ಅಂತಾರಾಷ್ಟ್ರೀಯ

ಬ್ರಿಟನ್ ನಿಂದ ಭಾರತಕ್ಕೆ ಬಂತು 95 ಆಕ್ಸಿಜನ್, 100 ವೆಂಟಿಲೇಟರ್

ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆಯ ದಿನೇ ದಿನೇ ಏರಿಕೆಯಾಗುತ್ತಲೇ ಇದೆ.

ಈ ಕೋವಿಡ್ ಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಭಾರತಕ್ಕೆ ವಿಶ್ವದ ಅನೇಕ ರಾಷ್ಟ್ರಗಳು ಬೆಂಬಲ ಸೂಚಿಸಿದ್ದು, ಇಂದು ಬ್ರಿಟನ್ ನಿಂದ 95 ಆಕ್ಸಿಜನ್ ಪೂರೈಕೆ ಪರಿಕರ ಭಾರತಕ್ಕೆ ಬಂದು ತಲುಪಿದೆ.

ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ಅಂತಾರಾಷ್ಟ್ರೀಯ ಸಹಕಾರ ಕಾರ್ಯ ನಿರತವಾಗಿದೆ.

ಇಂದು ಬೆಳಗ್ಗೆ ಬ್ರಿಟನ್ ನಿಂದ ಭಾರತಕ್ಕೆ 100 ವೆಂಟಿಲೇಟರ್ ಗಳು ಹಾಗೂ 95 ಆಕ್ಸಿಜನ್ ಪರಿಕರಗಳು ಸೇರಿದಂತೆ ಹಲವು ವೈದ್ಯಕೀಯ ಸಾಮಾಗ್ರಿಗಳು ದೆಹಲಿಗೆ ಬಂದು ತಲುಪಿದೆ ಎಂದು ತಿಳಿಸಿದ್ದಾರೆ.

ಮುಂದಿನ ಕೆಲವು ದಿನಗಳಲ್ಲಿ ಬ್ರಿಟನ್ ಸುಮಾರು 495 ಆಕ್ಸಿಜನ್, 120 ವೆಂಟಿಲೇಟರ್ ಗಳನ್ನು ಪೂರೈಕೆ ಮಾಡುವ ಭರವಸೆ ನೀಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *