್ ಕೇರ್ ಸೆಂಟರುಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷಣ ರಹಿತ ಸೋಂಕಿತರ ಮನೋ ಸ್ಥೈರ್ಯ ಹೆಚ್ಚಿಸಲು ದೂರವಾಣಿ ಮೂಲಕ ಆಪ್ತ ಸಮಾಲೋಚನೆ,ಯೋಗ, ಮನರಂಜನಾ ಚಟುವಟಿಕೆಗಳನ್ನು ಕೈಗೊಳ್ಳುವುದು.

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪುಸ್ತಕಗಳನ್ನು ಪೂರೈಸಲು ಕ್ರಮವಹಿಸಲಾಗುವುದು. ಸಾರ್ವಜನಿಕರು ಕೂಡ ಪುಸ್ತಕಗಳನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕೋವಿಡ್ ಕೇರ್ ಸೆಂಟರುಗಳಲ್ಲಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಉಪಸಮಿತಿಗಳನ್ನು ರಚಿಸಿ,  ದೂರವಾಣಿ ಮೂಲಕ ಆಪ್ತ ಸಮಾಲೋಚನೆ, ಯೋಗ,ಕ್ರೀಡೆ, ಕೇರಂ,ಚೆಸ್, ಮನರಂಜನಾ ಚಟುವಟಿಕೆಗಳನ್ನು ಕೈಗೊಳ್ಳಬೇಕು.

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರ್ವಜನಿಕ ದಾನಿಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ಸೋಂಕಿತರಿಗೆ ಪೂರೈಸಬೇಕು.

ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಸರ್ಕಾರ ಸೂಕ್ತ ಮಾರ್ಗದರ್ಶನ ನೀಡಲಿದೆ.ಬೆಂಗಳೂರಿನ ಕೆಲವು ಖಾಸಗಿ ಆಸ್ಪತ್ರೆಗಳು ಟೆಲಿ ಕನ್ಸೆ ಲ್ಟಿಂಗ್  ನಡೆಸುತ್ತಿವೆ ಈ ಸೌಲಭ್ಯಗಳನ್ನು ಕೂಡ ಪಡೆಯಬಹುದು ಎಂದು  ಸಲಹೆ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಹುಬ್ಬಳ್ಳಿ ಕಿಮ್ಸ್ ನಲ್ಲಿ  ಮತ್ತು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೈಗೊಂಡಿರುವ ಸಿವಿಲ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಗೂಗಲ್ ವೆಬೆಕ್ಸ್ ಮೂಲಕ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *