ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಕಾರ್ಯಾಚರಣೆ ಜನದಟ್ಟಣೆಗೆ ಅನುಗುಣವಾಗಿ ಪುನ: ಪ್ರಾರಂಭ

ಹುಬ್ಬಳ್ಳಿ-ಧಾರವಾಡ prajakiran.com : ಅವಳಿ ನಗರ ಸಾರಿಗೆ ವಿಭಾಗದಿಂದ ನಾಳೆಯಿಂದ ಜೂ.21 ರಿಂದ ಘನ ಸರ್ಕಾರದಿಂದ ವಿಧಿಸಲಾದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಅಳವಡಿಸಿಕೊಂಡು ಹುಬ್ಬಳ್ಳಿ ನಗರ ಹಾಗೂ ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಕಾರ್ಯಾಚರಣೆಯನ್ನು ಜನದಟ್ಟಣೆಗೆ ಅನುಗುಣವಾಗಿ ಪುನ: ಪ್ರಾರಂಭಿಸಲಾಗುವುದು ಎಂದುಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ತಿಳಿಸಿದ್ದಾರೆ‌.

ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾಚರಣೆ ಮಾಡುವ ವಾಹನಗಳನ್ನು ಹಾಗೂ ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸೇಶನ್ ಮಾಡಲಾಗಿದೆ.

ಪ್ರಯಾಣಿಕರೆಲ್ಲರೂ ಪ್ರಯಾಣದ ಸಮಯದಲ್ಲಿ ಮಾಸ್ಕ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಾವಳಿಗಳನ್ನು ತಪ್ಪದೇ ಪಾಲಿಸಲು ಮನವಿ ಮಾಡಿದ್ದಾರೆ.

ಕೋವಿಡ್ ಲಸಿಕೆ ಹಾಕಿಸಿಕೊಂಡ ಹಾಗೂ rt-pcr ತಪಾಸಣೆಯಲ್ಲಿ ನೆಗೆಟಿವ್ ವರದಿ ಹೊಂದಿದ ಚಾಲಕರು, ನಿರ್ವಾಹಕರು ಹಾಗೂ ಬಿಆರ್ಟಿಎಸ್ ಪಾಸ್ ಆಪರೇಟರ್ ಗಳಿಗೆ ಕರ್ತವ್ಯ ಯೋಜನೆಯಲ್ಲಿ ಆದ್ಯತೆ ನೀಡಲಾಗುತ್ತಿದೆ.

ಅಲ್ಲದೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ನಗರ ಸಾರಿಗೆ ಒಂದನೇ ಘಟಕ ಹಾಗೂ ಧಾರವಾಡ ಬಿಆರ್ಟಿಎಸ್ ಘಟಕಗಳಲ್ಲಿ ವಿಭಾಗದ ಸಿಬ್ಬಂದಿಗಳಿಗೆ ಆರ್ಟಿ ಪಿಸಿಆರ್ ತಪಾಸಣೆಗೆ ಸಹ ವ್ಯವಸ್ಥೆ ಮಾಡಲಾಗಿದೆ ಎಂದು
ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ
ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ತಿಳಿಸಿದ್ದಾರೆ‌.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *