ರಾಜ್ಯ

ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಲು ಸರ್ಕಾರಿ ನೌಕರರಿಗೆ ಸೂಚನೆ

ಧಾರವಾಡ prajakiran.com : ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ  ಪ್ರಾಧಿಕಾರ ,ವಿಶ್ಯ ವಿದ್ಯಾಲಯ, ಸಂಸ್ಥೆಯ ಅಧಿಕಾರಿ  ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್ . ಪಡಿತರ ಚೀಟಿಯನ್ನು ಪಡೆದುಕೊಂಡು , ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಇಂತಹ ಕಾರ್ಡುಗಳನ್ನು ತಕ್ಷಣ ಹಿಂದಿರುಗಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ.ವಿಜಯಭಾಸ್ಕರ್ ಸೂಚಿಸಿದ್ದಾರೆ.

ಬಿಪಿಎಲ್ ಕಾರ್ಡ ಹೊಂದುವುದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ. ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು ,ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ.



 ಸರ್ಕಾರಿ ಅಧಿಕಾರಿ ಹಾಗೂ ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನರೇಖೆಗಿಂತ ಕೆಳಗೆ ಬರುವುದಿಲ್ಲ.

ಆದುದರಿಂದ ಒಂದು ವೇಳೆ ಯಾವುದೇ ಸರ್ಕಾರಿ ಮತ್ತು ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾಲಯ, ಸಂಸ್ಥೆಯ ಅಧಿಕಾರಿ ಮತ್ತು ನೌಕರ ಅಥವಾ ಆತನ ಆಕೆಯ ಅವಲಂಬಿತ ಕುಟುಂಬ ಸದಸ್ಯ, ಈಗಾಗಲೇ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ.

ಈ ಸುತ್ತೋಲೆ ಹೊರಡಿಸಿದ ಒಂದು ತಿಂಗಳೊಳಗಾಗಿ,ಅದನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂತಿರುಗಿಸಿ ಅಮಾನ ರದ್ದುಪಡಿಸಿಕೊಳ್ಳತಕ್ಕದ್ದು,

ಒಂದು ವೇಳೆ, ಒಂದು ತಿಂಗಳ ನಂತರವೂ ಇಂತಹ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯ ಬಿ.ಪಿ.ಎಲ್, ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ದೂರುಗಳು ಸ್ವೀಕೃತವಾದರೆ, ಅಂತಹ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು

ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು  ಆದೇಶದಲ್ಲಿ ತಿಳಿಸಲಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *