ರಾಜ್ಯ

ರಾಜ್ಯ ಬಜೆಟ್ ನಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ ಸೃಜನೆಗೆ ಒತ್ತು ಹೆಚ್ಚಿನ ಆದ್ಯತೆ

2023-24ನೇ ಸಾಲಿನ ಆಯವ್ಯಯ*

ಸನ್ಮಾನ್ಯ ಸಭಾಧ್ಯಕ್ಷರೆ,

1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ.

2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ.

3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದಿರುವುದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಜಾಗತಿಕ ಮನ್ನಣೆ ಸಿಕ್ಕಿರುವ ಪ್ರತೀಕವಾಗಿದೆ. ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. G-20 ಶೃಂಗಸಭೆಗೆ ಪೂರ್ವಭಾವಿಯಾಗಿ ರಾಜ್ಯದಲ್ಲಿ 14 ಸಭೆಗಳು ನಡೆಯುತ್ತಿರುವುದು, ರಾಜ್ಯದ ಪ್ರಗತಿಪರ ಚಿಂತನೆ ಹಾಗೂ ಮುನ್ನಡೆಯನ್ನು ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಲು ದೊರೆತ ಸುವರ್ಣಾವಕಾಶ ಎಂದು ನಾನು ಭಾವಿಸಿದ್ದೇನೆ.

ಹೋಗುತಿದೆ ಹಳೆಯ ಕಾಲ, ಹೊಸ ಕಾಲ ಬರುತಲಿದೆ
ಬರುತಲಿದೆ ಹೊಸ ದೃಷ್ಟಿ, ಹೊಸ ಬಯಕೆಗಳಲಿ
ಹೋಗುತಿದೆ ಹಳೆ ಬಾಳು, ಹೊಸ ಬಾಳು ಬರುತಲಿದೆ.
ಕುವೆಂಪು

4. ಈ ಆಯವ್ಯಯವು ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯದ ಭರವಸೆಯಾಗಿದೆ. ಈ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಉಜ್ವಲ ಭವಿಷ್ಯವನ್ನು ರೂಪಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ಸಾರ್ಥಕ ಭಾವದೊಂದಿಗೆ, ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ನಮ್ಮ ಕರ್ತವ್ಯಗಳು, ಗುರಿಗಳು ಹಾಗೂ ಫಲಿತಾಂಶಗಳ ದೂರದೃಷ್ಟಿಯೊಂದಿಗೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೇನೆ.

5. ಹಣಕಾಸು ವರ್ಷದ ಮೊದಲ ಎರಡು ತಿಂಗಳಿನಲ್ಲಿಯೇ ಬಹಳಷ್ಟು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಮೂಲಕ ಆಯವ್ಯಯದ ಸಕಾಲಿಕ ಹಾಗೂ ತ್ವರಿತ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮಾನವ ಅಭಿವೃದ್ಧಿ ಮತ್ತು ಆರ್ಥಿಕ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಿ, ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗಿದೆ.

6. ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಮಂತ್ರದೊಂದಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಇತರ ದುರ್ಬಲ ವರ್ಗದವರ ಸ್ವಾಭಿಮಾನದ, ಸ್ವಾವಲಂಬನೆಯ ಬದುಕಿಗೆ ಬೆಂಬಲ ನೀಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಕ್ರಮವಾಗಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸುವ ಹಾಗೂ 24,000 ಪೌರ ಕಾರ್ಮಿಕರ ಸೇವೆ ಕಾಖಾಯಂಗ ಮಾಡುವ ಐತಿಹಾಸಿಕ ಕ್ರಮಗಳನ್ನು ಕೈಗೊಂಡಿದ್ದೇವೆ. ಜನರ ಅಭ್ಯುದಯ, ಅಗತ್ಯಗಳನ್ನೇ ಕೇಂದ್ರೀಕರಿಸಿದ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಡಿ.ಬಿ.ಟಿ. ಮೂಲಕ ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸುವ ಮೂಲಕ ಪಾರದರ್ಶಕತೆ ಮೆರೆದಿದ್ದೇವೆ. ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಸವಲತ್ತುಗಳನ್ನು ನೀಡುವ ಮೂಲಕ ಶ್ರಮಿಕರ ಕುರಿತ ನಮ್ಮ ಕಾಳಜಿಯನ್ನು ಮೆರೆದಿದ್ದೇವೆ. ಆಸಿಡ್ ದಾಳಿ ಸಂತ್ರಸ್ತರ ಮಾಸಾಶನ 10 ಸಾವಿರ ರೂ. ಗಳಿಗೆ ಹೆಚ್ಚಳ, ವಿವಿಧ ಮಾಸಾಶನಗಳ ಹೆಚ್ಚಳ, ಜನರ ಮನೆ ಬಾಗಿಲಿಗೆ ಸೇವೆಗಳನ್ನು ಒದಗಿಸುವ ಯೋಜನೆಗಳು ಮತ್ತಿತರ ಉಪಕ್ರಮಗಳೊಂದಿಗೆ ಸ್ಪಂದನಾ ಶೀಲ ಸರ್ಕಾರದ ಕರ್ತವ್ಯ ನಿಭಾಯಿಸಿದ್ದೇವೆ.

7. ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಒಕ್ಕಲುತನದ ಪ್ರತಿ ಹಂತದಲ್ಲಿಯೂ ರೈತರಿಗೆ ಬೆಂಗಾವಲಾಗಿ ಪ್ರೋತ್ಸಾಹಿಸಿದ್ದೇವೆ. ಬೆಂಬಲ ಬೆಲೆ ಯೋಜನೆಯಡಿ ದಾಖಲೆ ಪ್ರಮಾಣದ ರಾಗಿ ಖರೀದಿ, ಕುಚ್ಚಲಕ್ಕಿ ಖರೀದಿಗೆ ಅವಕಾಶ ಒದಗಿಸುವುದರೊಂದಿಗೆ ಪ್ರವಾಹ ಸಂದರ್ಭದಲ್ಲಿ NDRF ಪರಿಹಾರ ಧನದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರವನ್ನು ದಾಖಲೆ ಅವಧಿಯಲ್ಲಿ ವಿತರಿಸಲಾಗಿದೆ. ತೊಗರಿ ಬೆಳೆ, ಅಡಿಕೆ ಬೆಳೆಗೆ ರೋಗ ಬಾಧೆ, ರಾಸುಗಳಿಗೆ ಚರ್ಮಗಂಟು ರೋಗಬಾಧೆ ಸಂಭವಿಸಿದಾಗಲೂ ಸರ್ಕಾರ ರೈತರ ನೆರವಿಗೆ ಧಾವಿಸಿದೆ. ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವುದನ್ನು ಉತ್ತೇಜಿಸಲು ಪ್ರಾರಂಭಿಸಲಾದ ರೈತ ವಿದ್ಯಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ ಚಾಲಕರು, ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಿದ್ದೇವೆ.

8. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ವಸ್ಥ, ಸುಶಿಕ್ಷಿತ, ಪ್ರಜ್ಞಾವಂತ ಪೀಳಿಗೆಯ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದೇವೆ. ಉದ್ಯೋಗ ಅವಕಾಶ ಸೃಜನೆಯ ಜೊತೆಗೆ, ಅದಕ್ಕೆ ತಕ್ಕಂತ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನೂ ನೀಡುವ ಮೂಲಕ ನಮ್ಮ ನಾಡಿನ ಯುವಕರು ಈ ಅವಕಾಶಗಳ ಸದ್ಬಳಕೆ ಮಾಡುವ ವಾತಾವರಣ ನಿರ್ಮಿಸುತ್ತಿದ್ದೇವೆ. ಪಾಲಿಟೆಕ್ನಿಕ್, ಐಟಿಐ ಹಾಗೂ ಎಂಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ, ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಉದ್ಯೋಗ ನೀತಿ ಮತ್ತಿತರ ಉಪಕ್ರಮಗಳು ಕೈಗಾರಿಕೆಯ ಬೇಡಿಕೆಗೆ ಅನುಗುಣವಾದ ಮಾನವ ಸಂಪನ್ಮೂಲ ನಿರ್ಮಾಣಕ್ಕೆ ಪೂರಕವಾಗಿವೆ. ಆರೋಗ್ಯ ಕೇಂದ್ರಗಳ ಉನ್ನತೀಕರಣ, ನಮ್ಮ ಕ್ಲಿನಿಕ್ ಮತ್ತಿತರ ಕಾರ್ಯಕ್ರಮಗಳ ಮೂಲಕ ದ್ವಿತೀಯ ಮತ್ತು ತೃತೀಯ ಆರೈಕೆಗಳು ಬಡವರಿಗೆ ಸುಲಭವಾಗಿ, ಸುಗಮವಾಗಿ, ಸ್ಥಳೀಯವಾಗಿ ಒದಗಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ.

9. ರಾಜ್ಯದಲ್ಲಿ ಏಕರೂಪದ ಅಭಿವೃದ್ಧಿಯ ಆಶಯದೊಂದಿಗೆ ಕಳೆದ ವರ್ಷ ದೇಶದಲ್ಲಿಯೇ ಮೊದಲ ಬಾರಿಗೆ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಪರಿಕಲ್ಪನೆಯನ್ನು ಪರಿಚಯಿಸಲಾಯಿತು. ಈ ತಾಲ್ಲೂಕುಗಳಲ್ಲಿ ಆಯಾ ಕ್ಷೇತ್ರದಲ್ಲಿ ಸಮಗ್ರ ಹಾಗೂ ಸಂಪೂರ್ಣ ಅಭಿವೃದ್ಧಿಗೆ ಫಲಿತಾಂಶ ಕೇಂದ್ರಿತ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಫಲ ನೀಡಲಿವೆ.

10. ದಾವೊಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಹಾಗೂ ನವೆಂಬರ್ನಲ್ಲಿ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸುವ ಮೂಲಕ ರಾಜ್ಯಕ್ಕೆ ಭಾರಿ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸಲಾಗಿದೆ. ಈ ಒಪ್ಪಂದಗಳು ಕಾರ್ಯರೂಪಕ್ಕೆ ಬರಲು ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ. ಭಾರತ ಸರ್ಕಾರದ ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಇಲಾಖೆಯು Ease of Doing Business ನಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ ಎಂದು ಗುರುತಿಸಿದೆ. ಬೆಂಗಳೂರಿನಿಂದಾಚೆಗೂ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಿರುವುದು, ರಾಜ್ಯದ ಎಲ್ಲ ಪ್ರದೇಶಗಳ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣ, ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನ ಹಾಗೂ ಜಲಸಾರಿಗೆಯ ಅವಕಾಶಗಳ ಸದ್ಬಳಕೆಗೆ ಆದ್ಯತೆ, ಬಂದರುಗಳ ಅಭಿವೃದ್ಧಿಗೆ ನೀಡಲಾಗುತ್ತಿರುವ ಮಹತ್ವ ಭವಿಷ್ಯದ ದಿನಗಳಲ್ಲಿ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಲಿದೆ.

11. ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಸರ್ಕಾರವು, ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಸತತವಾಗಿ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುತ್ತಾ ಬಂದಿದೆ. ಈ ವರ್ಷದ ಕೇಂದ್ರ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಆಯವ್ಯಯದಲ್ಲಿ 5,300 ಕೋಟಿ ರೂ. ಒದಗಿಸಿರುವುದು, ರೈಲ್ವೆ ಯೋಜನೆಗಳಿಗೆ ಅತಿ ಹೆಚ್ಚು ಅಂದರೆ, 7,561 ಕೋಟಿ ರೂ. ಒದಗಿಸಿರುವುದು, ಕರಾವಳಿ ನಿಯಂತ್ರಣ ವಲಯದ ನಿರ್ಬಂಧಗಳನ್ನು ಸಡಿಲಿಸಿ, ಕರಾವಳಿಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿರುವುದು, ರಾಷ್ಟ್ರೀಯ ಹೆದ್ದಾರಿ, ಬಂದರು, ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೆಂಬಲ ಡಬಲ್ ಇಂಜಿನ್ ಸರ್ಕಾರದ ಕ್ರಿಯಾಶೀಲತೆಗೆ ನಿದರ್ಶನವಾಗಿದೆ.

12. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು ಮುಂದಿನ 25 ವರ್ಷಗಳು ಅಮೃತ ಕಾಲ, ಕರ್ತವ್ಯದ ಕಾಲ ಎಂದು ಕರೆ ನೀಡಿದ್ದಾರೆ. ಭವ್ಯ ಕರ್ನಾಟಕ ನಿರ್ಮಾಣ ಮಾಡುವ ಆಶಯ ಈ ಆಯವ್ಯಯದ್ದಾಗಿದೆ. ಸ್ವಸ್ಥ, ಸುಶಿಕ್ಷಿತ, ಸ್ವಾವಲಂಬಿ, ಸ್ವಾಭಿಮಾನಿ ಸಮಾಜ ನಿರ್ಮಾಣದ ಮೂಲಕ ಅಭಿವೃದ್ಧಿಯ ಅಮೃತ ಎಲ್ಲರೂ ಸವಿಯುವಂತಾಗಬೇಕು. ಇಂತಹ ಭವಿಷ್ಯದ ಮುನ್ನೋಟವಿರುವ, ವಾಸ್ತವದ ಸವಾಲುಗಳನ್ನು ಮೆಟ್ಟಿ, ಸಮೃದ್ಧ ಕರ್ನಾಟಕದ ಗುರಿಯನ್ನು ಸಾಧಿಸುವ ಹಂಬಲದೊಂದಿಗೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೇನೆ.

ರಾಜ್ಯದ ಅರ್ಥವ್ಯವಸ್ಥೆ

13. ರಾಷ್ಟ್ರೀಯ ಅಂಕಿ ಅಂಶಗಳ ಕಛೇರಿಯಿಂದ ಬಿಡುಗಡೆಯಾದ ಜಿಎಸ್ಡಿಪಿ GSDP ಅಂದಾಜುಗಳಂತೆ ರಾಜ್ಯದ ಆರ್ಥಿಕತೆಯು ಕೋವಿಡ್ ಪೂರ್ವ ಮಟ್ಟವನ್ನು ಮೀರಿ ಚೇತರಿಸಿಕೊಂಡಿದೆ ಎಂದು ಪುನರುಚ್ಚರಿಸಿದೆ. ಆದಾಗ್ಯೂ, ಜಾಗತಿಕ ಮಟ್ಟದಲ್ಲಿನ ಬೆಳವಣಿಗೆಗಳಿಂದ ರಾಜ್ಯವು 2022ರಲ್ಲಿ ಹಣದುಬ್ಬರದ ಒತ್ತಡಕ್ಕೆ ಒಳಗಾಯಿತು. RBI ನಿಂದ ಸಮಯೋಚಿತ ಕ್ರಮಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರ ಜನಪರ ನೀತಿಗಳಿಂದ ಹಣದುಬ್ಬರವನ್ನು ನಿಯಂತ್ರಿಸಲು ಸಾಧ್ಯವಾಗಿದೆ.

14. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಮುಂಗಡ ಅಂದಾಜಿನಂತೆ 2022-23ರಲ್ಲಿ ರಾಜ್ಯವು ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. ವಲಯವಾರು ಬೆಳವಣಿಗೆಯನ್ನು ಗಮನಿಸಿದಾಗ, ರಾಜ್ಯದ ಆರ್ಥಿಕತೆಯ ಬೆಳವಣಿಗೆಗೆ ಸೇವಾ ಮತ್ತು ಕೈಗಾರಿಕೆ ವಲಯವು ಪ್ರಮುಖ ಕಾರಣವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ 2022-23ರಲ್ಲಿ ಸೇವಾ ವಲಯವು ಶೇ.9.2 ರಷ್ಟು ಮತ್ತು ಕೈಗಾರಿಕಾ ವಲಯವು ಶೇ.5.1 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಅಕಾಲಿಕ ಹವಾಮಾನ ಪರಿಸ್ಥಿತಿಗಳ ಹೊರತಾಗಿಯು ಕೃಷಿ ವಲಯವು ಶೇ.5.5 ರಷ್ಟು ಬೆಳವಣಿಗೆಯನ್ನು ಹೊಂದಿದೆ. ಇದೆಲ್ಲವುಗಳ ಪರಿಣಾಮವಾಗಿ ರಾಜ್ಯದ ತಲಾ ಆದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂ. ಗಳಿಂದ 3.32 ಲಕ್ಷ ರೂ. ಗಳಿಗೆ ಹೆಚ್ಚಿದೆ.

15. ಆರ್ಥಿಕ ವರ್ಷ 2022-23ರ ಹೆಚ್ಚಿನ ಜಿ.ಎಸ್.ಡಿ.ಪಿ. GSDP ಬೆಳವಣಿಗೆ ದರವು ಬಂಡವಾಳ ವೆಚ್ಚವನ್ನು ಹೆಚ್ಚಿಸಲು, ಹೂಡಿಕೆಯನ್ನು ಆಕರ್ಷಿಸಲು ಮತ್ತು ಬೃಹತ್ ಮಟ್ಟದಲ್ಲಿ ಉದ್ಯೋಗವನ್ನು ಸೃಷ್ಠಿಸಲು ರಾಜ್ಯ ಸರ್ಕಾರವು ಕೈಗೊಂಡ ಕೇಂದ್ರೀಕೃತ ಕ್ರಮಗಳಿಗೆ ಪ್ರತಿಬಿಂಬವಾಗಿದೆ.

ರಾಜ್ಯದ ಹಣಕಾಸು ಪರಿಸ್ಥಿತಿ

16. 2022-23ರಲ್ಲಿ ರಾಜ್ಯದ ಹಣಕಾಸಿನ ಪರಿಸ್ಥಿತಿಯು ಸದೃಢವಾಗಿದ್ದು, ಉತ್ತಮ ಬೆಳವಣಿಗೆ ಕಂಡಿದೆ. ಆರ್ಥಿಕ ಚಟುವಟಿಕೆಗಳ ವೃದ್ಧಿಯಿಂದ ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ.

17. ಆರ್ಥಿಕ ಬೆಳವಣಿಗೆಯೊಂದಿಗೆ ಬೇಡಿಕೆ ಹೆಚ್ಚಾದ್ದರಿಂದ ವಾರ್ಷಿಕ GST ಸಂಗ್ರಹಣೆಯು 2021-22ರ ಜನವರಿ ತಿಂಗಳ ಅಂತ್ಯಕ್ಕೆ ಹೋಲಿಸಿದರೆ ಶೇ.26 ರಷ್ಟು ಬೆಳವಣಿಗೆಯಾಗಿರುತ್ತದೆ. ಅದೇ ರೀತಿ ಮೋಟಾರು ವಾಹನಗಳ ತೆರಿಗೆ ಮತ್ತು ಮುದ್ರಾಂಕ ಮತ್ತು ನೋಂದಣಿ ಶುಲ್ಕವು ಸಹ ಹೆಚ್ಚಳವಾಗಿರುತ್ತದೆ. ಒಟ್ಟಾರೆಯಾಗಿ, ಆರ್ಥಿಕ ವರ್ಷ 2021-22ಕ್ಕೆ ಹೋಲಿಸಿದರೆ ಜನವರಿ ಅಂತ್ಯದವರೆಗೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹವು ಶೇ. 21 ರಷ್ಟು ಹೆಚ್ಚಾಗಿದೆ.

18. ಕೇಂದ್ರ ಸರ್ಕಾರದ ನೇರ ಮತ್ತು ಪರೋಕ್ಷ ತೆರಿಗೆಯ ಹೆಚ್ಚಳದಿಂದ ರಾಜ್ಯದ ತೆರಿಗೆ ಪಾಲು 4,813 ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ. ಮುಂದುವರೆದು ಕೇಂದ್ರ ಸರ್ಕಾರವು 2023-24 ನೇ ಸಾಲಿಗೆ ರಾಜ್ಯಕ್ಕೆ 37,252 ಕೋಟಿ ರೂ.ಗಳ ತೆರಿಗೆ ಪಾಲನ್ನು ಅಂದಾಜಿಸಿದೆ. ಇದು 2022-23ರ ಆಯವ್ಯಯ ಅಂದಾಜಿಗೆ ಹೋಲಿಸಿದರೆ ಶೇ.25 ರಷ್ಟು ಹೆಚ್ಚಾಗಿದೆ. ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದರಿಂದ ರಾಜ್ಯ ಸರ್ಕಾರವು ವಿತ್ತೀಯ ಸುಸ್ಥಿರತೆಯನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ.

19. ರಾಜ್ಯದ ಸ್ವಂತ ರಾಜಸ್ವ ಸಂಗ್ರಹಣೆ ಮತ್ತು ಕೇಂದ್ರ ಸರ್ಕಾರದ ತೆರಿಗೆ ಪಾಲಿನ ಹೆಚ್ಚಳವು 2022-23ರ ಪರಿಷ್ಕೃತ ಅಂದಾಜಿನಲ್ಲಿ ರಾಜ್ಯದ ರಾಜಸ್ವ ಕೊರತೆಯನ್ನು 8,703 ಕೋಟಿ ರೂ.ಗಳಷ್ಟು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರೊಂದಿಗೆ ವಿತ್ತೀಯ ಸುಸ್ಥಿರತೆಯ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಅಂದಾಜಿಸಿದ ಸಾಲವನ್ನು ಪೂರ್ಣಪ್ರಮಾಣದಲ್ಲಿ ಪಡೆಯದೆ ನಿಯಂತ್ರಿಸಲಾಗುವುದು.

20. ಕೋವಿಡ್-19 ಪಿಡುಗಿನ ಕೆಲವು ವರ್ಷಗಳನ್ನು ಹೊರತುಪಡಿಸಿದರೆ, ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ, 2002ರಲ್ಲಿ ನಿರ್ದಿಷ್ಟಪಡಿಸಲಾದ ವಿತ್ತೀಯ ಮಾನದಂಡಗಳನ್ನು ರಾಜ್ಯವು ಪಾಲಿಸುತ್ತಾ ಬಂದಿದೆ. ಆದಾಗ್ಯೂ ಕೋವಿಡ್-19 ಪಿಡುಗಿನಿಂದಾಗಿ, ರಾಜ್ಯದ ಆರ್ಥಿಕ ಪರಿಸ್ಥಿತಿಯು ತೀವ್ರವಾಗಿ ಬಾಧಿಸಲ್ಪಟ್ಟಿದ್ದು, ಇದರಿಂದ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳ ಪಾಲನೆಯಾಗಿಲ್ಲ.

21. ಆದರೆ, ನಮ್ಮ ಸರ್ಕಾರವು ಅನುಷ್ಠಾನಗೊಳಿಸಿದ ಹಲವಾರು ಪ್ರಗತಿಪರ ನೀತಿಗಳ ಪರಿಣಾಮವಾಗಿ ಹಾಗೂ ವಿತ್ತೀಯ ಕ್ರೋಡೀಢೀಕರಣ ಮತ್ತು ವಿತ್ತೀಯ ಶಿಸ್ತಿಗೆ ತೋರಿದ ಅಚಲ ಬದ್ಧತೆಯಿಂದಾಗಿ ರಾಜ್ಯದ ಆರ್ಥಿಕತೆಯನ್ನು ಪುನಃ ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯವಾಗಿರುತ್ತದೆ. ರಾಜಸ್ವ ಸಂಗ್ರಹಣೆ ಇಲಾಖೆಗಳಿಗೆ ತೆರಿಗೆ ಸಂಗ್ರಹಣೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಿ ಹಾಗೂ ತೆರಿಗೆ ಸಿಬ್ಬಂದಿಗಳನ್ನು ನಿರಂತರವಾಗಿ ಪ್ರೋತ್ಸಾಹಿಸಿ, ರಾಜ್ಯದ ರಾಜಸ್ವಗಳನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದೇವೆನೆ. ನಮ್ಮ ಸರ್ಕಾರದ ಸಂಘಟಿತ ಪ್ರಯತ್ನಗಳ ಫಲವಾಗಿ ಇಂದು, ನಾನು ಈ ಘನ ಸದನದಲ್ಲಿ 2023-24ನೇ ಸಾಲಿನ ಆಯವ್ಯಯವನ್ನು ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮ, 2002ರ ಎಲ್ಲಾ ಮಾನದಂಡಗಳನ್ನು ಪೂರೈಸುವ ಮೂಲಕ ರಾಜಸ್ವ ಹೆಚ್ಚಳದ ಆಯವ್ಯಯವನ್ನು (Revenue Surplus Budget) ಮಂಡಿಸುತ್ತಿದ್ದೇನೆಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ.

 *ವಲಯ 2 ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ*

ಸುತ್ತಲು ಕವಿಯುವ ಕತ್ತಲೆಯೊಳಗೆ
ಪ್ರೀತಿಯ ಹಣತೆಯ ಹಚ್ಚೋಣ
ಮತಗಳೆಲ್ಲವು ಪಥಗಳು ಎನ್ನುವ
ಹೊಸ ಎಚ್ಚರದಲ್ಲಿ ಬದುಕೋಣ. – ಡಾ. ಜಿ.ಎಸ್. ಶಿವರುದ್ರಪ್ಪ

93. ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ. ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

94. ಕಳೆದ ಆಯವ್ಯಯದಲ್ಲಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳನ್ನು ಗುರುತಿಸಿ ಅಂತಹ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕತೆ ಸಂಬಂಧಿಸಿದ ಸೂಚ್ಯಂಕಗಳನ್ನು ರಾಜ್ಯ ಸರಾಸರಿಗಿಂತ ಹೆಚ್ಚು ಮಾಡಲು 3,000 ಕೋಟಿ ರೂ. ಗಳ ಯೋಜನೆಗಳನ್ನು ನಾನು ಘೋಷಿಸಿದ್ದೇನೆ. ಇದರಡಿಯಲ್ಲಿ ತೆಗೆದುಕೊಂಡಿರುವ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿಯಲ್ಲಿ ಮೂಲಭೂತ ಸೌಕರ್ಯ ಹಾಗೂ ಅಗತ್ಯ ಮಾನವ ಸಂಪನ್ಮೂಲಗಳನ್ನು ಒದಗಿಸಿ ಸರ್ಕಾರದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಕ್ರಮವಹಿಸಲಾಗುವುದು.

95. 2022-23ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಿಸಲಾಗಿದೆ. ಇದರಿಂದ 4.45 ಲಕ್ಷ ಜನರಿಗೆ ಫಲ ದೊರೆತಿದ್ದು, ಒಟ್ಟು 775 ಕೋಟಿ ರೂ. ಗಳನ್ನು ಪ್ರಸಕ್ತ ವರ್ಷದಲ್ಲಿ ಬಿಡುಗಡೆ ಮಾಡಲಾಗಿದೆ.

96. ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ. ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

97. ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಿಗೂ ವಿಸ್ತರಿಸಲಾಗುವುದು.

98. ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ʻಮುಖ್ಯಮಂತ್ರಿ ವಿದ್ಯಾಶಕ್ತಿʼ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.

99. ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ಸುಗಳ ಸೇವೆಯನ್ನು ಅವಲಂಬಿಸಿರುತ್ತಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕಳಿಂದ 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು ʻಮಕ್ಕಳ ಬಸ್ಸುʼ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಉದ್ದೇಶಿಸಲಾಗಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

100. ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿದೆ. ಈ ನಿಟ್ಟಿನಲ್ಲಿ ವಿವೇಕ ಯೋಜನೆಯಡಿಯಲ್ಲಿ 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು 1,194 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ ಇಲಾಖೆಯ ಇತರೆ ಯೋಜನೆಗಳಡಿ ಹೆಚ್ಚುವರಿಯಾಗಿ 1,955 ಕೊಠಡಿಗಳನ್ನು 382 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಲಾಗಿದೆ. ಒಟ್ಟಾರೆಯಾಗಿ ಹಿಂದಿನ ವರ್ಷದಲ್ಲಿ 1,576 ಕೋಟಿ ರೂ. ಗಳ ವೆಚ್ಚದಲ್ಲಿ 9,556 ಶಾಲಾ ಕಾಲೇಜುಗಳ ಕೊಠಡಿಗಳನ್ನು ನಿರ್ಮಾಣ ಮಾಡಲು ಕೈಗೊಂಡಿರುವ ಈ ಕ್ರಮವು ರಾಜ್ಯದ ಇತಿಹಾಸದಲ್ಲಿ ದಾಖಲೆಯಾಗಿದೆ. ಈ ಎಲ್ಲಾ ಕೆಲಸಗಳು ತ್ವರಿತಗತಿಯಲ್ಲಿ ಮುಂದುವರೆಯುತ್ತಿದ್ದು, ಶೀಘ್ರದಲ್ಲಿಯೇ ಪೂರ್ಣ ಗೊಳಿಸಲಾಗುವುದು.

101. ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆಯಾದ PM SHRI ಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

102. ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7,750 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸಂಪೂರ್ಣ ಬೇಡಿಕೆಯನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳು ಪೂರ್ಣಗೊಳ್ಳಲಿವೆ. ಉಳಿದ 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು. ಇದಕ್ಕೆ ಒಟ್ಟು 80 ಕೋಟಿ ರೂ. ಹಂಚಿಕೆ ಮಾಡಿದ್ದು, ಅದರಲ್ಲಿ 50 ಕೋಟಿ ರೂ. ಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒದಗಿಸಲಾಗಿದೆ.
103. ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ಗಳ ವೆಚ್ಚದಲ್ಲಿ ಈ ಕೆಳಗಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು.

a) ಕಳೆದ ವರ್ಷದಲ್ಲಿ 2,284 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ್ದು, ಪ್ರಸಕ್ತ ವರ್ಷದಲ್ಲಿ ಹೆಚ್ಚುವರಿಯಾಗಿ 1,230 ಕೊಠಡಿಗಳ ನಿರ್ಮಾಣ.

b) ಹಳೆಯ ಮತ್ತು ಅಧಿಕ ಮಳೆಯಿಂದಾಗಿ ಹಾನಿಯಾಗಿರುವ 2,777 ಕೊಠಡಿಗಳ ದುರಸ್ತಿ.

c) ಅಧಿಕ ದಾಖಲಾತಿಯಿರುವ ಶಾಲಾ-ಕಾಲೇಜುಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ.
d) ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ 260 ತರಗತಿ ಕೊಠಡಿಗಳ ನಿರ್ಮಾಣ.
e) ಆಯ್ದ 60 ತಾಲ್ಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜನ್ನು ಗುರುತಿಸಿ ವಿಜ್ಞಾನ ಶಿಕ್ಷಣಕ್ಕಾಗಿ ಅಗತ್ಯ ಸೌಲಭ್ಯ ನೀಡುವ ಮೂಲಕ ಆದರ್ಶ ಪದವಿ ಪೂರ್ವ ಕಾಲೇಜುಗಳ ಅಭಿವೃದ್ಧಿಗೆ ಕ್ರಮ.
f) 30 ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಗಳಲ್ಲಿ Dormitory ನಿರ್ಮಾಣ, 47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್ರೂಮ್ ಗಳ ಅಭಿವೃದ್ಧಿ.

104. ಇದರೊಂದಿಗೆ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ಹೆಚ್ಚಿಸಿ, ಫಲಿತಾಂಶ ಉತ್ತಮ ಪಡಿಸಲು 135 ಕೋಟಿ ರೂ. ಅನುದಾನದಲ್ಲಿ ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:

a) ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಆವಿಷ್ಕಾರಾತ್ಮಕ ಮನೋಭಾವ ಬೆಳೆಸಲು 73 ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ “ʻಸೃಷ್ಟಿʼ” ಟಿಂಕರಿಂಗ್ ಪ್ರಯೋಗಾಲಯಗಳ ಸ್ಥಾಪನೆ.
b) ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಂದಿಲ್ಲದ 23 ತಾಲ್ಲೂಕುಗಳಲ್ಲಿ ಹೊಸದಾಗಿ ಶಾಲೆಗಳನ್ನು ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು.
c) ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗ್ರಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್ ಕಾರ್ನರ್ಗಳನ್ನು ಸ್ಥಾಪಿಸಲಾಗುವುದು.
d) ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಲ್ಯಾಬ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ ʻಅಭ್ಯುದಯʼ ಕಾರ್ಯಕ್ರಮ ಅನುಷ್ಠಾನ.

105. ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ 7 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಮತ್ತು ಕಡಿಮೆ ಮಾನವ ಸಂಪನ್ಮೂಲಗಳನ್ನು ಒಳಗೊಂಡಂತೆ ಸ್ಥಾಪಿಸಲಾಗುವುದು ಮತ್ತು ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರದಲ್ಲಿರುವ ಪಾಲಿಟೆಕ್ನಿಕನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನಾಗಿ ಉನ್ನತೀಕರಿಸಲಾಗುವುದು.

106. ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (KIT) ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ತಳ್ಕಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಎಂಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಪ್ರೊ. ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸದರಿ ಸಮಿತಿಯ ಶಿಫಾರಸ್ಸಿನನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ಗಳನ್ನು ನೀಡಲಾಗಿದೆ.

107. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

108. ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ. ಸಿ.ಎನ್.ಆರ್. ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.

109. ʻಹಳ್ಳಿ ಮುತ್ತುʼ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.

110. ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹಧನ ನೀಡಲಾಗುವುದು.

111. ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯೊಳಗಿರುವ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.

112. ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ Academic Bank of Credits ಮತ್ತು Digilocker ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು. ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ ಹಾಗೂ ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪ ವ್ಯವಸ್ಥೆ ಕಲ್ಪಿಸಲಾಗುವುದು.

113. ಪ್ರತಿ ಜಿಲ್ಲೆಯಲ್ಲಿ ಒಂದರಂತೆ, ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ಗಳಿಗೆ ʻವೃದ್ಧಿʼ ಯೋಜನೆಯಡಿ ತಲಾ 2 ಕೋಟಿ ರೂ. ನಂತೆ ಒಟ್ಟು 124 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇವುಗಳನ್ನು ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳಾಗಿ ರೂಪಿಸಲಾಗುವುದು.

114. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಅನ್ನು ಪ್ರಾರಂಭಿಸಲಾಗುವುದು.

115. ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ದೇಶಕ್ಕಾಗಿ ಸಮರ್ಪಣಾ ಭಾವವನ್ನು ಮೂಡಿಸಲು ರಾಜ್ಯದಲ್ಲಿ ಈ ವರ್ಷ 2 ಹೊಸ ಎನ್.ಸಿ.ಸಿ. ಘಟಕಗಳನ್ನು ಸ್ಥಾಪಿಸಲಾಗುವುದು.

116. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಉನ್ನತ ಶಿಕ್ಷಣವನ್ನು ಬಲಪಡಿಸಲು ಒಟ್ಟು 125 ಕೋಟಿ ರೂ. ವೆಚ್ಚದಲ್ಲಿ ಈ ಕೆಳಕಂಡ ಯೋಜನೆಗಳನ್ನು ರೂಪಿಸಲಾಗಿದೆ.

a) ಕೊಠಡಿಗಳು, ಶೌಚಾಲಯಗಳು ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ನಿರ್ಮಾಣ ಮಾಡಲಾಗುವುದು.
b) “`ವಿದ್ಯಾವರ್ಧಿನಿ”’ ಯೋಜನೆಯಡಿ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ಶೈಕ್ಷಣಿಕ ಉಪಕರಣಗಳನ್ನು ಒದಗಿಸಲಾಗುವುದು.
c) ವಿದ್ಯಾರ್ಥಿನಿಯರ ದೈಹಿಕ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ ನೀಡಲಾಗುವುದು.

117. ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ’ ಎಂಬ ಧ್ಯೇಯದೊಂದಿಗೆ ಆರೋಗ್ಯ ಸೇವೆಗಳನ್ನು ತಳಹಂತದಲ್ಲಿಯೂ ಬಲಪಡಿಸಲು ಹಾಗೂ ಜನರಿಗೆ ಸ್ಥಳೀಯವಾಗಿ, ಸುಲಭವಾಗಿ ತಜ್ಞರ ಸೇವೆಯನ್ನು ಒದಗಿಸಲು 2022-23ನೇ ಸಾಲಿನಲ್ಲಿ ಘೋಷಿಸಿದಂತೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 53 ಸಮುದಾಯ ಆರೋಗ್ಯ ಕೇಂದ್ರಗಳು, 26 ತಾಲ್ಲೂಕು ಆಸ್ಪತ್ರೆ ಹಾಗೂ ಒಂದು1 ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ, ಲೋಕಾರ್ಪಣೆ ಮಾಡಲಾಗಿದ್ದು, ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಇದಕ್ಕಾಗಿ ಒಟ್ಟು 781 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ರಾಜ್ಯದ 45 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗಿದೆ.

118. ರಾಜ್ಯದ ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, 350272 ನಮ್ಮ ಕ್ಲಿನಿಕ್ ಗಳು ಕಾರ್ಯಾರಂಭ ಮಾಡಿವೆ. ಕಳೆದ ವರ್ಷದಲ್ಲಿ ಅನುಮೋದನೆಯಾಗಿರುವ 128 ಮಹಿಳಾ ಸ್ವಾಸ್ಥ್ಯ ಕೇಂದ್ರಗಳಲ್ಲಿ 53 ಮಹಿಳಾ ಸ್ವಾಸ್ಥ್ಯ ಕೇಂದ್ರಗಳನ್ನು ಪೂರ್ಣಗೊಳಿಸಲಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಆರೋಗ್ಯ ಸೇವೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಇವು ಮಹತ್ತರ ಹೆಜ್ಜೆಗಳಾಗಿವೆ.

119. ತಾಲ್ಲೂಕು ಆಸ್ಪತ್ರೆಗಳಿಲ್ಲದ ಖಾನಾಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು.

120. PM-ABHIM ಅಡಿಯಲ್ಲಿ ತೃತೀಯ ಹಂತದ ಆರೈಕೆಯನ್ನು ಒದಗಿಸಲು ಕೋಲಾರ, ಬಾಗಲಕೋಟೆ, ಯಾದಗಿರಿ, ಮಂಗಳೂರುಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಮತ್ತು ದೊಡ್ಡಬಳ್ಳಾಪುರ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಬ್ಲಾಕ್ ಗಳನ್ನು ಹಾಗೂ ತುಮಕೂರು ಮತ್ತು ಬೆಂಗಳೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ ಗಳನ್ನು ಸ್ಥಾಪಿಸಲಾಗುವುದು.

121. ರಾಜ್ಯದಲ್ಲಿ ತಾಯಿಮರಣ ಹಾಗೂ ಶಿಶುಮರಣ ದರವನ್ನು ಇಳಿಸಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದ್ದು, ಇದರಿಂದಾಗಿ ಕಳೆದ 3 ವರ್ಷದಲ್ಲಿ ತಾಯಿಮರಣ ದರವನ್ನು ಪ್ರತಿ ಲಕ್ಷಕ್ಕೆ 83 ರಿಂದ 69 ಕ್ಕೆ ಮತ್ತು ಶಿಶುಮರಣ ದರವನ್ನು ಪ್ರತಿ ಸಾವಿರಕ್ಕೆ 29 ರಿಂದ 19 ಕ್ಕೆ ಇಳಿಸಲು ಸಾಧ್ಯವಾಗಿರುತ್ತದೆ. ಗರ್ಭಿಣಿಯರಿಗೆ, ತಾಯಂದಿರಿಗೆ ಮತ್ತು ನವಜಾತ ಶಿಶುಗಳಿಗೆ ಉತ್ತಮ ಗುಣಮಟ್ಟದ ಆರೈಕೆಯನ್ನು ನೀಡುವ ದೃಷ್ಟಿಯಿಂದ ರಾಜ್ಯದಲ್ಲಿ 10 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು 165 ಕೋಟಿ ರೂ. ಗಳಲ್ಲಿ ಪ್ರಾರಂಭಿಸಲು ಕ್ರಮವಹಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಮುಂದಿನ ದಿನಗಳಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಯ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸಲಾಗುವುದು.

122. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

123. ರಾಜ್ಯದಲ್ಲಿ ರಕ್ತಹೀನತೆಯ ದೊಡ್ಡ ಸವಾಲನ್ನು ಎದುರಿಸಲು ಬಹು ಆಯಾಮಗಳ ದೃಷ್ಟಿಕೋನದೊಂದಿಗೆ ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಇದರಡಿಯಲ್ಲಿ Life Cycle Approach ಮೂಲಕ ಆರೋಗ್ಯ ಪುಷ್ಟಿ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಮತ್ತು ಸಂತಾನೋತ್ಪತ್ತಿ ವಯಸ್ಸಿನ (15-49 ವರ್ಷಗಳು) ಮಹಿಳೆಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ನಿವಾರಿಸಲು ಉದ್ದೇಶಿತ ಪರೀಕ್ಷೆ, ಚಿಕಿತ್ಸೆ, ಜನಜಾಗೃತಿ ಹಾಗೂ ತರಬೇತಿಗೆ 100 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

124. ʻʼಮನೆ ಮನೆಗೆ ಆರೋಗ್ಯʼ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಲಾಗುವುದು. ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ. ಇದರೊಂದಿಗೆ ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸಲು ಸಹ ಕ್ರಮವಹಿಸಲಾಗುವುದು.

125. ಅತಿ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಔಷಧಿಗಳನ್ನು ಒದಗಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು ರಾಜ್ಯಾದ್ಯಂತ ಇನ್ನಷ್ಟು ಹೆಚ್ಚಿಸಲಾಗುವುದು.

126. ಜನಸಾಮಾನ್ಯರ ಮೆದುಳಿನ ಆರೋಗ್ಯ ಕಾಪಾಡಲು ಮತ್ತು ಅದರ ಬಗ್ಗೆ ಅರಿವು ಮೂಡಿಸಲು ನಿಮ್ಹಾನ್ಸ್ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು.

127. ಎಲ್ಲಾ ಜಿಲ್ಲೆಗಳಲ್ಲಿ Hand Held X-ray ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ. ಪ್ರಸ್ತಾಪಿಸಲಾಗಿದೆ.

128. ಕ್ಯಾನ್ಸರ್ ರೋಗವು ಆರಂಭಿಕ ಹಂತದಲ್ಲಿಯೇ ಪತ್ತೆಯಾದರೆ ಸಕಾಲಿಕ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ʻಜೀವಸುಧೆʼ ಎಂಬ ವ್ಯಾಪಕ ತಪಾಸಣಾ (Testing and Screening) ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುವುದು. ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಯನ್ನು ಪಡೆಯಲು ತೃತೀಯ ಆರೈಕೆ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ ಒದಗಿಸಲಾಗುವುದು.

129. ಹಿಂದಿನ ಆಯವ್ಯಯದಲ್ಲಿ ಘೋಷಿಸಿದಂತೆ ಉಚಿತ ಡಯಾಲಿಸಿಸ್ ಸೇವೆಯನ್ನು 30,000 ಡಯಾಲಿಸಿಸ್ ಸೈಕಲ್ ಗಳಿಂದ 60,000 ಸೈಕಲ್ ಗಳಿಗೆ ಹೆಚ್ಚಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 1 ಲಕ್ಷ ಡಯಾಲಿಸಿಸ್ ಸೈಕಲ್ ಗಳಿಗೆ ಹೆಚ್ಚಿಸಲಾಗುವುದು.

130. ಮಕ್ಕಳ ಆರೋಗ್ಯದ ರಕ್ಷಣೆಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವರ್ಷಕ್ಕೆರಡು ಬಾರಿ ನವಜಾತ ಶಿಶುಗಳಿಂದ 6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮಾಡಲು ʻ“ವಾತ್ಸಲ್ಯʼ” ಯೋಜನೆ ರೂಪಿಸಲಾಗುವುದು. ಇದರ ಮೂಲಕ ಮಕ್ಕಳಲ್ಲಿ ಆರೋಗ್ಯ ನ್ಯೂನತೆಗಳು ಹಾಗೂ ಸಮಸ್ಯೆಗಳನ್ನು ಪ್ರಾರಂಭದಲ್ಲಿಯೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಮಕ್ಕಳಲ್ಲಿ ಸಂಭಾವ್ಯ ದೈಹಿಕ ನ್ಯೂನತೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಇದು ಮಹತ್ವಪೂರ್ಣ ಕ್ರಮವಾಗಿದೆ.

131. ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ಸಾರಿಗೆ ಸೌಲಭ್ಯ ಕಲ್ಪಿಸಲು 12.5 ಕೋಟಿ ರೂ. ವೆಚ್ಚದಲ್ಲಿ ಹೊಸ ʻ”ನಗು ಮಗುʼ” ವಾಹನಗಳನ್ನು ಒದಗಿಸಲಾಗುವುದು.

132. ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಹಾಗೂ ಸ್ಥಳೀಯವಾಗಿಯೇ ಪ್ರಯೋಗಾಲಯಗಳ ಸೇವೆಗಳನ್ನು ಒದಗಿಸಲು 129 ತಾಲ್ಲೂಕು ಪ್ರಯೋಗಾಲಯಗಳನ್ನು, ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಪ್ರಯೋಗಾಲಯಗಳನ್ನು ಹಾಗೂ ಬೆಂಗಳೂರಿನಲ್ಲಿ ರಾಜ್ಯ ರೆಫರಲ್ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.

133. ಆರೋಗ್ಯ ಇಲಾಖೆಯ ಸೇವೆಗಳನ್ನು ಇನ್ನಷ್ಟು ಸರಳ ಮತ್ತು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಯೋಜನೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ರೋಗಿಗಳ ಆರೋಗ್ಯ ದಾಖಲೆಗಳನ್ನು ಒಂದೆಡೆ ಸುರಕ್ಷಿತವಾಗಿ ಕ್ರೂಢೀಕರಿಸಲಾಗುವುದು. ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲಾತಿಗಳು ತಕ್ಷಣವಾಗಿ ಲಭ್ಯಪಡಿಸುವ ಮೂಲಕ ಅವರ ಮುಂದಿನ ಚಿಕಿತ್ಸೆಗೆ ಇದರಿಂದ ಸಹಾಯವಾಗುತ್ತದೆ.

134. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಆರೋಗ್ಯ ಸುಧಾರಣೆಗಾಗಿ 720 ಕೋಟಿ ರೂ. ವೆಚ್ಚದಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು.

a) ಹಿಂದಿನ ವರ್ಷದಲ್ಲಿ, ನಮ್ಮ ಸರ್ಕಾರವು 37 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ 43 ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದ್ದು, ಪ್ರಸಕ್ತ ವರ್ಷದಲ್ಲಿ 25 ತಾಲ್ಲೂಕುಗಳಲ್ಲಿ 28 ಹೊಸ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆ 345 ಕೋಟಿ ರೂ. ಗಳನ್ನು ಒದಗಿಸಲಾಗುವುದು.

b) ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈಗಾಗಲೇ ನಿರ್ಮಿಸಲಾದ 14 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದ್ವಿತೀಯ ಆರೈಕೆ ಸೇವೆಗಳನ್ನು ಬಲಪಡಿಸಲು, ತಜ್ಞರು ಮತ್ತು ಇತರ ನುರಿತ ಪ್ಯಾರಾ-ಮೆಡಿಕಲ್ ಸಿಬ್ಬಂದಿಗಳ ಸೇವೆಯನ್ನು 35 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು.

c) ಆರೋಗ್ಯ ಸಂಸ್ಥೆಗಳು 24×7 ಕಾರ್ಯನಿರ್ವಹಿಸಲು ಬೇಕಾಗಿರುವ ಮೂಲಭೂತ ಸೌಕರ್ಯ ಮತ್ತು ಹೆಚ್ಚುವರಿ ಮಾನವ ಸಂಪನ್ಮೂಲವನ್ನು 150 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು.

d) 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 137 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
e) ಆರೋಗ್ಯ ಸಂಸ್ಥೆಗಳಲ್ಲಿ ಪರಿಣಾಮಕಾರಿ ತಪಾಸಣೆ, ರೋಗನಿರ್ಣಯ ಮತ್ತು ಚಿಕಿತ್ಸೆಗಾಗಿ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು 50 ಕೋಟಿ ರೂ. ಒದಗಿಸಲಾಗುವುದು.

135. ಕೇಂದ್ರದ ಸಹಭಾಗಿತ್ವದಲ್ಲಿ ಯಾದಗಿರಿ, ಹಾವೇರಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ 500 ಕೋಟಿ ರೂ. ಗಳ ವೆಚ್ಚದಲ್ಲಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಮತ್ತು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ.

136. ಸಾರ್ವಜನಿಕರಿಗೆ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 2022-23ನೇ ಸಾಲಿನಲ್ಲಿ ಪ್ರಾರಂಭಿಸಲಾಗಿದೆ. ಕೊಡಗು ಮತ್ತು ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

137. ಸಾರ್ವಜನಿಕರಿಗೆ ಕೈಗಗೆಟುಕುವ ದರದಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ಹೈಟೆಕ್ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಹೈಪರ್ ಬ್ಯಾಂಕ್ ಆಮ್ಲಜನಕ ಥೆರಪಿ, CADCAM, Cone Beam, CT scan ದಂತ ಚಿಕಿತ್ಸೆಗೆ ಸಂಬಂಧಿಸಿದಂತೆ Piezosurgery ಮುಂತಾದ ಹೈಟೆಕ್ ಚಿಕಿತ್ಸಾ ಸೌಲಭ್ಯಗಳನ್ನು ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದೆ. ಜೊತೆಗೆ ಮಾನವ ಹಾಲು ಬ್ಯಾಂಕ್ ಮತ್ತು ಚರ್ಮ ಬ್ಯಾಂಕ್, ಕಿಮೋಥೆರಪಿ Infusion ಕೇಂದ್ರಗಳನ್ನು ಹಾಗೂ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ.

138. ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು 2022-23ನೇ ಸಾಲಿನಲ್ಲಿ ಶ್ರೀ ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಗಳು ಹಾಗೂ 202 ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮುಂದುವರೆದು, ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ AIIMS ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು.

139. ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕ್ಲಿನಿಕ್ಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

140. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು.

141. ಬೆಂಗಳೂರಿನಲ್ಲಿ ದೇಶದ ಪ್ರಪ್ರಥಮ Gastroenterology ಮತ್ತು ಅಂಗಾಂಗ ಮರುಜೋಡಣೆಗೆ ಸಮರ್ಪಿತವಾದ ಸರ್ಕಾರಿ ಸಂಸ್ಥೆ, Institute of Gastroenterology and Organ Transplant ಕಾರ್ಯನಿರ್ವಹಿಸುತ್ತಿದೆ. ಜೀವನ ಸಾರ್ಥಕತೆ ಸಂಸ್ಥೆಯ ಮೂಲಕ 151 ದೇಹಗಳನ್ನು ಸಂಗ್ರಹಿಸಿದ್ದು, 503 ರೋಗಿಗಳಿಗೆ ಸಹಾಯವಾಗಿರುತ್ತದೆ. ಪ್ರಸಕ್ತ ವರ್ಷ NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ. ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು.

142. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸಲು ಸರ್ಕಾರ ಒತ್ತು ನೀಡಿದೆ. ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ ಒಂದು1 ಲಕ್ಷ ರೂ. ನಂತೆ ಒಟ್ಟು 500 ಕೋಟಿ ರೂ. ಗಳ ಸಮುದಾಯ ಬಂಡವಾಳ ನಿಧಿ ನೀಡಲು ಕ್ರಮ ವಹಿಸಲಾಗುತ್ತಿದೆ. ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ 108 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ 11,391 ಕೋಟಿ ರೂ. ಸಾಲವನ್ನು ಒದಗಿಸಲಾಗಿದೆ. ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.

143. ಇದಲ್ಲದೇ, ಸಹಕಾರ ವಲಯದಲ್ಲಿ ಕಳೆದ ವರ್ಷದಲ್ಲಿ 40,೦೦೦ ಮಹಿಳಾ ಸ್ವಸಹಾಯ ಗುಂಪುಗಳಿಗೆ 1,600 ಕೋಟಿ ರೂ. ಗಳಷ್ಟು ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 96 ಕೋಟಿ ರೂ. ಬಡ್ಡಿ ಸಹಾಯಧನ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 45,೦೦೦ ಮಹಿಳಾ ಸ್ವಸಹಾಯ ಗುಂಪುಗಳಿಗೆ 1,800 ಕೋಟಿ ರೂ. ಗಳಷ್ಟು ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಗುರಿ ಹೊಂದಲಾಗಿದೆ.

144. ಅಪೌಷ್ಟಿಕತೆ ನಿವಾರಣೆ ಹಾಗೂ ತಾಯಿ, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಅಂಗನವಾಡಿಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಸ್ವಂತ ಕಟ್ಟಡವಿಲ್ಲದ 1,000 ಅಂಗನವಾಡಿಗಳಿಗೆ ಕಟ್ಟಡಗಳನ್ನು ನಿರ್ಮಿಸಲು ಅನುದಾನ ನೀಡಲಾಗಿದೆ.

145. ಇದಲ್ಲದೆ, ಜನಸಂಖ್ಯೆಗೆ ಅನುಗುಣವಾಗಿ ಅಂಗನವಾಡಿಗಳ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶಗಳಲ್ಲಿ, ರಾಜ್ಯ ಸರ್ಕಾರದ ಅನುದಾನದಲ್ಲಿಯೇ 2022-23ನೇ ಸಾಲಿನಲ್ಲಿ 3,538 ಹೊಸ ಅಂಗನವಾಡಿ ಕೇಂದ್ರಗಳನ್ನು 270 ಕೋಟಿ ರೂ. ಗಳ ವೆಚ್ಚದಲ್ಲಿ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

146. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ. ಈ ಧ್ಯೇಯೋದ್ದೇಶವನ್ನು ಮುಂದುವರೆಸುತ್ತಾ ನಮ್ಮ ಸರ್ಕಾರವು ʻಗೃಹಿಣಿ ಶಕ್ತಿʼ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಇದರಡಿಯಲ್ಲಿ:

 ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ.
 ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based Industry) ಪ್ರಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ 1ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.
 ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಶೇ.50 ರಷ್ಟು ರಿಯಾಯಿತಿ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
 ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ʻಆರೋಗ್ಯ ಪುಷ್ಟಿʼ ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.
 ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
 ರಾಜ್ಯದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ʻವಿದ್ಯಾವಾಹಿನಿʼ ಎಂಬ ಯೋಜನೆಯಡಿಯಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದಲ್ಲಿನ ಒಟ್ಟು 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ.

147. ಸರ್ಕಾರಿ ಮತ್ತು ಖಾಸಗಿ ಹೆಣ್ಣು ಮಕ್ಕಳ ಹಾಸ್ಟೆಲ್ಗಳ ಗುಣಮಟ್ಟ ಸೂಚ್ಯಂಕ ಪಟ್ಟಿಯನ್ನು ಆನ್-ಲೈನ್ ವೇದಿಕೆಯಲ್ಲಿ ಸೃಜಿಸಲಾಗುವುದು. ಇದರಿಂದ ಪರಸ್ಥಳದ ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು ತಮ್ಮ ಅವಶ್ಯಕತೆ, ದೂರ, ಗುಣಮಟ್ಟ, ಶುಲ್ಕ ಹಾಗೂ ಇತರ ಮಾನದಂಡಗಳಿಗೆ ಅನುಗುಣವಾಗಿ ಸೂಕ್ತ ಹಾಸ್ಟೆಲನ್ನು ಆಯ್ಕೆ ಮಾಡಲು ಸಾಧ್ಯವಾಗುವುದು.

148. ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು ಈಗಾಗಲೇ 3,000 ರೂ. ಗಳಿಂದ 10,000 ರೂ. ಗಳಿಗೆ ಹೆಚ್ಚಿಸಲಾಗಿದೆ. ಇವರಿಗೆ ಬದುಕಿನಲ್ಲಿ ಇನ್ನಷ್ಟು ಭದ್ರತೆಯನ್ನು ಒದಗಿಸಲು ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು. ಇದಲ್ಲದೆ, ಉತ್ಕೃಷ್ಟ ಚಿಕಿತ್ಸೆಗೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪಿಸಲಾಗುವುದು.

149. ಮಕ್ಕಳ ಪಾಲನಾ ಸಂಸ್ಥೆಗಳ ಆರೈಕೆಯಿಂದ ಹೊರಬಂದ 18 ರಿಂದ 21 ವರ್ಷದೊಳಗಿನ ಹೆಣ್ಣು ಮಕ್ಕಳ ಆರೈಕೆಗಾಗಿ 6 ಅನುಪಾಲನಾ ಗೃಹಗಳನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಿದ್ದೇನೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ಗಂಡು ಮಕ್ಕಳಿಗೂ ವಿಸ್ತರಿಸಿ 4 ಅನುಪಾಲನಾ ಗೃಹಗಳನ್ನು ಪ್ರಾರಂಭಿಸಲು 2 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ.

150. ವಿಶೇಷಚೇತನರು ಸ್ವತಂತ್ರವಾಗಿ ತಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಹಾಗೂ ಸ್ವಾವಲಂಬನೆಯ ಜೀವನ ನಡೆಸಲು ಅನುವಾಗುವಂತೆ ʻಸ್ವಚೇತನʼ ಎಂಬ ಯೋಜನೆಯಡಿ 5,000 ಅರ್ಹ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು 50 ಕೋಟಿ ರೂ. ಗಳ ವೆಚ್ಚದಲ್ಲಿ ಒದಗಿಸಲಾಗುವುದು. ಈ ವರ್ಷದಲ್ಲಿ ಅತಿ ಹೆಚ್ಚು ಅನುದಾನ ನೀಡಲಾಗುತ್ತಿದ್ದು, ಇದು ವಿಶೇಷಚೇತನರ ಕಲ್ಯಾಣಕ್ಕೆ ನಮ್ಮ ಸರ್ಕಾರದ ಬದ್ಧತೆಯನ್ನು ಬಿಂಬಿಸುತ್ತದೆ.

151. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಈ ಕೆಳಕಂಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

 ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡಗಳ ಹೆಚ್ಚಿನ ಕೊರತೆ ಇರುವುದನ್ನು ಗಮನಿಸಿ, ಈ ಪ್ರದೇಶಗಳಲ್ಲಿ 250 ಅಂಗನವಾಡಿ ಕಟ್ಟಡಗಳನ್ನು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
 ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅನುಷ್ಠಾನದಲ್ಲಿರುವ ಶಾಲೆಯಿಂದ ಹೊರಗುಳಿದ 14-18 ವರ್ಷದ ಪ್ರಾಯ ಪೂರ್ವ ಬಾಲಕಿಯರಿಗೆ, ಪೂರಕ ಪೌಷ್ಟಿಕ ಆಹಾರ ನೀಡುವ ಯೋಜನೆಯನ್ನು ಎಲ್ಲಾ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ವಿಸ್ತರಿಸಲಾಗುವುದು.
 ರಾಷ್ಟ್ರೀಯ ಶಿಕ್ಷಣ ನೀತಿಯ ಅನುಗುಣವಾಗಿ ಅಂಗನವಾಡಿ ಕೇಂದ್ರಗಳನ್ನು ಸಜ್ಜುಗೊಳಿಸಲು ಅಗತ್ಯ ಪಠ್ಯವಸ್ತುಗಳನ್ನು ವಿತರಿಸಲು ಹಾಗೂ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತೆಯರಿಗೆ ತರಬೇತಿ ನೀಡಲು 30 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

152. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನ ಮೀಸಲಿಡಲಾಗಿದೆ.

153. 25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು.

154. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆಯನ್ನು ರೂಪಿಸಲು ನಿರ್ಧರಿಸಿದೆ.

155. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳು ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯ ಮೂಲಕ 500 ಶಿಶುವಿಹಾರಗಳನ್ನು ಪ್ರಾರಂಭಿಸಲಾಗುವುದು.

156. ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಮಹಿಳಾ ಆಯವ್ಯಯದಲ್ಲಿ ಒಟ್ಟಾರೆ 46,278 ಕೋಟಿ ರೂ. ಒದಗಿಸಲಾಗಿದೆ.

157. ಮಕ್ಕಳ ಅಭ್ಯುದಯಕ್ಕೆ ಆಯವ್ಯಯದಲ್ಲಿ ಒಟ್ಟಾರೆ 47,256 ಕೋಟಿ ರೂ. ಒದಗಿಸಲಾಗಿದೆ.

158. ರಾಜ್ಯದಲ್ಲಿನ ಪೌರನೌಕರರ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ಉದ್ದೇಶದಿಂದ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 24,000 ಪೌರ ನೌಕರರನ್ನು ಇದೇ ಅವಧಿಯಲ್ಲಿ ಭರ್ತಿ ಮಾಡುವ ಐತಿಹಾಸಿಕ ಕ್ರಮವನ್ನು ನಮ್ಮ ಸರ್ಕಾರ ಕೈಗೊಂಡಿದೆ.

159. ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾಯ್ದೆ 2013ರ ಅನುಷ್ಠಾನದ 10 ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯನ್ನು ಇನ್ನಷ್ಟು ಸುಧಾರಿಸಲು ಸೆಕ್ಷನ್ ೭(ಡಿ) ಪರಿಷ್ಕರಣೆ ಸೇರಿದಂತೆ ಹಲವಾರು ಸಲಹೆಗಳು ಬಂದಿವೆ. ಈ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ನಡೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕ್ಷೇಮಾಭಿವೃದ್ಧಿ ಕುರಿತು ನಮ್ಮ ಸರ್ಕಾರಕ್ಕೆ ಇರುವ ಬದ್ಧತೆಗೆ ನಿದರ್ಶನವಾಗಿದೆ.

160. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಸಂರಕ್ಷಿಸಲು ಈಗಿರುವ ಕಾನೂನು ತೊಡಕುಗಳನ್ನು ನಿವಾರಿಸಲು PTCL ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು.

161. ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

162. ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳ ಮೂಲಕ 17,000 ಫಲಾನುಭವಿಗಳಿಗೆ 675 ಕೋಟಿ ರೂ. ಸಹಾಯಧನವನ್ನು ಡಿ.ಬಿ.ಟಿ. ಮೂಲಕ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಲಾಗಿದೆ.

163. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 9,500 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.

164. ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷ ರೂ. ಗಳಿಂದ 2 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ.

165. ಭೂ ಒಡೆತನ ಯೋಜನೆಯಡಿ ಘಟಕ ವೆಚ್ಚದ ಮೊತ್ತವನ್ನು 15 ಲಕ್ಷ ರೂ. ಗಳಿಂದ 20 ಲಕ್ಷ ರೂ. ಗಳಿಗೆ ಹಾಗೂ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ 25 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ.
166. ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ʻಬಾಬು ಜಗಜೀವನ್ರಾಮ್ ಸ್ವಯಂ ಉದ್ಯೋಗ ಯೋಜನೆʼಯಡಿಯಲ್ಲಿ ಎಲೆಕ್ಟ್ರಿಕ್ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು. ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ.

167. ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನವು ಬೇರೆ ಬೇರೆ ಕಾರಣಗಳಿಂದ ವಿಳಂಬವಾಗುತ್ತಿದ್ದು, ಇದನ್ನು ಬಗೆಹರಿಸಿ e-Rupee ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ಪಾವತಿಸಲು ಕ್ರಮವಹಿಸಲಾಗಿದೆ.

168. ಮೆಟ್ರಿಕ್ ನಂತರದಲ್ಲಿ ಶಾಲೆಯಿಂದ ಹೊರಗುಳಿಯುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆಯನ್ನು ತಗ್ಗಿಸಲು 100 ಕ್ರೈಸ್ ವಸತಿ ಶಾಲೆಗಳನ್ನು ಉನ್ನತೀಕರಿಸಿ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲಾಗುವುದು.

169. ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 50 ಲಕ್ಷ ರೂ. ಗಳ ವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ.24ರವರೆಗೆ ಮೀಸಲಾತಿ ನಿಗದಿಪಡಿಸಿದ್ದು, ಈ ಮೊತ್ತವನ್ನು 1ಒಂದು ಕೋಟಿ ರೂ. ವರೆಗೆ ಹೆಚ್ಚಿಸಲಾಗುವುದು.

170. ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ಕ್ರೈಸ್ ವಸತಿ ಶಾಲೆಗಳಲ್ಲಿ, ಒಂದು ಶಾಲೆಗೆ ಒಂದರಂತೆ, ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯವನ್ನು 10 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು.

171. ಪರಿಶಿಷ್ಟ ಪಂಗಡದ ಮಕ್ಕಳಿಗೆ ವಿದ್ಯಾರ್ಥಿನಿಲಯಗಳು ಇಲ್ಲದೇ ಇರುವ ಜಿಲ್ಲಾ ಕೇಂದ್ರಗಳಲ್ಲಿ 14 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

172. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ IIT, IIM, IISc, NIT ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುತ್ತಿದ್ದು, ಸದರಿ ಪ್ರೋತ್ಸಾಹಧನದ ಮೊತ್ತವನ್ನು 4 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.

173. ISEC ಸಂಸ್ಥೆಯಲ್ಲಿ ಪಿ.ಹೆಚ್.ಡಿ ಮಾಡುವ 5 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಡಾ.|| ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ರೂ. Corpus Fund ಸ್ಥಾಪಿಸಲಾಗುವುದು.

174. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಆದಾಯ ಬರುವ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ವಾಣಿಜ್ಯ ಬ್ಯಾಂಕ್ಗಳಿಂದ ಪಡೆಯುವ ಗರಿಷ್ಠ 10 ಲಕ್ಷ ರೂ. ವರೆಗಿನ ಸಾಲವನ್ನು ಶೇ.4ರಷ್ಟು ಬಡ್ಡಿ ದರದಲ್ಲಿ ದೊರಕಿಸಲು ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನ ನೀಡಲಾಗುವುದು.

175. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10,000 ಯುವ ಜನರು ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ ನೀಡಲಾಗುವುದು.

176. ಸಫಾಯಿ ಕರ್ಮಚಾರಿಗಳಿಗೆ ರಾಜೀವ್ಗಾಂಧಿ ವಸತಿ ನಿಗಮದ ವತಿಯಿಂದ ವಸತಿ ಸೌಲಭ್ಯವನ್ನು ನೀಡಲು ಕ್ರಮ ವಹಿಸಲಾಗುವುದು.

177. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿವಿಧ 6 ಅಭಿವೃದ್ಧಿ ನಿಗಮಗಳಿಗೆ ಪ್ರಸಕ್ತ ಸಾಲಿನಲ್ಲಿನೀಡುತ್ತಿರುವ ಅನುದಾನವನ್ನು , ಕಳೆದ ವರ್ಷಕ್ಕಿಂತ ಗಣನೀಯವಾಗಿ ಹೆಚ್ಚಿಸಿ, ಪ್ರಸಕ್ತ ಸಾಲಿನಲ್ಲಿ 795 ಕೋಟಿ ರೂ. ಒದಗಿಸಲಾಗುವುದು. ನಿಗಮಗಳಿಗೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ ಒಟ್ಟು 1,842 ಕೋಟಿ ರೂ. ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

178. 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯುದಯಕ್ಕೆ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಒಟ್ಟು 30,215 ಕೋಟಿ ರೂ. ಒದಗಿಸಲಾಗಿದೆ. ಪರಿಶಿಷ್ಟ ಜಾತಿ ಉಪ ಯೋಜನೆಗೆ 21,343 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ _ 8,872 ಕೋಟಿ ರೂ. ಒದಗಿಸಲಾಗಿದೆ.

179. ಪ್ರಸ್ತುತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ 2.28 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ದಾಖಲಾತಿಯ ಪ್ರಮಾಣವನ್ನು ಶೇ.25 ರಷ್ಟು ಹೆಚ್ಚಿಸಿ, 30,000 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ, 20 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು “Build to Suit” ಮಾದರಿಯಲ್ಲಿ ನಿರ್ಮಿಸಲಾಗುವುದು ಮತ್ತು ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿರುವ 160 ವಿದ್ಯಾರ್ಥಿ ನಿಲಯಗಳನ್ನು ಇಲಾಖೆಗೆ ಹಸ್ತಾಂತರಿಸಿಕೊಳ್ಳುವ ಮೂಲಕ ಒಟ್ಟು ಒಂದು1 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು.

180. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ವಿದ್ಯಾರ್ಥಿನಿಲಯಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಕ್ಕೆ 250 ಕೋಟಿ ರೂ. ಹೆಚ್ಚುವರಿ ಅನುದಾನದ ವಿಶೇಷ ಪ್ಯಾಕೇಜನ್ನು ಒದಗಿಸಲಾಗಿದೆ.

181. 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಸೇರಿದ ವಿವಿಧ ಮಠಗಳಿಗೆ ಸಾಮಾಜಿಕ, ಶೈಕ್ಷಣಿಕ ಕಾರ್ಯಗಳಿಗಾಗಿ 1,115 ಸಂಸ್ಥೆಗಳಿಗೆ 375 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ.

182. ಶುಲ್ಕ ಮರುಪಾವತಿ ಕಾರ್ಯಕ್ರಮದಡಿ 400 ಕೋಟಿ ರೂ. ಒದಗಿಸಲಾಗಿದ್ದು, ಈ ಅನುದಾನವನ್ನು ಡಿಬಿಟಿ ಮೂಲಕ ಎಂಟು ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಅಲ್ಲದೇ, ಈ ಕಾರ್ಯಕ್ರಮದಡಿ ಹಿಂದಿನ ಸಾಲುಗಳಲ್ಲಿ ಬಾಕಿ ಉಳಿದಿದ್ದ 160 ಕೋಟಿ ರೂ. ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ.

183. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

184. ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗಾಗಿ ಹಿಂದಿನ ಸರ್ಕಾರಗಳು ಕೇವಲ 54.14 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ 261.53 ಕೋಟಿ ರೂ. ಗಳನ್ನು ಒದಗಿಸಿ Master Plan ನಂತೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ.

185. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 50 ಕನಕದಾಸ ವಿದ್ಯಾರ್ಥಿ ನಿಲಯಗಳ ಸುಸಜ್ಜಿತ ಕಟ್ಟಡ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಈ ಸಂಬಂಧ ಘಟಕ ವೆಚ್ಚವನ್ನು 3.5 ಕೋಟಿ ರೂ. ಗಳಿಂದ 5 ಕೋಟಿ ರೂ. ಗಳಿಗೆ ಹೆಚ್ಚಿಸಲಾಗಿದೆ.

186. ಹಿಂದುಳಿದ ವರ್ಗಗಳ ಇಲಾಖಾ ವಿದ್ಯಾರ್ಥಿ ನಿಲಯಗಳಲ್ಲಿ ಬೇಡಿಕೆ ಮತ್ತು ಹಂಚಿಕೆಯನ್ನು ಸರಿದೂಗಿಸುವ ಉದ್ದೇಶದಿಂದ ತಾಲ್ಲೂಕುವಾರು ಅರ್ಜಿಗಳನ್ನು ಆಹ್ವಾನಿಸಿ ಸಿ.ಇ.ಟಿ. ಕೌನ್ಸಿಲಿಂಗ್ ಮಾದರಿಯಲ್ಲಿ ಪ್ರವೇಶ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಲು ವಿದ್ಯಾರ್ಥಿ ನಿಲಯಗಳ ಮಾಸಿಕ ಭೋಜನ ವೆಚ್ಚವನ್ನು 150 ರೂ. ಗಳಷ್ಟು ಹೆಚ್ಚಿಸಲಾಗಿದೆ.

187. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ದಿ ನಿಗಮಗಳ ವತಿಯಿಂದ ಗಂಗಾಕಲ್ಯಾಣ ಯೋಜನೆಯಡಿ 490 ಕೋಟಿ ರೂ. ವೆಚ್ಚದಲ್ಲಿ 19,731 ಫಲಾನುಭವಿಗಳಿಗೆ ಸೌಲಭ್ಯವನ್ನು ತಲುಪಿಸುವ ಗುರಿ ಹೊಂದಲಾಗಿದೆ.

188. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 1,282 ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿನ 8, 9 ಮತ್ತು 10ನೇ ತರಗತಿಯ ಶೇ.25 ರಷ್ಟು ಅಂದರೆ ಅಂದಾಜು 10,000 ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ವಿಷಯಗಳ ಬಗ್ಗೆ ಬುನಾದಿ ತರಬೇತಿಗೆ 8.50 ಕೋಟಿ ರೂ. ಗಳನ್ನು ಒದಗಿಸಲಾಗುವುದು.

189. ರಾಜ್ಯದಲ್ಲಿನ ಕಾಯಕ ಸಮಾಜಗಳಿಂದ ವೃತ್ತಿ ಆಧಾರಿತ ನಿಗಮಗಳ ಸ್ಥಾಪನೆಗಾಗಿ ಸಾಕಷ್ಟು ಬೇಡಿಕೆಗಳು ಬಂದಿದೆ. ಸರ್ಕಾರದಿಂದ ಪ್ರಸಕ್ತ ವರ್ಷದಲ್ಲಿ ಇದನ್ನು ಪರಿಶೀಲಿಸಲಾಗುವುದು.

190. ಹಿಂದುಳಿದ ವರ್ಗಗಳಿಗೆ ಸೇರಿದ ವಿವಿಧ 11 ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿರುವ ಅನುದಾನವನ್ನುಪ್ರಸಕ್ತ ಸಾಲಿನಲ್ಲಿ, ಕಳೆದ ವರ್ಷಕ್ಕಿಂತ ಗಣನೀಯವಾಗಿ ಹೆಚ್ಚಿಸಿ, ಪ್ರಸಕ್ತ ಸಾಲಿನಲ್ಲಿ 596 ಕೋಟಿ ರೂ. ಒದಗಿಸಲಾಗುವುದು. ನಿಗಮಗಳಿಗೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ ಒಟ್ಟು 1,600 ಕೋಟಿ ರೂ. ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

191. ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಶೇಕಡ 97 ರಷ್ಟು ಉತ್ತೀರ್ಣರಾಗಿರುತ್ತಾರೆ. ಈ ಪೈಕಿ ಶೇಕಡ 90ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲವನ್ನು 2,500ಕ್ಕೆ ಹೆಚ್ಚಿಸಲಾಗಿದೆ.

192. ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್.ಇ. ಪಠ್ಯಕ್ರಮದೊಂದಿಗೆ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಸದರಿ ಶಾಲೆಗಳನ್ನು 25 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ವಹಣೆಯನ್ನು ಮಾಡಲಾಗುತ್ತಿದೆ.

193. ಪ್ರಸಕ್ತ ಸಾಲಿನಲ್ಲಿ 96 ಕೋಟಿ ರೂ. ಅನುದಾನದಲ್ಲಿ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ 31 ವಸತಿ ಶಾಲೆಗಳು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸುಮಾರು 7,800 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

194. ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿಯನ್ನು ನೀಡಲು 2 ಕೋಟಿ ರೂ. ಒದಗಿಸಲಾಗುವುದು.

195. ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗವನ್ನು ವಿದೇಶದಲ್ಲಿ ಮಾಡಲು ಇಚ್ಛಿಸುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಡ್ಡಿ ಸಹಾಯಧನ ನೀಡಲಾಗುವುದು.

196. ಅಲ್ಪಸಂಖ್ಯಾತರ ಪದವೀಧರ ಮಹಿಳೆಯರು ಉತ್ತಮ ಉದ್ಯೋಗಾವಕಾಶ ಪಡೆಯಲು ಹಾಗೂ ಸ್ವಂತ ಉದ್ದಿಮೆ ಪ್ರಾರಂಭಿಸಲು ಪ್ರತಿಷ್ಠಿತ ಸಂಸ್ಥೆಯಾದ ಐ.ಐ.ಎಂ.ಬಿ. (IIMB) ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.

197. ರಾಜ್ಯದಲ್ಲಿ 40,000 ಕ್ಕಿಂತಲೂ ಹೆಚ್ಚು ವಕ್ಫ್ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ 10 ಕೋಟಿ ರೂ. ಮತ್ತು ಖಬರಸ್ತಾನ್ಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
198. ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ಪಿಂಜಾರ, ದರ್ವೇಸು ಮತ್ತು ನದಾಫ್ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು.

199. ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕಳೆದ ಆಯವ್ಯಯದಲ್ಲಿ 60 ಕೋಟಿ ರೂ. ಒದಗಿಸಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಈ ಮೊತ್ತವನ್ನು ಹೆಚ್ಚಿಸಿ 110 ಕೋಟಿ ರೂ. ಒದಗಿಸಲಾಗುವುದು. ನಿಗಮಕ್ಕೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ, 306 ಕೋಟಿ ರೂ. ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

200. ನಮ್ಮ ಸರ್ಕಾರವು ಎಲ್ಲರಿಗೂ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಹಿಂದಿನ ಸರ್ಕಾರ ಯಾವುದೇ ಅನುದಾನ ಹಂಚಿಕೆ ಮಾಡದೇ 15.84 ಲಕ್ಷ ಮನೆಗಳು ಮಂಜೂರು ಮಾಡಲಾಗಿತ್ತು. ಬಡವರ ಹಿತಾಸಕ್ತಿಯ ದೃಷ್ಟಿಯಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ ನಮ್ಮ ಸರ್ಕಾರವು ಎರಡು ವರ್ಷಗಳ ಕೋವಿಡ್ ಸಂಕಷ್ಟದ ನಡುವೆಯೂ 10,173 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಿ, ಸುಮಾರು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ, 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಪ್ರಸಕ್ತ ವರ್ಷದಲ್ಲಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಹಾಗೂ ಒಟ್ಟಾರೆ 5,000 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುವುದು.

201. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷದಲ್ಲಿ 20,000 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಛೆಪಡುವ ಮನೆಯನ್ನು ಆನ್ಲೈನ್ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡಿಕೊಳ್ಳುವ ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಲಾಗಿದೆ.

202. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. Saturation Approach ಮುಖಾಂತರ ಹೆಚ್ಚು ಜನರಿಗೆ ವಸತಿ ಸೌಲಭ್ಯ ಕಲ್ಪಿಸಲು ಈ ತಾಲ್ಲೂಕುಗಳಲ್ಲಿ ಆದ್ಯತೆ ನೀಡಲಾಗುವುದು. ಈ ಉದ್ದೇಶಕ್ಕೆ ಪ್ರಸಕ್ತ ವರ್ಷದಲ್ಲಿ 500 ಕೋಟಿ ರೂ. ಗಳನ್ನು ಒದಗಿಸಲಾಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು.

203. ಅತಿವೃಷ್ಟಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ನೀಡುತ್ತಿರುವ ಸಹಾಯಧನವನ್ನು ನಮ್ಮ ಸರ್ಕಾರವು 5 ಲಕ್ಷ ರೂ. ಗಳಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3,01,884 ಮನೆಗಳ ಪುನರ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ ಇಲ್ಲಿಯವರೆಗೂ 2,627 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ.

204. ಸರ್ಕಾರಿ ಮಾಲೀಕತ್ವದಲ್ಲಿ ಇರುವ ಕೊಳೆಗೇರಿ ಪ್ರದೇಶಗಳಲ್ಲಿ ವಾಸಿಸುವ 1.14 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದು, ವರ್ಷಾಂತ್ಯದಲ್ಲಿ ಎಲ್ಲಾ 3.36 ಲಕ್ಷ ಕುಟುಂಬಗಳಿಗೂ ಭೂಮಾಲೀಕತ್ವದ ಹಕ್ಕುಪತ್ರವನ್ನು ನೀಡಲಾಗುವುದು.

205. ಕರ್ನಾಟಕ ಗೃಹ ಮಂಡಳಿಯ ಅನುಮೋದನೆಯಾಗಿದ್ದ 38 ಯೋಜನೆಗಳು ಜಮೀನಿನ ವ್ಯಾಜ್ಯ, ಭೂ ಮಾಲೀಕರ ಸಮಸ್ಯೆ ಮತ್ತಿತರ ಕಾರಣದಿಂದ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈ ಎಲ್ಲ ತೊಡಕುಗಳನ್ನು ನಿವಾರಿಸಿ, ಮಾರ್ಗಸೂಚಿಗಳನ್ನು ಮಾರ್ಪಾಡುಗೊಳಿಸಿ 3,382 ಎಕರೆ ಪ್ರದೇಶದಲ್ಲಿ 48,000 ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿದೆ.

206. ಕರ್ನಾಟಕ ಗೃಹ ಮಂಡಳಿ ವತಿಯಿಂದ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೆ 06 ವಸತಿ ಯೋಜನೆಗಳನ್ನು ಪೂರ್ಣಗೊಳಿಸಲಾಗಿದ್ದು, ಈ ಯೋಜನೆಗಳಿಂದ ಒಟ್ಟು 6,142 ನಿವೇಶನಗಳ ಅಭಿವೃದ್ಧಿಯನ್ನು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2,000 ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ, ಅಂದಾಜು 30,000 ಸ್ವತ್ತುಗಳನ್ನು ಅಭಿವೃದ್ಧಿ ಪಡಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು.

207. ʻನಮ್ಮ ನೆಲೆʼ” ಎಂಬ ಹೊಸ ಯೋಜನೆಯಡಿ ಕರ್ನಾಟಕ ಗೃಹ ಮಂಡಳಿಯಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ ಮೂರನೇ ಒಂದು ಭಾಗವನ್ನು, ಅಂದರೆ 10,000 ನಿವೇಶನಗಳನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (EWS) ಹಂಚಿಕೆ ಮಾಡಲಾಗುವುದು.

208. ನಮ್ಮ ಸರ್ಕಾರವು ನಾಡಿನ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ನೀಡಲು ಬದ್ಧವಾಗಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರವು ಹೆಚ್ಚುವರಿ ಆಹಾರ ಧಾನ್ಯ ವಿತರಿಸಿತ್ತು. ಇದರೊಂದಿಗೆ ರಾಜ್ಯ ಸರ್ಕಾರವು ಅಕ್ಕಿಯೊಂದಿಗೆ ಸ್ಥಳೀಯ ಪ್ರಮುಖ ಆಹಾರ ಧಾನ್ಯಗಳಾದ ರಾಗಿ ಹಾಗೂ ಜೋಳವನ್ನೂ ಸಹ ಪಡಿತರ ವ್ಯವಸ್ಥೆಯಡಿ ವಿತರಿಸಿ, ರಾಜ್ಯದ ರೈತರಿಗೆ ಹೆಚ್ಚುವರಿ ನೆರವು ನೀಡಿದೆ. ಸ್ಥಳೀಯ ಧಾನ್ಯಗಳ ವಿತರಣೆಯನ್ನು ಈ ವರ್ಷವೂ ಮುಂದುವರೆಸಲಾಗುವುದು.

209. 2013-14 ರಿಂದ 2017-18 ನೇ ಸಾಲಿನವರೆಗೆ 5 ವರ್ಷಗಳ ಅವಧಿಯಲ್ಲಿ 1.2 ಕೋಟಿ ಮೆಟ್ರಿಕ್ ಟನ್ ಗಳ ಅಕ್ಕಿಯನ್ನು ವಿತರಿಸಲಾಗಿತ್ತು. ನಮ್ಮ ಸರ್ಕಾರವು ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ 1.5 ಕೋಟಿ ಮೆಟ್ರಿಕ್ ಟನ್ ಅಕ್ಕಿಯನ್ನು ವಿತರಿಸಿದೆ. NFSA ಅಡಿಯಲ್ಲಿ ಪ್ರತಿ ಫಲಾನುಭವಿಗೆ ನೀಡುತ್ತಿರುವ 5 ಕೆ.ಜಿ ಆಹಾರ ಧಾನ್ಯಗಳ ಜೊತೆಯಲ್ಲಿ ಒಂದು1 ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲು 2023-24ನೇ ವರ್ಷದಲ್ಲಿ 4,000 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.

210. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 3.8 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ 543 ಕೋಟಿ ರೂ. ಸಹಾಯಧನ, 2 ಲಕ್ಷ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ, 16,400 ಮಕ್ಕಳಿಗೆ ಕಲಿಕಾ ಉಪಕರಣಗಳ ವಿತರಣೆ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬೆಳಗಾವಿ ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಗೃಹ ಸೇರಿದಂತೆ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಡಿ 23 ಲಕ್ಷ ಫಲಾನುಭವಿಗಳು ಮತ್ತು ಅವಲಂಬಿತರಿಗೆ ಒಟ್ಟು 1,785 ಕೋಟಿ ರೂ. ಗಳ ನೆರವನ್ನು ನೀಡಲಾಗಿದೆ.

211. 2022 ರಲ್ಲಿ “ಕಾರ್ಮಿಕ ಅದಾಲತ್-2” ನಡೆಸಿ 1.71 ಲಕ್ಷ ಅರ್ಹ ಕಾರ್ಮಿಕರಿಗೆ 85 ಕೋಟಿ ರೂ. ಪರಿಹಾರ ಒದಗಿಸಲಾಗಿದೆ.
212. ಹೊರ ರಾಜ್ಯದಿಂದ ವಲಸೆ ಬಂದ ಕಟ್ಟಡ ಕಾರ್ಮಿಕರ ಯೋಗಕ್ಷೇಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೆರವು ನೀಡಲಾಗುವುದು.

213. ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ರಾಜ್ಯಾದ್ಯಂತ 19 ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯಗಳನ್ನು ನೂತನವಾಗಿ ಪ್ರಾರಂಭಿಸಲು ಹಾಗೂ ಹುಬ್ಬಳ್ಳಿ ಮತ್ತು ದಾವಣಗೆರೆಯ ESI ಆಸ್ಪತ್ರೆಗಳಲ್ಲಿನ ಹಾಸಿಗೆ ಸಾಮರ್ಥ್ಯವನ್ನು 50 ರಿಂದ 100ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

214. ರಾಜ್ಯದಲ್ಲಿರುವ ESI ಆಸ್ಪತ್ರೆಗಳನ್ನು ಇನ್ನಷ್ಟು ಬಲಪಡಿಸಲು 7 ಆಸ್ಪತ್ರೆಗಳಲ್ಲಿ ಐ.ಸಿ.ಯು ಸ್ಥಾಪಿಸಲು, 6 ಆಸ್ಪತ್ರೆಗಳಲ್ಲಿ ಆಯುಷ್ ಘಟಕ ಪ್ರಾರಂಭಿಸಲು ಹಾಗೂ ಜಿಲ್ಲೆಗೊಂದರಂತೆ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಾಗಿ ಉನ್ನತೀಕರಿಸಲು ಕೇಂದ್ರ ಕಾರ್ಮಿಕ ಮಂತ್ರಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹೊಸದಾಗಿ ಪ್ರಾರಂಭಿಸಿರುವ 19 ESI ಚಿಕಿತ್ಸಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ 6 ಹೊಸ ESI ಚಿಕಿತ್ಸಾಲಯಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ.

215. ಕಾರ್ಖಾನೆಗಳು, ಬಾಯ್ಲರುಗಳು. ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯು ಒದಗಿಸುತ್ತಿರುವ ಎಲ್ಲಾ ಸೇವೆಗಳನ್ನು ಸುಲಭವಾಗಿ ಮತ್ತು ಸಕಾಲದಲ್ಲಿ ಒದಗಿಸಲು ಅನುವಾಗುವಂತೆ ಹೊಸ ಆನ್ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು.

216. ಕರ್ನಾಟಕದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಶ್ರಮಜೀವಿಗಳ ಬದುಕಿಗೆ ಭದ್ರತೆ ಒದಗಿಸಲು “ʻಕರ್ನಾಟಕ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿʼ” ಯನ್ನು ಸ್ಥಾಪಿಸಲಾಗುವುದು. ಸದ್ಯಕ್ಕೆ ಆಸ್ತಿ ತೆರಿಗೆ ಮೇಲೆ ವಿಧಿಸಿರುವ ಸೆಸ್ ಪ್ರಮಾಣವನ್ನು ಹೆಚ್ಚಿಸದೆ ಆಂತರಿಕವಾಗಿ ಸೆಸ್ ದರಗಳನ್ನು ಮಾರ್ಪಾಡುಗೊಳಿಸಲಾಗುವುದು. ಈ ಸೆಸ್ ಮೂಲಕ ನೋಂದಾಯಿತ 75 ಲಕ್ಷಕ್ಕೂ ಹೆಚ್ಚಿನ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗುವುದು.

217. ಕರ್ನಾಟಕ ರಾಜ್ಯದ ದುಡಿಯುತ್ತಿರುವ ಜನರಲ್ಲಿ ಶೇ. 24 ರಷ್ಟು ಜನ ಸಂಘಟಿತ ವಲಯದಲ್ಲಿ ಉದ್ಯೋಗಿಗಳಾಗಿದ್ದಾರೆ. ಇದು ದೇಶದ ಸರಾಸರಿ, ಶೇ. 20ಕ್ಕಿಂತ ಹೆಚ್ಚಾಗಿದೆ. ರಾಜ್ಯದ ನಿರುದ್ಯೋಗ ಪ್ರಮಾಣವು ಶೇ. 2.7 ರಷ್ಟಿದ್ದು, ಇದು ದೇಶದ ನಿರುದ್ಯೋಗ ಪ್ರಮಾಣ ಶೇ.4.2 ಕ್ಕಿಂತ ಕಡಿಮೆ ಇದೆ. 2022-23ನೇ ಸಾಲಿನ ಕರ್ನಾಟಕ ಉದ್ಯೋಗ ವರದಿಯ ಪ್ರಕಾರ EPFO ಗೆ ಸೇರ್ಪಡೆಯಾದ ಒಟ್ಟಾರೆ ಉದ್ಯೋಗಿಗಳ ಸಂಖ್ಯೆಯಲ್ಲಿ ಕರ್ನಾಟಕದ ಪಾಲು ಶೇ. 10.4 ರಷ್ಟಾಗಿದೆ. 2021-22ರಲ್ಲಿ ಕರ್ನಾಟಕದ ಸಂಘಟಿತ ವಲಯದಲ್ಲಿ ಕಳೆದ ಐದು ವರ್ಷಗಳಲ್ಲಿಯೇ ಅತಿ ಹೆಚ್ಚು ಅಂದರೆ 15 ಲಕ್ಷ ಉದ್ಯೋಗಿಗಳು ಸೇರ್ಪಡೆಯಾಗಿದ್ದಾರೆ.

218. ಪ್ರಸಕ್ತ ಸಾಲಿನಲ್ಲಿ ಪಿಎಂ-ಸ್ವನಿಧಿ ಯೋಜನೆಯಡಿ ನವೆಂಬರ್ 2022 ರ ಅಂತ್ಯದವರೆಗೆ 69,000 ಬೀದಿ ಬದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಗಳಷ್ಟು ಸಾಲ ಮಂಜೂರು ಮಾಡಲಾಗಿದೆ.

219. ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ಅಮೃತ ಕೌಶಲ್ಯ ತರಬೇತಿ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಮತ್ತು ಇತರ ಕಾರ್ಯಕ್ರಮಗಳಡಿ ಒಟ್ಟು 1.12 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ. ಈ ತರಬೇತಿ ಪಡೆದ ಹಾಗೂ ಸ್ಕಿಲ್ ಕನೆಕ್ಟ್ ಪೋರ್ಟಲ್ ಮತ್ತು ಉದ್ಯೋಗ ಮೇಳಗಳ ಮೂಲಕ 51,000 ಜನರಿಗೆ ಉದ್ಯೋಗಾವಕಾಶ ದೊರೆತಿರುತ್ತದೆ. ಪ್ರಸಕ್ತ ವರ್ಷದಲ್ಲಿ 5 ಲಕ್ಷ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.

220. ಕೌಶಲ್ಯಾಭಿವೃದ್ಧಿ ಇಲಾಖೆಯಡಿಯಲ್ಲಿ ಇದುವರೆಗೂ ಖಾಸಗಿ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ಕೌಶಲ್ಯ ತರಬೇತಿಯನ್ನು ನಮ್ಮ ITI, GTTC, Polytechnic ಸಂಸ್ಥೆಗಳ ಮೂಲಕವೇ ನೀಡಿ, Industry ಮತ್ತು Academia ವನ್ನು ಸಮನ್ವಯಗೊಳಿಸಿ ಕೌಶಲ್ಯ ತರಬೇತಿಯನ್ನು ಹೆಚ್ಚಿನ ಸಾಂಸ್ಥೀಕರಣ ಹಾಗೂ ವ್ಯವಸ್ಥೀಕರಣಗೊಳಿಸುವುದು.

221. ಸಾಂಪ್ರದಾಯಿಕ ಕೌಶಲ್ಯಗಳ ಪುನರುಜ್ಜೀವನಕ್ಕಾಗಿ ಬಿದಿರಿನ ಉತ್ಪನ್ನಗಳಲ್ಲಿ ಮೇದಾರ ಸಮುದಾಯಕ್ಕೆ, ಚನ್ನಪಟ್ಟಣ ಗೊಂಬೆಗಳ ತಯಾರಿಕೆಗೆ, ಕಿನ್ಹಾಳ ಕಲೆಗಾಗಿ ಚಿತ್ರಗಾರ ಸಮುದಾಯಕ್ಕೆ ಹಾಗೂ ಕುಂಬಾರಿಕೆ, ಬಿದರಿ ಕಲೆ, ಕಸೂತಿ ಮುಂತಾದ ಕಲೆಗಳಲ್ಲಿ ಆಯ್ದ ತಲಾ 100 ಅಭ್ಯರ್ಥಿಗಳಿಗೆ ಉನ್ನತ ಮಟ್ಟದ ಕೌಶಲ್ಯವರ್ಧನಾ ತರಬೇತಿ ನೀಡಲಾಗುವುದು.

222. ವಿದೇಶಿ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ವತಿಯಿಂದ 8 ಜಿಲ್ಲೆಗಳಲ್ಲಿ ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು 4 ಜಿಲ್ಲೆಗಳಲ್ಲಿ ಪೂರ್ವ ನಿರ್ಗಮನದ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

223. ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ತರಬೇತಿಯನ್ನು ಉಚಿತವಾಗಿ ಬಿಪಿಎಲ್ ಕುಟುಂಬಗಳ ಒಟ್ಟು 12,110 ಯುವಕ-ಯುವತಿಯರಿಗೆ ನೀಡಲಾಗಿದ್ದು, ತರಬೇತಿ ಪಡೆದ ಫಲಾನುಭವಿಗಳು ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ.

224. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ 50 ವರ್ಷಗಳನ್ನು ಪೂರೈಸಿದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳಾಗಿ ಅಭಿವೃದ್ಧಿ ಪಡಿಸಿ, ಆ ಭಾಗದ ಯುವಕರಿಗೆ ಕೈಗಾರಿಕೆಗಳ ಬೇಡಿಕೆಗಳಿಗನುಗುಣವಾಗಿ ತಾಂತ್ರಿಕ ಜ್ಞಾನವನ್ನು ನೀಡಲು ಹೊಸ ಯಂತ್ರೋಪಕರಣ ಮತ್ತು ಸಲಕರಣೆಗಳನ್ನು 100 ಕೋಟಿ ರೂ. ಗಳ ವೆಚ್ಚದಲ್ಲಿ ಖರೀದಿಸಲಾಗುವುದು.

225. “ʻಕಲಿಕೆ ಜೊತೆಗೆ ಕೌಶಲ್ಯ”ʼ ಎಂಬ ವಿನೂತನ ಕಾರ್ಯಕ್ರಮದಡಿ ಕೈಗಾರಿಕಾ ಆದ್ಯತಾ ಮತ್ತು ಉದ್ಯಮಶೀಲತಾ ತರಬೇತಿಗಳನ್ನು ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್, ಹಾಗೂ ಐ.ಟಿ.ಐ ಕಾಲೇಜುಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಇದೇ ಮಾದರಿಯಲ್ಲಿ ಕ್ರೈಸ್ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.

226. ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರುಗಳನ್ನು ಉದ್ಯೋಗಸ್ಥರನ್ನಾಗಿ ಮಾಡಲು ಅವರುಗಳಿಗೆ ಅಲ್ಪಾವಧಿ ತರಬೇತಿ ಕೋರ್ಸ್ಗಳಿಗೆ ಒತ್ತು ನೀಡಿ ವಿಶೇಷ ಕೌಶಲ್ಯ ತರಬೇತಿ ನೀಡಲಾಗುವುದು.

227. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 80,318 ಕೋಟಿ ರೂ. ಒದಗಿಸಲಾಗುವುದು.

******
[17/02, 12:55 pm] Shankar Pagoji: ವಲಯ 3 ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ
227. ಕರ್ನಾಟಕ ರಾಜ್ಯವು ಹೂಡಿಕೆ ಆಕರ್ಷಿಸುವಲ್ಲಿ ದೇಶದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದಿದೆ. ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ನಿರೂಪಣೆ, ಪ್ರೋತ್ಸಾಹಕಗಳು ಹಾಗೂ Ease of Doing Business ಉಪಕ್ರಮಗಳ ಮೂಲಕ ಹೂಡಿಕೆದಾರರ ನೆಚ್ಚಿನ ತಾಣವಾಗಿ ರೂಪುಗೊಂಡಿದೆ.
228. ನಮ್ಮ ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಲುವಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ 2022-23ರ ಆಯವ್ಯಯದಲ್ಲಿ ಅಂದಾಜಿಸಿದ 46,955 ಕೋಟಿ ರೂ. ಗಳಿಂದ 2023-24ನೇ ಸಾಲಿನಲ್ಲಿ 61,234 ಕೋಟಿ ರೂ. ಗಳಿಗೆ ಹೆಚ್ಚಿಸಲಾಗಿದೆ. ಇದು ಕಳೆದ ವರ್ಷದ ಆಯವ್ಯಯ ಅಂದಾಜಿಗಿಂತ ಶೇ.30.4ರಷ್ಟು ಹೆಚ್ಚಾಗಿದೆ. ಇದು ಕಳೆದ 10 ವರ್ಷಗಳಲ್ಲಿನ ಬಂಡವಾಳ ಹಂಚಿಕೆಯಲ್ಲಿ ಅತೀ ಹೆಚ್ಚಿನ ಏರಿಕೆಯಾಗಿದೆ.
229. ಪ್ರಸಕ್ತ ವರ್ಷದ ಜನವರಿ ಅಂತ್ಯದವರೆಗೂ ರಾಜ್ಯದಲ್ಲಿ 33,991 ಕೋಟಿ ರೂ. ಗಳಷ್ಟು ಬಂಡವಾಳ ವೆಚ್ಚವಾಗಿರುತ್ತದೆ. ಇದು ಆಯವ್ಯಯ ಅಂದಾಜಿನ ಶೇ. 72ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಆರ್ಥಿಕ ವರ್ಷದ ಜನವರಿ ಅಂತ್ಯದವರೆಗಿನ ಯಾವುದೇ ಸರ್ಕಾರವು ಸಾಧಿಸಿರದ ಅತೀ ಹೆಚ್ಚಿನ ಬಂಡವಾಳ ವೆಚ್ಚ ಇದಾಗಿರುತ್ತದೆ. ನಮ್ಮ ಸರ್ಕಾರವು ಕೇವಲ ಆಯವ್ಯಯ ಅಂದಾಜಿಸದೇ, ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುತ್ತದೆ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ.
230. ರಾಜ್ಯದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ವಿಮಾನ ನಿಲ್ದಾಣಗಳ ಅಭಿವೃದ್ಧಿ, ರೈಲು ಮಾರ್ಗಗಳ ಅಭಿವೃದ್ಧಿ,
ಸಬ್‌ಅರ್ಬನ್ ರೈಲ್ವೆ ನಿಲ್ದಾಣ, ಬಂದರುಗಳ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್ ಮೊದಲಾದ ಮೂಲಸೌಕರ್ಯಗಳ ಅಭಿವೃದ್ಧಿಗೆ 69,031 ಕೋಟಿ ರೂ. ಗಳ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಅಲ್ಲದೆ ಇನ್ನೂ ಹೆಚ್ಚುವರಿಯಾಗಿ ಸಾಕಷ್ಟು ಯೋಜನೆಗಳು ಅನುಷ್ಠಾನಗೊಳಿಸುವ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ.
231. ಕೇಂದ್ರ ಸರ್ಕಾರವು, ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಸತತವಾಗಿ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುತ್ತಾ ಬಂದಿದೆ. 2019-20 ರಿಂದ 2022-23 ರವರೆಗೂ, ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ಒಟ್ಟು 2,77,711 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ 1,20,493 ಕೋಟಿ ರೂ. ಗಳು ತೆರಿಗೆಯಲ್ಲಿ ರಾಜ್ಯದ ಪಾಲಾಗಿದ್ದು, 1,57,218 ಕೋಟಿ ರೂ. ಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ, ಕೋವಿಡ್ ಲಸಿಕೆ, ಜಲಜೀವನ್ ಮಿಷನ್, ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಫಸಲ್ ಬಿಮಾ ಯೋಜನೆ, ನರೇಗ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ 105 ಕೇಂದ್ರ ಪುರಸ್ಕೃತ ಯೋಜನೆಗಳಡಿ ಬಿಡುಗಡೆ ಮಾಡಿದೆ.
232. 2019ರಲ್ಲಿ ಜಲಜೀವನ್‌ ಮಿಷನ್‌ ಪ್ರಾರಂಭವಾದಾಗ ಕರ್ನಾಟಕದಲ್ಲಿ ಮನೆಯಲ್ಲಿ ನಳ ಸಂಪರ್ಕ ಹೊಂದಿರುವ ಗ್ರಾಮೀಣ ಕುಟುಂಬಗಳ ಸಂಖ್ಯೆಯು 24 ಲಕ್ಷವಿದ್ದು, ಹಿಂದಿನ 3 ವರ್ಷಗಳಲ್ಲಿ ಹೊಸದಾಗಿ 38 ಲಕ್ಷ ನಳ ಸಂಪರ್ಕವನ್ನು ನೀಡುವ ಮೂಲಕ ಪ್ರಸ್ತುತ 62 ಲಕ್ಷಕ್ಕೆ ಏರಿಸಲಾಗಿದೆ. ಇದಕ್ಕೆ ಪೂರಕವಾಗಿ ಸುಸ್ಥಿರವಾಗಿ ನೀರನ್ನು ಸರಬರಾಜು ಮಾಡಲು 101 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 30,308 ಕೋಟಿ ರೂ. ಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ. ರಾಜ್ಯದಲ್ಲಿ ಉಳಿದ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು 31,235 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ. ಇದಕ್ಕಾಗಿ, ಪ್ರಸಕ್ತ ವರ್ಷದಲ್ಲಿ 6,23೪ ಕೋಟಿ ರೂ. ಗಳನ್ನು ಒದಗಿಸಲಾಗಿದೆ.
233. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯವು ಕಳೆದ 5 ವರ್ಷಗಳಲ್ಲಿ 23 ಲಕ್ಷ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಯೋಜನೆಯಡಿ ವಿವಿಧ ಇಲಾಖೆಗಳೊಂದಿಗೆ ಒಗ್ಗೂಡಿಸಿ ಅನುಷ್ಠಾನಗೊಳಿಸಿರುವ ಕಾಮಗಾರಿಗಳಲ್ಲಿ 2.25 ಲಕ್ಷ ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ, 25 ಸಾವಿರ ಎಕರೆ ಪ್ಲಾಂಟೇಷನ್‌, 25 ಸಾವಿರ ಎಕರೆ ರೇಷ್ಮೆ ಪ್ರದೇಶ ವಿಸ್ತರಣೆ, 1.25 ಲಕ್ಷ ಎಕರೆ ಕೃಷಿ ಅರಣ್ಯೀಕರಣ ಸೇರಿರುತ್ತದೆ. ಅಲ್ಲದೆ 12,547 ಶಾಲಾ ಕಾಂಪೌಂಡ್, 2,331 ಆಟದ ಮೈದಾನಗಳು, 17,574 ಶೌಚಾಲಯಗಳು, 3,117 ಅಂಗನವಾಡಿ ಕಟ್ಟಡಗಳು,
4.95 ಲಕ್ಷಗಳ ಜಾನುವಾರು ಶೆಡ್‌ಗಳ ನಿರ್ಮಾಣವಾಗಿವೆ. ಜೊತೆಗೆ 42,717 ಸಾಂಪ್ರದಾಯಿಕ ಜಲಮೂಲಗಳ ಪುನರುಜ್ಜೀವನ,
1.34 ಲಕ್ಷ ರಸ್ತೆ ಕಾಮಗಾರಿಗಳು ಹಾಗೂ 13,500 ಕಿ.ಮೀ. ರಸ್ತೆ ಬದಿ ನೆಡುತೋಪುಗಳೂ ಸೇರಿವೆ. ಈ ಯೋಜನೆಯಡಿಯಲ್ಲಿ
2023-24ನೇ ಸಾಲಿನಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ 88 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
234. ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಒದಗಿಸಲಾಗುವುದು.
235. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಸರ್ಕಾರವು ಹೆಚ್ಚಿನ ಮಹತ್ವವನ್ನು ನೀಡಿದೆ. ಪ್ರಸಕ್ತ ಸಾಲಿನಲ್ಲಿ 2,070 ಕೋಟಿ ರೂ. ಗಳ ವೆಚ್ಚದಲ್ಲಿ 4,504 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
236. ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ, ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಕಿ.ಮೀ. ನಂತೆ ಒಟ್ಟಾರೆಯಾಗಿ 5,000 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ. ವೆಚ್ಚ ಮಾಡಲಾಗುವುದು.
237. ರಾಜ್ಯದ 20 ಸಾವಿರ ಗ್ರಾಮಗಳಲ್ಲಿ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಕಾಮಗಾರಿಗಳು ಜಾರಿಯಲ್ಲಿವೆ. ಗ್ರಾಮೀಣ ಪ್ರದೇಶಗಳ ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಚರಂಡಿ ವ್ಯವಸ್ಥೆಯನ್ನು ನರೇಗಾ ಹಾಗೂ ಸ್ವಚ್ಛ ಭಾರತ್‌ ಯೋಜನೆಗಳಡಿಯಲ್ಲಿ 4,190 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
238. ಪ್ರತಿ ವರ್ಷ 2,000 ಕೆರೆಗಳನ್ನು 200 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಪಂಚಾಯತ್‌ ಕೆರೆಗಳ ಪುನರುಜ್ಜೀವನಕ್ಕೆ ಕ್ರಮವಹಿಸಲಾಗುವುದು.
239. ಕಳೆದ ಮೂರು ವರ್ಷಗಳಲ್ಲಿ 5,213 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗಿದ್ದು, ಉಳಿದ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್‌ 2023 ರ ಒಳಗಾಗಿ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗುವುದು.
240. ರಾಜ್ಯದ 3,798 ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಡಿಜಿಟಲ್‌ ಗ್ರಂಥಾಲಯಗಳನ್ನಾಗಿ ಪರಿವರ್ತಿಸಲಾಗಿದೆ. ನಮ್ಮ ರಾಜ್ಯದಲ್ಲಿ ಅನು‍ಷ್ಠಾನಗೊಳಿಸಿರುವ ಈ ಯೋಜನೆಯನ್ನು ಈ ವರ್ಷದ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಲಾಗಿದ್ದು, ನಮ್ಮ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ಗ್ರಂಥಾಲಯಗಳಿಲ್ಲದ 330 ಗ್ರಾಮ ಪಂಚಾಯಿತಿಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಲಾಗುವುದು. ವಿಶೇಷಚೇತನ ಮಕ್ಕಳಿಗಾಗಿ ರಾಜ್ಯದ
1,000 ಗ್ರಾಮೀಣ ಗ್ರಂಥಾಲಯಗಳನ್ನು ಉನ್ನತೀಕರಿಸಲಾಗುವುದು.
241. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಹಾಗೂ ಜನರ ಅವಶ್ಯಕತೆಗೆ ತಕ್ಕಂತೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಜಿಲ್ಲಾ ಯೋಜನಾ ಸಮಿತಿಗಳನ್ನು ಬಲಪಡಿಸಲಾಗುವುದು. ಪಂಚಾಯತ್ ರಾಜ್ ಸಂಸ್ಥೆಗಳ ವಿವಿಧ ಹಂತದ ಕಾರ್ಯನಿರ್ವಹಣೆ ಕುರಿತಂತೆ Responsibility Mapping ಮಾಡಲಾಗುವುದು.
242. ಗ್ರಾಮ ಪಂಚಾಯಿತಿಗಳಲ್ಲಿ ತಂತ್ರಜ್ಞಾನದ ಬಳಕೆಯನ್ನು ಮಾಡುವಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ತಂತ್ರಜ್ಞಾನದ ಮೂಲಕ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಪಂಚತಂತ್ರ 2.0 ಎಂಬ ತಂತ್ರಾಂಶವನ್ನು ಅಳವಡಿಸಲಾಗುವುದು.
243. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದಾಖಲಾತಿಯಿರುವ ಸರ್ಕಾರಿ ಶಾಲೆಗಳಲ್ಲಿ ಊಟ ಮಾಡಲು ಹಾಗೂ ಇತರೆ ಕಾರ್ಯಕ್ರಮಗಳಿಗೆ ಅನುವಾಗುವಂತೆ ನರೇಗಾ ಯೋಜನೆಯಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ 18 ಲಕ್ಷ ರೂ. ಗಳ ಘಟಕ ವೆಚ್ಚದಲ್ಲಿ ಆಹಾರ ಮಂದಿರಗಳನ್ನು ನಿರ್ಮಿಸಲಾಗುವುದು.
244. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 2021-22ರಲ್ಲಿ
1,500 ಕೋಟಿ ರೂ. ಒದಗಿಸಿದ್ದು, ಹಿಂದಿನ ಆಯವ್ಯಯದಲ್ಲಿ ನಮ್ಮ ಸರ್ಕಾರ 3,000 ಕೋಟಿ ರೂ. ಗಳಿಗೆ ಹೆಚ್ಚಿಸಿದೆ. ಈ ಅನುದಾನದಲ್ಲಿ 3,155 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಾದೇಶಿಕ ಅಸಮತೋಲನೆಯನ್ನು ಸರಿಪಡಿಸುವ ಉದ್ದೇಶದಿಂದ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5,000 ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು.
245. ಕರ್ನಾಟಕದ ಜಿಡಿಪಿಯು One Trillion Dollar Economy ಯನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯನ್ನು ನಮ್ಮ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸಲು ರಚಿಸಲಾದ ಕೈಗಾರಿಕಾ ತಜ್ಞರು ಮತ್ತು ಸರ್ಕಾರದ ಪ್ರತಿನಿಧಿಗಳ ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸುಗಳಂತೆ ಎಲ್ಲಾ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು.
246. ನೀತಿ ಆಯೋಗದ ಮಾದರಿಯಂತೆ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ (SITK) ಎಂದು ಪುನರ್ ರಚಿಸಲಾಗಿದ್ದು, ಈ ಸಂಸ್ಥೆಯ ಮೂಲಕ ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣಕ್ಕೆ ವಿನೂತನ ಪರಿಹಾರಗಳನ್ನು ರೂಪಿಸಲಾಗುವುದು.
247. ಹೊಸ ಕಾರ್ಯಕ್ರಮಗಳನ್ನು ರೂಪಿಸುವ ಸಂದರ್ಭದಲ್ಲಿ ದತ್ತಾಂಶ ವಿಶ್ಲೇಷಣೆ ಮತ್ತು ಮುನ್ಸೂಚನೆ ಪಡೆಯಲು Big Data Lake ಯೋಜನೆಯನ್ನು IIIT-B ಮತ್ತು ಇ-ಆಡಳಿತ ಕೇಂದ್ರದ (CeG) ಸಹಯೋಗದೊಂದಿಗೆ ಪ್ರಾರಂಭಿಸಲಾಗುವುದು.
248. ಮುಖ್ಯಮಂತ್ರಿಗಳ ಅಮೃತ್‌ ನಗರೋತ್ಥಾನ ಯೋಜನೆ (ಹಂತ-4) ರಡಿ 302 ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 3,885 ಕೋಟಿ ರೂ. ಗಳ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
249. ಕೇಂದ್ರ ಪುರಸ್ಕೃತ ಅಮೃತ್‌ 2.0 ಯೋಜನೆಯಡಿ ರಾಜ್ಯದ 287 ನಗರಗಳಲ್ಲಿ ಒಟ್ಟು ಯೋಜನಾ ಮೊತ್ತ 9,230 ಕೋಟಿ ರೂ. ಗಳಲ್ಲಿ ನೀರು ಸರಬರಾಜು, ಜಲಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನ ಮತ್ತಿತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಯಡಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ 2023-24ನೇ ಸಾಲಿನಲ್ಲಿ 185 ನಗರ ಮತ್ತು ಪಟ್ಟಣಗಳಲ್ಲಿ 6,820 ಕೋಟಿ ರೂ. ವೆಚ್ಚದಲ್ಲಿ ಸುಮಾರು 7.21 ಲಕ್ಷ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗುವುದು.
250. ರಾಜ್ಯದ 5,188 ಪೌರನೌಕರರಿಗೆ ಗೃಹ ನಿರ್ಮಾಣಕ್ಕಾಗಿ ಅನುಮೋದನೆ ನೀಡಲಾಗಿದ್ದು, ಅದರಲ್ಲಿ 3,733 ಮನೆಗಳು ಪೂರ್ಣಗೊಂಡಿದೆ. ಪ್ರಸಕ್ತ ವರ್ಷದಲ್ಲಿ ʻಪೌರ ಆಸರೆʼ ಯೋಜನೆಯಡಿ 5,000 ವಸತಿರಹಿತ ಪೌರನೌಕರರಿಗೆ 300 ಕೋಟಿ ರೂ. ಗಳ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ.
251. ಸ್ಮಾರ್ಟ್‌ ಸಿಟಿ ಅಭಿಯಾನದಲ್ಲಿ ಕರ್ನಾಟಕ ರಾಜ್ಯದಿಂದ ಏಳು ನಗರಗಳು ಆಯ್ಕೆಯಾಗಿದ್ದು, 5,900 ಕೋಟಿ ರೂ. ಅನುದಾನವನ್ನು 7 ನಗರಗಳಿಗೆ ಬಿಡುಗಡೆ ಮಾಡಲಾಗಿದ್ದು, 4,157 ಕೋಟಿ ರೂ. ಮೊತ್ತದ 506 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
ಈ ವರ್ಷದಲ್ಲಿ 3,395 ಕೋಟಿ ರೂ. ಮೊತ್ತದ 143 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.
252. ರಾಜ್ಯದ 196 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸುಮಾರು ಹತ್ತು ವರ್ಷಗಳಿಂದ ಸಂಗ್ರಹಣೆಯಾಗಿರುವ 179 ಲಕ್ಷ ಮೆಟ್ರಿಕ್‌ ಟನ್‌ Legacy Waste ಅನ್ನು ಎರಡು ವರ್ಷಗಳ ಅವಧಿಯೊಳಗೆ ತೆರವುಗೊಳಿಸಲು ಯೋಜಿಸಲಾಗಿದೆ. ಇದರಿಂದ ಸುಮಾರು 1,180 ಎಕರೆ ಪ್ರದೇಶವನ್ನು ಹಿಂಪಡೆದು ನಗರ ಅರಣ್ಯೀಕರಣ, ಉದ್ಯಾನವನ, ಮನರಂಜನೆ ಜಾಗಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
253. ಬೀದರ್‌ ಮತ್ತು ರಾಯಚೂರು ನಗರ ಸಭೆಗಳನ್ನು ಮಹಾನಗರಪಾಲಿಕೆಯನ್ನಾಗಿ ಉನ್ನತೀಕರಿಸುವ ಬಗ್ಗೆ ಮಾನದಂಡಗಳನ್ವಯ ಪರಿಶೀಲಿಸಲಾಗುವುದು.
254. ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾವೇರಿ, ಕೋಲಾರ ಮತ್ತು ರಾಮನಗರದಲ್ಲಿ Integrated Township ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಿಂದ Expression of Interest ಅನ್ನು ಆಹ್ವಾನಿಸಲಾಗಿದೆ. ಈ ಟೌನ್‌ಶಿಪ್‌ಗಳು ನಗರ ಯೋಜನೆಗೆ, ಹೊಸ ಉದ್ಯಮಗಳಿಗೆ ನೂತನ ಆಯಾಮವನ್ನು ನೀಡಲಿದೆ ಹಾಗೂ ಉತ್ತಮವಾದ ಜೀವನಶೈಲಿ ಹಾಗೂ ಕೆಲಸದ ವಾತಾವರಣ ಸೃಜಿಸಲಿವೆ.
255. ನಗರ ಮತ್ತು ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ ಖ್ಯಾತ ನಟರಾದ ದಿವಂಗತ ಶಂಕರ್‌ನಾಗ್‌ ರವರ ಹೆಸರಿನಲ್ಲಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು.
256. ವಿದ್ಯುತ್ ಕ್ಷೇತ್ರದಲ್ಲಿ ಬೆಳಕು ಯೋಜನೆಯಡಿ 124 ಕೋಟಿ ರೂ. ವೆಚ್ಚದಲ್ಲಿ 2.35 ಲಕ್ಷ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ, 24 ಗಂಟೆಗಳಲ್ಲಿಯೇ ವಿದ್ಯುತ್ ಪರಿವರ್ತಕ ಬದಲಾಯಿಸುವ ಕಾರ್ಯಕ್ರಮದಡಿ 1.37 ಲಕ್ಷ ವಿಫಲ ಪರಿವರ್ತಕಗಳ ಬದಲಾವಣೆ, 67,713 ಹೊಸ ವಿದ್ಯುತ್‌ ಪರಿವರ್ತಕಗಳ ಅಳವಡಿಕೆ ಮತ್ತು ಗಂಗಾ ಕಲ್ಯಾಣ ಯೋಜನೆಯಡಿ 4,268 ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕವೂ ಸೇರಿ ಹಲವು ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
257. ರಾಜ್ಯದಲ್ಲಿ 10 GW ಸಾಮರ್ಥ್ಯದ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಗುರಿಯೊಂದಿಗೆ ʻಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 2022-27ʼ ಜಾರಿಗೊಳಿಸಲಾಗಿದೆ. ಕಳೆದ ವರ್ಷ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಗ್ರೀನ್‌ ಹೈಡ್ರೋಜನ್‌ ಒಳಗೊಂಡಂತೆ ನವೀಕರಿಸಬಹುದಾದ ಇಂಧನಗಳ ಹೂಡಿಕೆಗೆ ಸುಮಾರು 1.68 ಲಕ್ಷ ಕೋಟಿ ರೂ. ಮೌಲ್ಯದ MoU ಗಳನ್ನು ಸಹಿ ಮಾಡಲಾಗಿದೆ.
258. 2022-23ನೇ ಸಾಲಿನಲ್ಲಿ ಸುಗಮ ವಿದ್ಯುತ್ ರವಾನೆ ಹಾಗೂ ಪ್ರಸರಣ ಜಾಲದ ಬಲವರ್ಧನೆಗಾಗಿ 16 ಹೊಸ ಉಪಕೇಂದ್ರಗಳ ಸ್ಥಾಪನೆ, 910 ಕಿ.ಮೀ. ಪ್ರಸರಣಾ ಮಾರ್ಗ ರಚನೆ ಮತ್ತು
151 ಉಪಕೇಂದ್ರಗಳ ಉನ್ನತೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಮುಂದುವರೆದು, 50 ಹೊಸ ಉಪ ಕೇಂದ್ರಗಳನ್ನು, 1,060 Circuit ಕಿ.ಮೀ. ಪ್ರಸರಣ ಮಾರ್ಗಗಳನ್ನು ಮತ್ತು 100 ಹಾಲಿ ಇರುವ ಉಪ ಕೇಂದ್ರಗಳ ಸಾಮರ್ಥ್ಯ ಉನ್ನತೀಕರಣ ಕಾಮಗಾರಿಗಳೂ ಸೇರಿದಂತೆ ಈ ವರ್ಷದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ವತಿಯಿಂದ 3,000 ಕೋಟಿ ರೂ. ಗಳ ಹೂಡಿಕೆ ಮಾಡಲಾಗುವುದು.
259. ಕರ್ನಾಟಕ ವಿದ್ಯುತ್‌ ನಿಗಮದ Generation Switchyard ಉಪಕರಣಗಳು ಹಾಗೂ ಸಂರಕ್ಷಣಾ ವ್ಯವಸ್ಥೆಗಳ ಆಧುನೀಕರಣವನ್ನು ಕೇಂದ್ರ ಸರ್ಕಾರದ ಪವರ್‌ ಸಿಸ್ಟಂ ಡೆವೆಲಪ್ಮೆಂಟ್‌ ಫಂಡ್‌ ಫೇಸ್‌-3 ಅಡಿಯಲ್ಲಿ 102 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
260. ಕರ್ನಾಟಕ ಸರ್ಕಾರವು ಈಗಾಗಲೇ ಶರಾವತಿ ಪಂಪ್ಡ್‌ ಸ್ಟೋರೇಜ್‌ ಪವರ್‌ ಪ್ಲ್ಯಾಂಟ್‌ನ (PSP) ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿದ್ದು, ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 7,394 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ವಿದ್ಯುತ್‌ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುವುದು. ಇದಲ್ಲದೇ, 1,000 MW ನ ಹೊಸ ಪಂಪ್ಡ್‌ ಸ್ಟೋರೇಜ್‌ ಘಟಕವನ್ನು, ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.
261. 2023-24ನೇ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ 4,000 MWH ಸಾಮರ್ಥ್ಯದ Battery Storage System ಗಳನ್ನು Viability Gap Funding ಮೂಲಕ ಉತ್ತೇಜಿಸುವುದಾಗಿ ಘೋಷಿಸಲಾಗಿದೆ. ಈ ಯೋಜನೆಯ ನೆರವಿನೊಂದಿಗೆ ಪಾವಗಡ ಸೋಲಾರ್‌ ಪಾರ್ಕ್‌ನಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಬ್ಯಾಟರಿ ಶೇಖರಣೆ ವ್ಯವಸ್ಥೆಯನ್ನು ಹೊಂದಿದ 2 MW ಸಾಮರ್ಥ್ಯದ ಸೌರ ಘಟಕವನ್ನು KREDL ವತಿಯಿಂದ ಸ್ಥಾಪಿಸಲಾಗುವುದು.
262. ರಾಜ್ಯದ ವಿದ್ಯುತ್‌ ಸರಬರಾಜು ಕಂಪನಿಗಳ ಬಲವರ್ಧನೆ ಮತ್ತು ಆರ್ಥಿಕ ಸ್ವಾವಲಂಬನೆ ಕುರಿತು ಅಧ್ಯಯನ ನಡೆಸುವ ಸಲುವಾಗಿ ಗುರುಚರಣ್‌ ಸಮಿತಿಯನ್ನು ರಚಿಸಲಾಗಿತ್ತು. ಸದರಿ ಸಮಿತಿಯ ಶಿಫಾರಸ್ಸುಗಳನ್ನು ಪರಿಶೀಲಿಸಿ ವಿದ್ಯುತ್‌ ಸರಬರಾಜು ಕಂಪನಿಗಳ ಕಾರ್ಯನಿರ್ವಹಣೆ ಮತ್ತು ಆರ್ಥಿಕ ಸ್ಥಿತಿಯ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
263. ಹಲವಾರು ವರ್ಷಗಳಿಂದ ಸಂಕಷ್ಟದಲ್ಲಿರುವ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಕಳೆದೆರಡು ಸಾಲಿನಲ್ಲಿ 31,869 ಕೋಟಿ ರೂ. ಗಳ ಅನುದಾನ ಒದಗಿಸುವ ಮೂಲಕ ನಮ್ಮ ಸರ್ಕಾರವು ಕಾಯಕಲ್ಪ ನೀಡಿದೆ. ಇದರಲ್ಲಿ 25,445 ಕೋಟಿ ರೂ. ಗಳನ್ನು ಉಚಿತ ವಿದ್ಯುತ್‌ ಯೋಜನೆಗಳಾದ ರೈತರ ಪಂಪ್‌ಸೆಟ್‌ ಯೋಜನೆ ಹಾಗೂ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಗಳಿಗೆ ನೀಡಲಾಗಿದೆ. 924 ಕೋಟಿ ರೂ. ಗಳ ಬಂಡವಾಳ ಹೂಡಿಕೆಯನ್ನು ಮಾಡಿದೆ. ಇದರ ಜೊತೆ 5,500 ಕೋಟಿ ರೂ. ಗಳ ವಿಶೇಷ ಆರ್ಥಿಕ ನೆರವು ಹಾಗೂ 2,564 ಕೋಟಿ ರೂ. ಗಳ ಹಿಂದಿನ ಸಾಲವನ್ನು ಹೊಂದಾಣಿಕೆಯ ಮೂಲಕ ಕೈಬಿಡಲಾಗಿದೆ. 2022-23 ಆರ್ಥಿಕ ವರ್ಷದಲ್ಲಿ ವಿದ್ಯುತ್‌ ಉತ್ಪದನಾ ಕಂಪನಿಗಳ ಹಿಂಬಾಕಿ ಪಾವತಿಗಾಗಿ ರಾಜ್ಯ ಸರ್ಕಾರವು ಸುಮಾರು 13,709 ಕೋಟಿ ರೂ. ಗಳ ಸಾಲಕ್ಕೆ ಖಾತರಿ ಯನ್ನು ನೀಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯದ ಇಂಧನ ಕಂಪನಿಗಳಿಗೆ 13,743 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು.
264. 2022-23ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ 4,221 ಕೋಟಿ ರೂ. ವೆಚ್ಚದಲ್ಲಿ 818 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಹಾಗೂ 1,093 ಕಿ.ಮೀ. ಜಿಲ್ಲಾ ಮತ್ತು ಇತರೆ ರಸ್ತೆಗಳ ಅಭಿವೃದ್ಧಿ, 135 ಸೇತುವೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ. ಜೀವಿತಾವಧಿ ಪೂರ್ಣಗೊಂಡಿರುವ 1,008 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಗಳ ನವೀಕರಣವನ್ನು 440 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮಾರ್ಚ್‌ 2023ರ ಅಂತ್ಯದೊಳಗೆ 3,720 ಕೋಟಿ ರೂ. ಗಳ ವೆಚ್ಚದಲ್ಲಿ 948 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಹಾಗೂ 1,364 ಕಿ.ಮೀ. ಉದ್ದದ ಜಿಲ್ಲಾ ಮತ್ತು ಇತರೆ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು.
265. 2014ರಲ್ಲಿ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಇಲ್ಲಿಯವರೆಗೂ ಕರ್ನಾಟಕದಲ್ಲಿ 64,512 ಕೋಟಿ ರೂ. ವೆಚ್ಚದಲ್ಲಿ 6,715 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗಿದೆ. ಮುಂದುವರೆದು, ಒಂದು ಲಕ್ಷ ಇಪ್ಪತ್ತು ಸಾವಿರ ಕೋಟಿ ರೂ. ಗಳ ವೆಚ್ಚದಲ್ಲಿ 3,084 ಕಿ.ಮೀ. ಹೆದ್ದಾರಿಯನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ೫,೪೮೬ ಕೋಟಿ ರೂ. ವೆಚ್ಚದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ, 8,408 ಕೋಟಿ ರೂ. ವೆಚ್ಚದ ಬೆಂಗಳೂರು-ರಾಮನಗರ-ಮಂಡ್ಯ-ಮೈಸೂರು ಹೆದ್ದಾರಿ, 4,544 ಕೋಟಿ ರೂ. ವೆಚ್ಚದ ಸೂರತ್-ಚೆನ್ನೈ ಎಕ್ಸ್‌ಪ್ರೆಸ್‌ವೇ, 1,200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ-ಧಾರವಾಡ ಆರು ಪಥಗಳ ರಸ್ತೆ, 2,200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ-ಹೊಸಪೇಟೆ-ಬಳ್ಳಾರಿ-ಆಂಧ್ರ ಗಡಿ ಹೆದ್ದಾರಿ, 2,611 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ-ದಾವಣಗೆರೆ-ಹಾವೇರಿ ಮಾರ್ಗದ ಆರು ಪಥದ ಹೆದ್ದಾರಿಗಳು ಸೇರಿವೆ. ಮೈಸೂರು-ಕುಶಾಲನಗರ ಮಾರ್ಗದಲ್ಲಿ ೯೨ ಕಿ.ಮಿ. ಉದ್ದದ ಹೆದ್ದಾರಿಯನ್ನು ೪,೧೨೮ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆಯಾಗಿದೆ.
266. ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಸುಗಮ ಸಂಚಾರಕ್ಕೆ ಅನುವಾಗುವಂತೆ, ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರದ ವತಿಯಿಂದ 124 ಕೋಟಿ ರೂ. ವೆಚ್ಚದಲ್ಲಿ 145 ರಸ್ತೆ ಸುರಕ್ಷತಾ ಕಪ್ಪು ಸ್ಥಳ ನಿವಾರಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
267. 2022-23ನೇ ಸಾಲಿನಲ್ಲಿ ಉಂಟಾದ ಅತೀವೃಷ್ಟಿ ಹಾಗೂ ನೆರೆಹಾವಳಿಯಿಂದ ಹಾನಿಗೊಳಗಾದ ಇಲಾಖೆಯ ರಸ್ತೆ ಮತ್ತು ಸೇತುವೆಗಳ ದುರಸ್ತಿ ಮತ್ತು ಪುನರ್‌ ನಿರ್ಮಾಣ ಕಾಮಗಾರಿಗಳನ್ನು ಒಟ್ಟು 500 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.
268. ರಾಜ್ಯ ಕೋರ್‌ ನೆಟ್ ವರ್ಕ್ ರಸ್ತೆ ಜಾಲದಲ್ಲಿ 1,700 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ರಸ್ತೆಗಳನ್ನು ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಯೋಜನೆಯ (ಎಸ್.ಹೆಚ್.ಡಿ.ಪಿ) ಹಂತ-4, ಘಟ್ಟ-3 ರಡಿ 2,000 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣ ಮಾಡಲಾಗುವುದು.
269. ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಸಂಪರ್ಕ ಕಲ್ಪಿಸಲು, ಪ್ರಾದೇಶಿಕ ಅಸಮತೋಲನವನ್ನು ಸರಿದೂಗಿಸಲು ಹಾಗೂ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ನೀಡಲು, ಬಾಹ್ಯ ನೆರೆವಿನ ಯೋಜನೆಯಾದ ಕೆಶಿಪ್-4 ರಡಿ 2,943 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ರಸ್ತೆಯನ್ನು ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. ಈ ಯೋಜನೆಗೆ 5,000 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ.
270. ಜಿಲ್ಲಾ ಕೇಂದ್ರಗಳಲ್ಲಿ ಸಂಪರ್ಕ ಜಾಲವನ್ನು ವಿಸ್ತರಿಸಲು ಹಾಗೂ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲು ಅನುಮೋದನೆಗೊಂಡಿರುವ 5,000 ಕಿ.ಮೀ. ಉದ್ದದ ಜಿಲ್ಲಾ ಪ್ರಮುಖ ರಸ್ತೆಗಳ ಕಾಮಗಾರಿಗಳಿಗೆ 1,500 ಕೋಟಿ ರೂ. ಗಳ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಲಾಗುವುದು.
271. ಕಲ್ಯಾಣ ಕರ್ನಾಟಕದ ಪ್ರಮುಖ ಸಂಪರ್ಕ ರಸ್ತೆಯಾದ 411 ಕಿ.ಮೀ. ಉದ್ದದ ಬೀದರ್ – ಕಲಬುರಗಿ – ಬಳ್ಳಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರವು ಜಂಟಿಯಾಗಿ 7,650 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.
272. ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ರಭಸದಿಂದ ಹರಿಯುವ ಹಳ್ಳ ತೊರೆಗಳನ್ನು ಸುರಕ್ಷಿತವಾಗಿ ದಾಟಲು ಹಾಗೂ ಸಂಪರ್ಕರಹಿತ ಜನ ವಸತಿ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು
500 ಕಾಲುಸಂಕಗಳ ನಿರ್ಮಾಣ ಕಾಮಗಾರಿಯನ್ನು 250 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.
273. ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಗಳ ವಿಶೇಷ ಪ್ಯಾಕೇಜನ್ನು ನೀಡಲಾಗುವುದು.
274. ರಾಜ್ಯ ಸರ್ಕಾರವು ರೈಲ್ವೆ ಮಂತ್ರಾಲಯದೊಂದಿಗೆ 50:50 ರ ವೆಚ್ಚ ಹಂಚಿಕೆ ಆಧಾರದಲ್ಲಿ 9 ಹೊಸ ರೈಲ್ವೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರವು ನಿರ್ಮಾಣ ವೆಚ್ಚದ ಪಾಲನ್ನು ಒದಗಿಸುವುದಲ್ಲದೇ, ಎಲ್ಲಾ ಯೋಜನೆಗಳಿಗೆ ಭೂ ಸ್ವಾಧೀನದ ವೆಚ್ಚವನ್ನು ಸಹ ಭರಿಸಲಿದೆ. ಈ ವರ್ಷದ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಕರ್ನಾಟಕದ ರೈಲು ಜಾಲವನ್ನು ಅಭಿವೃದ್ಧಿಪಡಿಸಲು 7,561 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ.
275. ಕೇಂದ್ರ ಸರ್ಕಾರವು ಈ ವರ್ಷದಲ್ಲಿ ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ 220 ಕೋಟಿ ರೂ., ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ., ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 210 ಕೋಟಿ ರೂ., ಮುನಿರಾಬಾದ್-ಗಿಣಿಗೇರಾ-ರಾಯಚೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ., ಗದಗ-ವಾಡಿ ರೈಲ್ವೆ ಮಾರ್ಗಕ್ಕೆ 200 ಕೋಟಿ ರೂ., ತುಮಕೂರು-ರಾಯದುರ್ಗ ರೈಲ್ವೆ ಮಾರ್ಗಕ್ಕೆ 225 ಕೋಟಿ ರೂ., ಒಳಗೊಂಡಂತೆ ಎಲ್ಲಾ ಹೊಸ ರೈಲ್ವೆ ಕಾಮಗಾರಿಗಳಿಗೆ ಒಟ್ಟಾರೆಯಾಗಿ 1,537 ಕೋಟಿ ರೂ. ಗಳನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಒದಗಿಸಲಾಗಿದೆ.
276. ಇದಲ್ಲದೆ, ಡಬ್ಲಿಂಗ್‌ ಕಾಮಗಾರಿಗಳಿಗೂ ಸಹ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಬೈಯ್ಯಪ್ಪನಹಳ್ಳಿ-ಹೊಸೂರು 100 ಕೋಟಿ ರೂ., ಹುಬ್ಬಳ್ಳಿ-ಚಿಕ್ಕಜಾಜೂರು 150 ಕೋಟಿ ರೂ., ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ವಾಸ್ಕೋ-ಡ-ಗಾಮ 400 ಕೋಟಿ ರೂ., ಗದಗ-ಹೋಟಗಿ 170 ಕೋಟಿ ರೂ., ಕೆ.ಆರ್. ಪುರಂ-ವೈಟ್‌ಫೀಲ್ಡ್‌ 250 ಕೋಟಿ ರೂ. ಒಳಗೊಂಡಂತೆ ಎಲ್ಲಾ ಡಬ್ಲಿಂಗ್‌ ಕಾಮಗಾರಿಗಳಿಗೆ ಈ ವರ್ಷದಲ್ಲಿ 1,490 ಕೋಟಿ ರೂ. ಗಳನ್ನು ಒದಗಿಸಲಾಗುತ್ತಿದೆ. ಈ ಎಲ್ಲಾ ಕಾಮಗಾರಿಗಳಿಗೆ ಅಗತ್ಯವಿರುವ ರಾಜ್ಯ ಸರ್ಕಾರದ ಪಾಲನ್ನು ನೀಡಲಾಗುವುದು.
277. ತುಮಕೂರು – ರಾಯದುರ್ಗ, ಗಿಣಿಗೇರಾ – ರಾಯಚೂರು, ಬಾಗಲಕೋಟೆ-ಕುಡಚಿ ಮತ್ತು ಚಿಕ್ಕಮಗಳೂರು-ಬೇಲೂರು ರೈಲ್ವೆ ಮಾರ್ಗಗಳ ಮೂಲ ಅಂದಾಜು 2,880 ಕೋಟಿ ರೂ. ಗಳಿದ್ದು, ಕಳೆದ ವರ್ಷದಲ್ಲಿ ಇದನ್ನು 5,838 ಕೋಟಿ ರೂ. ಗಳಿಗೆ ಪರಿಷ್ಕರಿಸಲಾಗಿದ್ದು, ಇದಕ್ಕೆ 960 ಕೋಟಿ ರೂ. ಗಳ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು. ಮುಂದುವರೆದು, ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನಕ್ಕಾಗಿ 150 ಕೋಟಿ ರೂ.,ಗಳನ್ನು ಈ ವರ್ಷದಲ್ಲಿ ಒದಗಿಸಲಾಗುವುದು.
278. ಸುಗಮ ಸಂಚಾರ ಮತ್ತು ಸಮಯದ ಉಳಿತಾಯದ ದೃಷ್ಟಿಯಿಂದ ಜನ ಸಾಮಾನ್ಯರು ವಿಮಾನ ಪ್ರಯಾಣಕ್ಕೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ದಾಖಲೆ ಪ್ರಮಾಣದ ೫ ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿಗಳನ್ನು ಶಿವಮೊಗ್ಗ, ವಿಜಯಪುರ, ಹಾಸನ, ರಾಯಚೂರು ಮತ್ತು ಕಾರವಾರ ಜಿಲ್ಲೆಗಳಲ್ಲಿ ಕೈಗೆತ್ತಿಕೊಂಡಿದೆ. ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿಯೇ ಪೂರ್ಣಗೊಳಿಸಲಾಗುವುದು.
279. ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ, ಹೊಸ ಟೆಂಡರ್‌ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್‌ ಪ್ರಕ್ರಿಯೆ ಮೂಲಕ
PPP ಮಾದರಿಯಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು. ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂ. ಗಳಷ್ಟು ಹಂಚಿಕೆ ಮಾಡಲಾಗಿದೆ.
280. ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಈಗಾಗಲೇ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದ್ದು, ಪ್ರಸ್ತುತ ಸಾಲಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು.
281. ಕಳೆದ ವರ್ಷದಲ್ಲಿ ರಾಜ್ಯದ ಸಣ್ಣ ಬಂದರುಗಳ ಮುಖಾಂತರ 6 ಲಕ್ಷ ಟನ್ನುಗಳಿಗಿಂತ ಹೆಚ್ಚು ಸರಕುಗಳನ್ನು ಸರಬರಾಜು ಮಾಡಲಾಗಿದೆ. ಭಾರತ ಸರ್ಕಾರದ ಸಾಗರಮಾಲ ಯೋಜನೆಯಡಿ ಈಗಾಗಲೇ 370 ಕೋಟಿ ರೂ. ಗಳ ನಾಲ್ಕು ಕಿರು ಬಂದರುಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ 597 ಕೋಟಿ ರೂ. ಗಳ 12 ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುವುದು.
282. ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲವಾಗಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ಪಾವಿನ ಕುರ್ವೆಯಲ್ಲಿ 14 MTPA ಸಾಮರ್ಥ್ಯದ Deep Water All Weather Greenfield ಬಂದರುಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಲಾಗುವುದು.
283. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
284. ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್‌ಯಾರ್ಡ್ಸ್ ಲಿಮಿಟೆಡ್‌ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್‌ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.
285. ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುವುದು.
286. ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, Blue Economy ಯ ಅಭಿವೃದ್ಧಿಗಾಗಿ ADB ಸಹಯೋಗದೊಂದಿಗೆ ಅಂದಾಜು ೧,೧೦೦ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.
287. ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್‌ಗಳ ಸೇವೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಅಲ್ಲದೆ, ಬಾಗಲಕೋಟೆ-ಕಂಕಣವಾಡಿ-ಕದಮ್‌ಪುರ, ಕಲಬುರಗಿ-ಸನ್ನತಿ, ಶಿವಮೊಗ್ಗ-ಕೊಗರು-ಶಿಗ್ಲು, ಮಂಗಳೂರು-ಹಂಗಾರಕಟ್ಟೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಹೊಸ Light Cargo Transport (LCT) ಬೋಟ್‌ ಸೇವೆಗಳನ್ನು ಪ್ರಾರಂಭಿಸಲಾಗುವುದು.
288. ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ
ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು
ಮಂಗಳೂರು – ಕಾರವಾರ – ಗೋವಾ – ಮುಂಬಯಿ Waterways ಅನ್ನು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
289. ಕೇಂದ್ರ ಸರ್ಕಾರದ ಇತ್ತೀಚಿನ ವರದಿಯ ಪ್ರಕಾರ 2022-23ನೇ ಸಾಲಿನಲ್ಲಿ ನಮ್ಮ ರಾಜ್ಯವು 41.6 ಸಾವಿರ ಕೋಟಿ ರೂ. ವಿದೇಶಿ ಬಂಡವಾಳ ಹೂಡಿಕೆ ಪಡೆದಿರುತ್ತದೆ ಮತ್ತು 75,439 ಮಿಲಿಯನ್‌ ಡಾಲರ್‌ ಮೊತ್ತದ ರಫ್ತನ್ನು ಮಾಡಿದೆ. ರಾಜ್ಯದ ಅತ್ಯುತ್ತಮ ಆರ್ಥಿಕ ಪ್ರಗತಿಯನ್ನು ಬಿಂಬಿಸುವ ಈ ಎರಡೂ ಸೂಚ್ಯಂಕಗಳಲ್ಲಿ ಕರ್ನಾಟಕವು ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಹಾಗೆಯೇ
Ease of Doing Business ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ “ಟಾಪ್‌ ಅಚೀವರ್” ಆಗಿ ಹೊರಹೊಮ್ಮಿದೆ.
290. ಪ್ರಸ್ತುತ ವರ್ಷದಲ್ಲಿ ರಾಜ್ಯ ಸರ್ಕಾರವು ಅನುಮೋದಿಸಿದ 393 ಕೈಗಾರಿಕಾ ಯೋಜನೆಗಳಿಂದ 2.37 ಲಕ್ಷ ಕೋಟಿ ರೂ. ಗಳ ಬಂಡವಾಳ ಹೂಡಿಕೆಯೊಂದಿಗೆ ಸುಮಾರು 2 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆಯುವ ನಿರೀಕ್ಷೆ ಇದೆ. ಮುಂದುವರೆದು, ʻಇನ್ವೆಸ್ಟ್‌ ಕರ್ನಾಟಕ 2022ʼ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಹೊಸದಾಗಿ 9.82 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ಆಕರ್ಷಿಸಿದೆ.
291. ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ವಿವಿಧ ವಲಯಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ʻಕರ್ನಾಟಕ ಉದ್ಯೋಗ ನೀತಿ 2022-25ʼ, ʻಕರ್ನಾಟಕ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-27ʼ ಹಾಗೂ ʻವಿಶೇಷ ಹೂಡಿಕೆ ಪ್ರದೇಶ ಕಾಯಿದೆ, 2022ʼ ಅನ್ನು ಜಾರಿಗೊಳಿಸಲಾಗಿದೆ.
292. 2023-24ನೇ ಸಾಲಿನಲ್ಲಿ ನಾಲ್ಕು ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ಪ್ರದೇಶಗಳನ್ನು ವಿಶೇಷ ಹೂಡಿಕೆ ಪ್ರದೇಶಗಳೆಂದು ʻಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ, 2022ʼ ರಡಿ ಅಧಿಸೂಚಿಸಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು.
293. ಬಹು-ರಾಷ್ಟ್ರೀಯ ಕಂಪನಿಗಳ ಕಾರ್ಯಾಚರಣೆಯನ್ನು ತ್ವರಿತವಾಗಿ ಪ್ರಾರಂಭಿಸಲು, KIADB ಸಂಸ್ಥೆಯು ಬೆಂಗಳೂರಿನ ಸುತ್ತಮುತ್ತ ವಿಶ್ವದರ್ಜೆಯ Plug and Play ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.
294. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್‌ನ ಹುಮನಾಬಾದ್‌, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರು ಹೀಗೆ 9 ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಸ್ಥಾಪಿಸಲಾಗುವುದು.
295. ದೇವನಹಳ್ಳಿಯಲ್ಲಿ ಸ್ಥಾಪಿಸಲಾಗಿರುವ ಡಾ|| ಬಿ.ಆರ್. ಅಂಬೇಡ್ಕರ್‌ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿಸ್ತರಣೆಗೆ 2 ಕೋಟಿ ರೂ. ಅನುದಾನವನ್ನು ನೀಡಲಾಗುವುದು.
296. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ಸೇವಾ ವಲಯದಲ್ಲಿನ ಮಹಿಳಾ ಉದ್ದಿಮೆದಾರರಿಗೆ 2 ಕೋಟಿ ರೂ. ವರೆಗೆ ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಇದನ್ನು 5 ಕೋಟಿ ರೂ. ವರೆಗೆ ಹೆಚ್ಚಿಸಲಾಗುವುದು.
297. ರಾಜ್ಯ ಸರ್ಕಾರವು ಖನಿಜಾನ್ವೇಷಣೆ, ಗಣಿ ಹರಾಜು ಮತ್ತು ಪ್ರಾರಂಭಿಸುವಿಕೆಯಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ
ಕೇಂದ್ರ ಗಣಿ ಮಂತ್ರಾಲಯ ʻರಾಷ್ಟ್ರೀಯ ಖನಿಜ ವಿಕಾಸ ಪುರಸ್ಕಾರʼ ಪ್ರಶಸ್ತಿ ನೀಡಿರುತ್ತದೆ.
298. 2018ರಿಂದ ನೆನೆಗುದಿಗೆ ಬಿದ್ದಿದ್ದ ಜಿಲ್ಲಾ ಸಮಗ್ರ ಗಣಿ ಬಾಧಿತ ಪರಿಸರ ಪುನಶ್ಚೇತನ ಅಭಿವೃದ್ಧಿ ಯೋಜನೆಗಳನ್ನು (CEPMIZ) ನಮ್ಮ ಸರ್ಕಾರ, ತನ್ನ ನಿರಂತರ ಪ್ರಯತ್ನದಿಂದ, ಏಪ್ರಿಲ್‌ 2022 ರಲ್ಲಿ 24,997 ಕೋಟಿ ರೂ. ಗಳ ಯೋಜನೆಗೆ ಸರ್ವೋಚ್ಛ ನ್ಯಾಯಾಲಯದ ಅನುಮೋದನೆ ಪಡೆದಿದೆ. ಈ ಪೈಕಿ 4,332 ಕೋಟಿ ರೂ. ಗಳ ಮೊತ್ತದ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ
151 ಯೋಜನೆಗಳಿಗೆ ಮೇಲ್ವಿಚಾರಣಾ ಪ್ರಾಧಿಕಾರವು ಅನುಮೋದನೆ ನೀಡಿದ್ದು, ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು.
299. ನಮ್ಮ ಸರ್ಕಾರವು ʻಕರ್ನಾಟಕ ಉಪಖನಿಜಗಳ ರಿಯಾಯಿತಿ ನಿಯಮಗಳು, 1994ʼ ರ ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಹೆಚ್ಚು ಸಮಯ ತೆಗೆದುಕೊಳ್ಳುವ ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಕಾರ್ಯವಿಧಾನವನ್ನು ಸರಳೀಕರಿಸಲಿದೆ. ಆ ಮೂಲಕ ಸಾರ್ವಜನಿಕರಿಗೆ ಉಪಖನಿಜ ಪೂರೈಕೆ ಮಾಡಲು ನಿಯಮಗಳಲ್ಲಿ ಏಕರೂಪತೆಯನ್ನು ತರಲಾಗುವುದು.
300. ರಾಜ್ಯದಲ್ಲಿ ವಂಶಪಾರಂಪರ್ಯವಾಗಿ ಜೀವನ ನಿರ್ವಹಣೆಗೆ ಕಟ್ಟಡ ಕಲ್ಲು ಗಣಿಗಾರಿಕೆಯನ್ನು ಅವಲಂಬಿಸಿರುವ ಜನರಿಗೆ ಸರ್ಕಾರವು ಕಟ್ಟಡ ಕಲ್ಲು ಗಣಿಗಾರಿಕೆ ಅನುಮತಿಯಲ್ಲಿ ರಿಯಾಯಿತಿ ನೀಡಲು ನಿಯಮಗಳನ್ನು ಸರಳೀಕರಿಸಲಾಗುವುದು.
301. ಹಿಂದಿನ ಆಯವ್ಯಯದಲ್ಲಿ ಮೈಶುಗರ್‌ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಘೋಷಿಸಿದ್ದೇನೆ. ಕಾರ್ಖಾನೆಯು ಪ್ರಾರಂಭಗೊಂಡಿದ್ದು, ಪ್ರಸಕ್ತ ವರ್ಷದಲ್ಲಿ ಎಥನಾಲ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುವುದು.
302. ಪ್ರಸಕ್ತ ವರ್ಷದಲ್ಲಿ ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನೂತನ ಮೆಗಾ ಜವಳಿ ಪಾರ್ಕ್‌ ಮತ್ತು ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕ್ ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಇದರಿಂದಾಗಿ ಸುಮಾರು 25,000 ಜನರಿಗೆ ಉದ್ಯೋಗ ಸೃಜನೆಯಾಗಲಿದೆ.
303. ನಮ್ಮ ರಾಜ್ಯದ ನೇಕಾರರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ವಿಶೇಷ ನೆರವು ನೀಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.
 ನೇಕಾರ ಸಮ್ಮಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನ 3,000 ರೂ. ಗಳಿಂದ 5,000 ರೂ. ಗಳಿಗೆ ಹೆಚ್ಚಿಸಲಾಗಿದೆ.
 ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್‌ ಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಕಾರ್ಮಿಕರಿಗೂ ಸಹ ನೇಕಾರ್‌ ಸಮ್ಮಾನ್‌ ಯೋಜನೆಯನ್ನು ವಿಸ್ತರಿಸಲಾಗಿದೆ.
 ನೇಕಾರ್‌ ಸಮ್ಮಾನ್‌ ಯೋಜನೆಯಿಂದ ಸುಮಾರು 1.5 ಲಕ್ಷ ನೇಕಾರರಿಗೆ ಅನುಕೂಲವಾಗಲಿದ್ದು 75 ಕೋಟಿ ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೇಕಾರರ ಖಾತೆಗೆ ಜಮೆ ಮಾಡಲಾಗಿದೆ.
 ಐದು ಹೆಚ್‌ಪಿ ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್‌ ಒದಗಿಸಲಾಗುವುದು ಮತ್ತು Fixed Charges ನಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು.
 ನೇಕಾರರ ಪ್ಯಾಕೇಜ್‌ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದ ಫಲಾನುಭವಿಗಳಿಂದ ಸ್ಥಾಪಿಸಲಾಗುವ ಅತಿ ಸಣ್ಣ ಘಟಕಗಳಿಗೆ ಒಂದು ಕೋಟಿ ರೂ. ವರೆಗಿನ ಜವಳಿ ಮತ್ತು ಸಿದ್ಧ ಉಡುಪು ಘಟಕಗಳಿಗೆ ಶೇ.50 ರಷ್ಟು ಅಥವಾ ಗರಿಷ್ಠ 50 ಲಕ್ಷ ರೂ. ಗಳ ಬಂಡವಾಳ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ.
 ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ 2019-24 ಅನ್ನು ಪರಿಷ್ಕರಿಸಲಾಗಿದ್ದು, ಅದರ ಪರಿಣಾಮವಾಗಿ ರಾಜ್ಯದಲ್ಲಿ 4,292 ಕೋಟಿ ರೂ. ಗಳ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದು, ಇದರಿಂದಾಗಿ ಸುಮಾರು 44,257 ಜನರಿಗೆ ಉದ್ಯೋಗ ಸೃಜನೆಯಾಗಲಿದೆ.
304. ಕರ್ನಾಟಕವು ದೇಶದ ಐಟಿ ರಫ್ತಿನಲ್ಲಿ ಶೇ. 38 ರಷ್ಟು ಹಾಗೂ ಇಂಜಿನಿಯರಿಂಗ್‌ R & D ಯಲ್ಲಿ ಶೇ. 40ರಷ್ಟು ಪಾಲು
ಹೊಂದಿದೆ. Global Capability Centres (GCC) Ecosystem ಅಡಿಯ ಮಾನವ ಸಂಪನ್ಮೂಲದ ಶೇ. 35 ರಷ್ಟು ಬೆಂಗಳೂರಿನಲ್ಲಿದೆ. ಐಟಿ ವಲಯದಲ್ಲಿ ರಾಜ್ಯದ ಮುನ್ನಡೆಯನ್ನು ಕಾಯ್ದುಕೊಳ್ಳಲು Beyond Bengaluru ಎಂಬ ಘೋಷವಾಕ್ಯದೊಂದಿಗೆ 2 ಹಾಗೂ 3ನೇ ಹಂತದ ನಗರಗಳಲ್ಲಿ ಡಿಜಿಟಲ್ ಮೂಲಸೌಕರ್ಯಗಳನ್ನು ಬಲಪಡಿಸಲು ಆದ್ಯತೆ ನೀಡಲಾಗುತ್ತಿದೆ.
305. ಕರ್ನಾಟಕವು 163 Billion Dollars ಅಂದಾಜು ಮೌಲ್ಯದ
40 ಯುನಿಕಾರ್ನ್‌ಗಳ ನೆಲೆಯಾಗಿದೆ. 2022-23ನೇ ಸಾಲಿನಲ್ಲಿ ಕರ್ನಾಟಕದ 6 ಸ್ಟಾರ್ಟಪ್‌ಗಳಿಗೆ ಯುನಿಕಾರ್ನ್ ಪಟ್ಟ ದೊರಕಿದೆ.
306. ಐಟಿ ವಲಯದಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳಲು ರಾಜ್ಯ ಸರ್ಕಾರವು ʻಕರ್ನಾಟಕ ಸ್ಟಾರ್ಟಪ್‌ ನೀತಿ 2022-27ʼ, ʻಕರ್ನಾಟಕ ಡೇಟಾ ಸೆಂಟರ್ ನೀತಿ 2022-27ʼ ಹಾಗೂ ʻಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತಾ ನೀತಿʼಯನ್ನು 2022 ರಲ್ಲಿ ಜಾರಿಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ʻಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿʼ ಮತ್ತು ʻAVGC ನೀತಿʼಯನ್ನು ಪರಿಷ್ಕರಿಸಲಾಗುವುದು.
307. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಮಹಿಳೆಯರು ಹಾಗೂ ಹಿಂದುಳಿದ ವರ್ಗದವರ ಸ್ಟಾರ್ಟಪ್‌ ಗಳನ್ನು ಉತ್ತೇಜಿಸಲು ELEVATE ಉನ್ನತಿ 2022, ಅಮೃತ ಸ್ಟಾರ್ಟಪ್ಗಳು 2022 ಮತ್ತು ELEVATE ಕಲ್ಯಾಣ ಕರ್ನಾಟಕವನ್ನು ಪ್ರಾರಂಭಿಸಲಾಗಿದೆ. ELEVATE ಯೋಜನೆ ಅಡಿಯಲ್ಲಿ ಈಗಾಗಲೇ 93 ಸ್ಟಾರ್ಟಪ್‌ಗಳನ್ನು ಗುರುತಿಸಿ, ಪ್ರೋತ್ಸಾಹ ನೀಡಲಾಗುತ್ತಿದೆ.
308. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಅತ್ಯಾಧುನಿಕ ಸ್ಟಾರ್ಟ್‌ಪ್ ಪಾರ್ಕ್ ಅನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.
309. ಬೆಂಗಳೂರು ಬಯೋ-ಇನೋವೇಶನ್ ಸೆಂಟರ್ (BIC) ಮತ್ತು ಸಾಂಕ್ರಾಮಿಕ ರೋಗಗಳ ಸಂಶೋಧನಾ ಪ್ರತಿಷ್ಠಾನ (IDRF) ಸಹಯೋಗದೊಂದಿಗೆ ಸಾಂಕ್ರಾಮಿಕ ಸನ್ನದ್ದತೆ ಕೇಂದ್ರವನ್ನು ಸ್ಥಾಪಿಸಲು ಮೊದಲ ಹಂತದಲ್ಲಿ ಸರ್ಕಾರವು 10 ಕೋಟಿ ರೂ. ಬೆಂಬಲ ನೀಡಲು ನಿರ್ಧರಿಸಿದೆ.
310. ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಅರಿವು ಮೂಡಿಸಲು 6 ಪ್ರಾದೇಶಿಕ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು.
311. ರಾಜ್ಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಯ ಪ್ರೋತ್ಸಾಹನೆಗೆ ಎಲ್ಲಾ ಹಿತಾಸಕ್ತರುಗಳಿಂದ ಅವಶ್ಯಕ ಬೆಂಬಲ ಖಚಿತಪಡಿಸಿಕೊಳ್ಳಲು ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಅಂತರ್‌ ಇಲಾಖೆಗಳ ಸಮನ್ವಯ ಸಾಧಿಸಲು Karnataka State Research Foundation ಅನ್ನು ಸ್ಥಾಪಿಸಲಾಗುವುದು.
312. ಆರ್ಥಿಕ ಅಭಿವೃದ್ಧಿಗೆ ಉತ್ತೇಜನೆ ವಲಯಕ್ಕೆ 2023-24ನೇ ಸಾಲಿಗೆ 61,488 ಕೋಟಿ ರೂ. ಗಳ ಅನುದಾನ ಒದಗಿಸಿದೆ.
[17/02, 12:55 pm] Shankar Pagoji: ವಲಯ 4 – ಬೆಂಗಳೂರು ಸಮಗ್ರ ಅಭಿವೃದ್ಧಿ
313. ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ.
314. ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಕಾರಿಡಾರ್‌ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
315. ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.
316. ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ Integrated ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು.
317. 1,00೦ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
318. ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300 ಕೋಟಿ ರೂ. ಒದಗಿಸಲಾಗುವುದು.
319. ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್‌ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
320. ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀ.ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ,
58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ.
321. ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿ.ಮೀ. ಉದ್ದದ
31 ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದಕ್ಕೆ 16,328 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮತಿ ದೊರಕಿದ ನಂತರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
322. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ Satellite Town Ring Road ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.
323. ಬೆಂಗಳೂರು ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (BSRP) ರಾಜ್ಯ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯವು 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಸಿರು ನಿಶಾನೆ ನೀಡಿವೆ. ಈಗಾಗಲೇ ಮೊದಲನೇ ಹಂತದ ಕಾಮಗಾರಿಗಳು ಪ್ರಗತಿಯಲ್ಲಿದ್ದು,
2024-25ನೇ ವರ್ಷದಲ್ಲಿ ಯೋಜನೆಯ ಹಂತ-1ನ್ನು ಪೂರ್ಣಗೊಳಿಸಲಾಗುವುದು. ಈ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 1,350 ಕೋಟಿ ರೂ. ಗಳು ಹಾಗೂ ರಾಜ್ಯ ಸರ್ಕಾರದಿಂದ 1,000 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.
324. ಬೆಂಗಳೂರು ಉಪನಗರ ರೈಲು ಯೋಜನೆಯ ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ನಡುವಿನ ಕಾರಿಡಾರ್-2ರ ವಯಾ-ಡಕ್ಟ್‌ ಕಾಮಗಾರಿಗಳಿಗೆ 860 ಕೋಟಿ ರೂ. ಮೊತ್ತಕ್ಕೆ ಕಾರ್ಯಾದೇಶ ನೀಡಿದ್ದು, ಕಾಮಗಾರಿಗಳು ಪ್ರಾರಂಭವಾಗಿದೆ.
325. ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಹಲವಾರು ಸಂಸ್ಥೆಗಳ ಕಾರ್ಯಾಚರಣೆಯನ್ನು ಸಮನ್ವಯಿಸಲು ಉನ್ನತಾಧಿಕಾರದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರವನ್ನು ರಚಿಸಲಾಗಿದೆ.
326. ಹವಾಮಾನ ಬದಲಾವಣೆಯ ಪರಿಣಾಮವನ್ನು ಕಡಿಮೆ ಮಾಡಲು ಮತ್ತು ಬೆಂಗಳೂರಿನಲ್ಲಿ ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಗಳ ಯೋಜನೆಯನ್ನು ವಿಶ್ವಬ್ಯಾಂಕ್‌ನ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲಾ ಕೆರೆಗಳಿಗೆ
Sluice Gateಗಳನ್ನು ಅಳವಡಿಸಲಾಗುವುದು. ಇದರಿಂದ ನೀರಿನ ಹರಿವಿನ ವೇಗ ಮತ್ತು ಪ್ರಮಾಣವನ್ನು ನಿಯಂತ್ರಿಸಲು ಅನುಕೂಲವಾಗುವುದು.
327. ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಗಳನ್ನು 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜೈಕಾ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ತೆಗೆದುಕೊಂಡಿದ್ದು, ಎಲ್ಲಾ ಕಾಮಗಾರಿಗಳು 2023-24ನೇ ಸಾಲಿನಲ್ಲಿ ಪೂರ್ಣ ಗೊಳಿಸಲಾಗುವುದು. 775 ಎಂ.ಎಲ್‌.ಡಿ ಸಾಮರ್ಥ್ಯ ಹೊಂದಿರುವ ಈ ಯೋಜನೆಯನ್ನು ಪೂರ್ಣಗೊಳಿಸುವುದರಿಂದ ನಗರದ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನೆರವಾಗಲಿದೆ.
328. ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು ಅನುಷ್ಠಾನಗೊಳಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ರಾಜ್ಯ ಸರ್ಕಾರದ ವತಿಯಿಂದ 200 ಕೋಟಿ ರೂ. ಆರ್ಥಿಕ ನೆರವು ನೀಡಲಾಗುವುದು.
329. ಪ್ರಸ್ತುತ ಬೆಂಗಳೂರು ನಗರದಲ್ಲಿ 1,850 ಎಂ.ಎಲ್.ಡಿ. ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು, ಇದರಲ್ಲಿ 1,500 ಎಂ.ಎಲ್.ಡಿ. ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ. ಹೆಚ್ಚುವರಿಯಾಗಿ 350 ಎಂ.ಎಲ್.ಡಿ. ಸಾಮರ್ಥ್ಯವನ್ನು ಒದಗಿಸುವುದರೊಂದಿಗೆ ಸಂಪೂರ್ಣ ತ್ಯಾಜ್ಯ ನೀರನ್ನು ಸಂಸ್ಕರಿಸಲಾಗುವುದು.
330. ಮೆಗಾಸಿಟಿ ರಿವಾಲ್ವಿಂಗ್‌ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್‌ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಗಳನ್ನು 1,200 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗಿದೆ.
331. ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರುಗಳು ಹಾಗೂ ಕಾಂಪಾಕ್ಟರುಗಳು ಕಾರ್ಯಾಚರಣೆ ಮಾಡಲಿವೆ. ಆಯಾ ವಾರ್ಡ್‌ಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಪ್ರತಿ ವಾರ್ಡ್‌ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆರಹಿತ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
332. ವಾಣಿಜ್ಯ ಮಳಿಗೆಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದನ್ನು ಕಡ್ಡಾಯಗೊಳಿಸುವ ಮೂಲಕ ಸ್ಥಳೀಯವಾಗಿಯೇ ತ್ಯಾಜ್ಯ ಸಂಸ್ಕರಣೆಗೆ ಒತ್ತು ನೀಡಲಾಗುವುದು.
333. ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್‌ ಮತ್ತು 27 ಸ್ಮಾರ್ಟ್‌ ವರ್ಚುಯಲ್ ಕ್ಲಿನಿಕ್‌ (Smart Virtual Clinic) ಗಳನ್ನು ಅನುಮೋದಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ 50 ಡಯಾಲಿಸಿಸ್‌ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ. ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು ʻಬೆಂಗಳೂರು ಹೆಲ್ತ್‌ ಸಿಸ್ಟಮ್ಸ್ʼ ಎಂದು ಪುನರ್‌ ರಚನೆ ಮಾಡಲು ಉದ್ದೇಶಿಸಲಾಗಿದೆ.
334. 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿದ್ದ
20 ಬೆಂಗಳೂರು ಪಬ್ಲಿಕ್‌ ಶಾಲೆಗಳನ್ನು ಕಾರ್ಯಗತಗೊಳಿಸಲಾಗಿದೆ. ಮುಂದುವರೆದು, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ. ಗಳ ವೆಚ್ಚದಲ್ಲಿ ಯೋಜನೆಗಳನ್ನು ತಯಾರಿಸಿದ್ದು, ಸದರಿ ಕಾಮಗಾರಿಗಳನ್ನು 2023-24 ನೇ ಸಾಲಿನಲ್ಲಿ ಪೂರ್ಣ ಗೊಳಿಸಲಾಗುವುದು.
335. ಬೆಂಗಳೂರಿನಲ್ಲಿ 2022-23 ರವರೆಗೆ, ಪ್ರತಿ ವರ್ಷ ಸುಮಾರು
10 ಲಕ್ಷ ಸಸಿಗಳನ್ನು ನೆಡಲಾಗಿದೆ. 2023-24 ರಿಂದ ಇದನ್ನು ವರ್ಷಕ್ಕೆ 15 ಲಕ್ಷ ಸಸಿಗಳಿಗೆ ಹೆಚ್ಚಿಸಲಾಗುವುದು ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ 3 ಹೊಸ ಹೈಟೆಕ್‌ ನರ್ಸರಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.
336. ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್‌ಗಳ ಅಳವಡಿಕೆ ಮತ್ತು GPS ತಂತ್ರಾಂಶದ ಮುಖಾಂತರ ಕಣ್ಗಾವಲು ಕ್ರಮ ಕೈಗೊಳ್ಳಲಾಗುವುದು.
337. ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ ʻThe Safe City Projectʼ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 1,640 ಸ್ಥಳಗಳಲ್ಲಿ 4,100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಈ ಕ್ಯಾಮರಾಗಳನ್ನು Integrated Control and Command Centre ಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ ಮೇಲೆ ನಿಗಾವಹಿಸಲಾಗುತ್ತಿದೆ. ಈ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸುವ ಸಲುವಾಗಿ 261 ಕೋಟಿ ರೂ. ಅನುದಾನವನ್ನು ನೀಡಲಾಗುವುದು.
338. ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ʻShe Toiletʼ ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್‌ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು.
339. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಿದೆ.
[17/02, 12:55 pm] Shankar Pagoji: ವಲಯ 6: ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಜಾನಪದಗಳು, ರಾಜ್ಯ ಸಾಮ್ರಾಜ್ಯಗಳು,
ಗುರುಸ್ಥಾನಗಳು, ಧರ್ಮಗಳು, ಭಾಷೆ ವಿದ್ಯೆಗಳು,
ಕಾಣಿಸದೆ ಸಾಗಿಹವು ಕಾಲಪ್ರವಾಹದಲಿ
ಮಾನವತೆ ನಿಂತಿಹುದು ಮಂಕುತಿಮ್ಮ
– ಡಿ.ವಿ.ಜಿ.
ಅಂತಹ ಮಾನವೀಯ ಆರ್ದ್ರತೆಯ ನಮ್ಮ ಆಡಳಿತದ ಜೀವದ್ರವ್ಯ.
390. ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹಲವು ಸಕಾರಾತ್ಮಕ ಬೆಳವಣಿಗೆಗಳನ್ನು ನಾವು ಕಂಡಿದ್ದೇವೆ. ರಾಜ್ಯದ ತಲಾ ಆದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂ. ಗಳಿಂದ 3.32 ಲಕ್ಷ ರೂ. ಗಳಿಗೆ ಹೆಚ್ಚಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದೇಶದ ಸರಾಸರಿಗಿಂತ ಕಡಿಮೆಯಾಗಿದ್ದು, ಅಭಿವೃದ್ಧಿಯ ಬೆಳವಣಿಗೆ ದರ ಹೆಚ್ಚಾಗಿದೆ. ಶಿಶು ಮರಣ ದರ ಹಾಗೂ ತಾಯಿ ಮರಣ ದರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಇದಲ್ಲದೆ ರಾಜ್ಯದಲ್ಲಿ ಪ್ರವಾಹ, ಬೆಳೆನಷ್ಟ, ಮಾನವ-ವನ್ಯಪ್ರಾಣಿ ಸಂಘರ್ಷ, ಜಾನುವಾರುಗಳಿಗೆ ಸಾಂಕ್ರಾಮಿಕದಂತಹ ಸಂಕಷ್ಟಗಳು ತಲೆದೋರಿದಾಗಲೆಲ್ಲ ನಮ್ಮ ಸರ್ಕಾರ ಜನರ ನೆರವಿಗೆ ಧಾವಿಸಿದೆ. ಸಕಾಲದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಾಕ್ಲಿಯರ್ ಇಂಪ್ಲಾಂಟ್, ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೆರವಿನಂತಹ ಸೂಕ್ಷ್ಮ ಕ್ರಮಗಳನ್ನು ಕೈಗೊಂಡಿದ್ದೇವೆ. ಆ ಮೂಲಕ ಸ್ಪಂದನಾಶೀಲ
ಹಾಗೂ ಸಂವೇದನಾಶೀಲ ಸರ್ಕಾರವಾಗಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ತಂತ್ರಜ್ಞಾನದ ಸದ್ಬಳಕೆಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ Ease of Living ಆಶಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಒತ್ತು ನೀಡುತ್ತಿದೆ.
391. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ.
ಈ ಎಲ್ಲಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿಯೇ ಪೂರ್ಣಗೊಳಿಸಿ ನೇಮಕಾತಿ ಆದೇಶವನ್ನು ನೀಡಲಾಗುವುದು.
392. ಇದೇ ರೀತಿ ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗುವುದು.
393. ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸರ್ಕಾರಕ್ಕೆ ಒಟ್ಟು
5 ವರದಿಗಳನ್ನು ಸಲ್ಲಿಸಿದ್ದು, ಇದರಲ್ಲಿ 3,630 ಇಲಾಖಾವಾರು ಶಿಫಾರಸ್ಸುಗಳು ಒಳಗೊಂಡಿವೆ. ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಆಡಳಿತದಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರುವ ಮೂಲಕ ಮನೆ ಬಾಗಿಲಿಗೇ ಸರ್ಕಾರ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದೇವೆ.
394. ರಾಜ್ಯ ಸರ್ಕಾರವು 1,475 ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿ ಮತ್ತು ಇತರೆ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದೆ. ಈ ಪೈಕಿ ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ
342 ದಾಖಲೆರಹಿತ ಜನವಸತಿಗಳ 52,000 ಫಲಾನುಭವಿಗಳಿಗೆ
ಮಾನ್ಯ ಪ್ರಧಾನ ಮಂತ್ರಿಗಳ ಮೂಲಕ ಹಕ್ಕು ಪತ್ರಗಳನ್ನು ವಿತರಿಸಿ ದಾಖಲೆ ನಿರ್ಮಿಸಿದ್ದೇವೆ.
395. ಸರ್ಕಾರಿ ಜಮೀನನ್ನು ದಶಕಗಳಿಂದ ಒತ್ತುವರಿ ಮಾಡಿಕೊಂಡು ಕಾಫಿ, ಟೀ, ಮತ್ತು ಇನ್ನಿತರೆ ಪ್ಲಾಂಟೇಶನ್‌ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು 30 ವರ್ಷಗಳ ಅವಧಿಗೆ ಗರಿಷ್ಠ 25 ಎಕರೆ ಮಿತಿಗೆ ಒಳಪಟ್ಟು ಗುತ್ತಿಗೆ ನೀಡಲು ಕರ್ನಾಟಕ
ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, 2023-24ನೇ ಸಾಲಿನಲ್ಲಿ ಈ ಕಾಯ್ದೆ ಜಾರಿಗೊಳಿಸಲು ನಿಯಮಗಳನ್ನು ರೂಪಿಸಲಾಗುವುದು. ಇದೇ ರೀತಿ ಸಮಸ್ಯೆಗಳಿರುವ ಮತ್ತಿತರೆ ಪ್ರಕರಣಗಳನ್ನೂ ಸಹ ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುವುದು.
396. ವಿವಿಧ ನಾಗರಿಕ ಸೇವೆಗಳನ್ನು ಜನರಿಗೆ ಸ್ಥಳೀಯವಾಗಿ ದೊರಕಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನೀಡಲಾಗುತ್ತಿದ್ದ ಹಲವು ಸೇವೆಗಳನ್ನು ನಾಡ ಕಛೇರಿ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ನೀಡುವ ಮೂಲಕ ಜನರ ಮನೆ ಬಾಗಿಲಿಗೇ ಆಡಳಿತವನ್ನು ತಲುಪಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಟ್ಟಿದ್ದೇವೆ. ಈಗಾಗಲೇ
ಈ ವರ್ಷದಲ್ಲಿ ಗ್ರಾಮ ಒನ್‌ ಕೇಂದ್ರ ಹಾಗೂ ನಾಡಕಛೇರಿಗಳ ಮೂಲಕ 1.5 ಕೋಟಿ ಅರ್ಜಿಗಳನ್ನು ವಿಲೇ ಮಾಡಲಾಗಿದೆ.
397. ʻಹಲೋ ಕಂದಾಯ ಸಚಿವರೇʼ ಸಹಾಯವಾಣಿ ಯೋಜನೆಯಡಿ ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 79,951 ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ನೀಡಲಾಗಿದೆ.
398. ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನ ಬೆಟ್ಟ ಇತ್ಯಾದಿ ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡುವ ಕುರಿತು ಒಂದು ನೀತಿಯನ್ನು ರೂಪಿಸುವ ಸಲುವಾಗಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗುವುದು.
399. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೇರು ಕೃಷಿ ಉದ್ದೇಶಕ್ಕಾಗಿ ಗುತ್ತಿಗೆಗೆ ನೀಡಲಾಗಿರುವ ಸುಮಾರು 4,292 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯವನ್ನು ವಿಧಿಸಿ ಖಾಯಂ ಆಗಿ ಮಂಜೂರು ಮಾಡಲು ಕರ್ನಾಟಕ ʻಭೂ ಮಂಜೂರಾತಿ ನಿಯಮಗಳು 1969ʼ ಗೆ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ.
400. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: 30.05.2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.
401. ರೈತರಿಗೆ ತುರ್ತಾಗಿ ಭೂಮಾಪನಾ ನಕ್ಷೆ ಬೇಕಾಗಿದ್ದಲ್ಲಿ ʻಸ್ವಾವಲಂಬಿʼ ಯೋಜನೆಯಡಿ ಸ್ವತಃ ನಕ್ಷೆ ತಯಾರಿಸಲು ಅವಕಾಶ ಕಲ್ಪಿಸಲಾಗಿದ್ದು, 5 ಸಾವಿರಕ್ಕಿಂತ ಹೆಚ್ಚು ಜನ ಈಗಾಗಲೇ ಈ ಸೌಲಭ್ಯ ಪಡೆದುಕೊಂಡಿದ್ದಾರೆ. ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಗಣಕೀಕೃತಗೊಳಿಸಿ ಮೋಜಣಿ ಗಣಕ ವ್ಯವಸ್ಥೆಯಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಸಾಲಿನಲ್ಲಿ 3,000 ಗ್ರಾಮಗಳನ್ನು ಪೋಡಿ ಮುಕ್ತಗೊಳಿಸಲಾಗುವುದು.
402. ಗ್ರಾಮ ಸಹಾಯಕರ ಹುದ್ದೆಯನ್ನು ‘ಜನಸೇವಕ’ ಎಂದು ಮರುನಾಮಕರಣ ಮಾಡಿ ಸರ್ಕಾರದ ವತಿಯಿಂದ ನೀಡುತ್ತಿರುವ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಜನರಿಗೆ ತಲುಪುತ್ತಿದೆಯೇ ಎಂದು ಖಾತರಿ ಪಡಿಸುವ ಜವಾಬ್ದಾರಿಯನ್ನು ನೀಡಲಾಗುವುದು. ಇವರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 13,000 ರೂ. ಗಳಿಂದ 14,000 ರೂ. ಗಳಿಗೆ ಹೆಚ್ಚಿಸಲಾಗುವುದು.
403. ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ
2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ.
ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
404. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.
405. ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,೦೦೦ ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ.
406. ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳನ್ನು ಮಾದರಿ ಉಪನೋಂದಣಿ ಕಛೇರಿಗಳಾಗಿ ಪರಿವರ್ತಿಸಲಾಗುವುದು. ಮೊದಲನೇ ಹಂತದಲ್ಲಿ ಪ್ರಸಕ್ತ ಸಾಲಿನಲ್ಲಿ 8 ಕಛೇರಿಗಳನ್ನು ಅಭಿವೃದ್ಧಿಪಡಿಸಲಾಗುವುದು.
407. ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆಯ ಹಂತ-3 ನ್ನು 150 ಕೋಟಿ ರೂ. ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
408. ಕರ್ನಾಟಕ ರಾಜ್ಯದೆಲ್ಲೆಡೆ 7,363 ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿಯವರೆಗೆ 1.5 ಕೋಟಿ ನಾಗರಿಕ ಸೇವೆಗಳನ್ನು ಒದಗಿಸಲಾಗಿದೆ.
409. ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕಾಗಿ ಸೈಬರ್‌ ಭದ್ರತೆ ಕಾರ್ಯಾಚರಣೆ ಕೇಂದ್ರವನ್ನು (csoc) ಯಶಸ್ವಿಯಾಗಿ ಅನುಷ್ಠಾನ ಹಾಗೂ ಕಾರ್ಯಗತಗೊಳಿಸಲಾಗಿದೆ.
410. ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 330 ಯೋಜನೆಗಳನ್ನು ನೇರ ನಗದು ವರ್ಗಾವಣೆ ವ್ಯವಸ್ಥೆ ಮತ್ತು ಆಧಾರ್ ಮೂಲಕ ಸೇವಾ ವಿತರಣೆಯಡಿ ತರಲಾಗಿದೆ. ಅದರಲ್ಲಿ
2021-22ನೇ ಸಾಲಿನಲ್ಲಿ 118 ಯೋಜನೆಗಳನ್ನು ಈ ವೇದಿಕೆಯ ವ್ಯಾಪ್ತಿಯಡಿ ತರಲಾಗಿದೆ. ಪ್ರಸಕ್ತ ಸಾಲಿನಲ್ಲಿ 1.43 ಕೋಟಿ ಫಲಾನುಭವಿಗಳ ಖಾತೆಗೆ 6,323 ಕೋಟಿ ರೂ. ಹಣವನ್ನು ಡಿಬಿಟಿ ವ್ಯವಸ್ಥೆಯಡಿ ವರ್ಗಾಯಿಸಲಾಗಿದೆ.
411. ಹಣಕಾಸು ಸಂಸ್ಥೆಗಳನ್ನು FRUITS, ಕಾವೇರಿ ಮತ್ತು ಭೂಮಿ ತಂತ್ರಾಂಶದೊಂದಿಗೆ ಸಂಯೋಜಿಸುವ ಮೂಲಕ ಕೃಷಿ ಸಾಲ ವಿತರಣೆ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಕರ್ನಾಟಕ ಸರ್ಕಾರದ FRUITS ಯೋಜನೆಯನ್ನು ಭಾರತ ಸರ್ಕಾರವು
ಅಗ್ರಿ ಸ್ಟಾಕ್‌ ಪ್ರೋಗ್ರಾಮ್‌ ಆಗಿ ಸಂಯುಕ್ತ ಮಾದರಿಯಲ್ಲಿ ದೇಶದೆಲ್ಲೆಡೆ ಪರಿಚಯಿಸಲಾಗಿದೆ.
412. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ತಂತ್ರಾಂಶದ ಅಭಿವೃದ್ಧಿಗಾಗಿ ಕ್ಲೌಡ್‌ ತಂತ್ರಜ್ಞಾನ ಆಧಾರಿತ 3ನೇ ಹಂತದ ದತ್ತಾಂಶ ಕೇಂದ್ರವನ್ನು 590 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
413. ಕನ್ನಡ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡಲು ರಾಜ್ಯದ Tier-2 ನಗರಗಳಲ್ಲಿ 100 ರಿಂದ 200 ಆಸನಗಳ ಸಾಮರ್ಥ್ಯವುಳ್ಳ ಮಿನಿ ಥಿಯೇಟರ್ ಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುವುದು.
414. 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ನೂತನ ಪೊಲೀಸ್ ಕಛೇರಿಗಳು, ಪೊಲೀಸ್ ಠಾಣೆಗಳ ನಿರ್ಮಾಣ, ಉನ್ನತೀಕರಣ ಮತ್ತು ಆಧುನೀಕರಣಕ್ಕೆ 348 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದೇ ರೀತಿ 410 ಕೋಟಿ ರೂ. ಗಳ ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ ಮತ್ತು 51 ಕೋಟಿ ರೂ. ಗಳ ವೆಚ್ಚದಲ್ಲಿ ಕಾರಾಗೃಹ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
415. ಪೊಲೀಸ್‌ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ 240 ಕೋಟಿ ರೂ. ಗಳ ವೆಚ್ಚದಲ್ಲಿ 116 ನೂತನ ಪೊಲೀಸ್‌ ಠಾಣೆಗಳನ್ನು ನಿರ್ಮಿಸಿ ನಮ್ಮ ಸರ್ಕಾರ ದಾಖಲೆ ನಿರ್ಮಿಸಿರುತ್ತದೆ. ಉಳಿದ ಪೊಲೀಸ್‌ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು.
416. ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹೊಸದಾಗಿ ನಾಲ್ಕು ಸಂಚಾರಿ ಪೊಲೀಸ್‌ ಠಾಣೆಗಳನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಬೆಂಗಳೂರಿನಲ್ಲಿ ಒಂಭತ್ತು ಕಾನೂನು ಮತ್ತು ಸುವ್ಯವಸ್ಥೆ, ಐದು ಸಂಚಾರಿ, ಆರು ಮಹಿಳಾ ಪೊಲೀಸ್‌ ಠಾಣೆಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು. ಬೆಂಗಳೂರು ನಗರದ ಪೊಲೀಸ್‌ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಹಂತಗಳಲ್ಲಿ ಹೆಚ್ಚುವರಿಯಾಗಿ 2,000 ಹುದ್ದೆಗಳನ್ನು ಸೃಜಿಸಲಾಗುವುದು.
417. ಪೊಲೀಸ್‌ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಅತ್ಯಂತ ಮಹತ್ತರ ಹೆಜ್ಜೆಯನ್ನಿಟ್ಟಿದ್ದು, ʻಪೊಲೀಸ್‌ ಗೃಹ – 2025ʼ ಯೋಜನೆಯಡಿ 2022-23ನೇ ಸಾಲಿನಲ್ಲಿ 250 ಕೋಟಿ ರೂ. ಗಳನ್ನು ಒದಗಿಸಲಾಗಿದ್ದು, ಪ್ರಸಕ್ತ ವರ್ಷ 450 ಕೋಟಿ ರೂ. ಗಳನ್ನು ಒದಗಿಸುವುದರ ಮೂಲಕ 3,000 ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು.
418. ರಾಜ್ಯದಲ್ಲಿ ಈಗಾಗಲೇ 8 ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ವರದಿಗಾಗಿ ಕಾಯುವ ಅವಧಿಯನ್ನು ಎರಡು ವರ್ಷಗಳಿಂದ ಒಂದು ತಿಂಗಳಿಗೆ ಇಳಿಸಲಾಗಿದೆ. ಪ್ರಸಕ್ತ ವರ್ಷ 10 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಪ್ರಾರಂಭಿಸಲಾಗುವುದು.
419. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಧಾರವಾಡದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲಾಗುವುದು.
420. ಹಳೆಯ ಮತ್ತು ಅನುಪಯುಕ್ತ ವಾಹನಗಳನ್ನು ಹಂತ ಹಂತವಾಗಿ ಬದಲಾಯಿಸಿ ಹೊಸ ವಾಹನಗಳನ್ನು ಇಲಾಖೆಗೆ ಸೇರ್ಪಡೆಗೊಳಿಸಲು ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
421. ಕಾರಾಗೃಹದಲ್ಲಿನ ಬಂದಿಗಳ ಅಭ್ಯುದಯಕ್ಕಾಗಿ ಬಂದೀಖಾನೆ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದೆ. ಬಂದಿಗಳ ಜೀವನ ಸುಧಾರಣೆಗೆ ಮತ್ತು ಶಿಕ್ಷೆಯ ಅವಧಿಯ ನಂತರ ಪುನರ್ವಸತಿಗೆ ಸಶಕ್ತೀರಣಗೊಳಿಸಲು ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಬಂದಿಗಳಿಗೆ ನೀಡುವ ಕೂಲಿ ದರಗಳನ್ನು ಕನಿಷ್ಠ ವೇತನ ಕಾಯಿದೆ ಅನ್ವಯ ಹೆಚ್ಚಿಸಲು ಕ್ರಮವಹಿಸಲಾಗಿರುತ್ತದೆ. ಕಾರಾಗೃಹಗಳಲ್ಲಿನ ಆಸ್ಪತ್ರೆಗಳ ನಿರ್ವಹಣೆಯನ್ನು ಸುಧಾರಿಸಲು ಈ ಆಸ್ಪತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗುತ್ತಿದೆ.
422. ವಿಜಯಪುರ, ಬೀದರ್‌, ಮಂಗಳೂರು ಮತ್ತು ಬೆಂಗಳೂರು ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಗರಿಷ್ಠ ಭದ್ರತಾ ಕಾರಾಗೃಹ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಕಾರಾಗೃಹ ಸಾಮರ್ಥ್ಯ 4,000 ರಷ್ಟು ಹೆಚ್ಚಾಗಿರುತ್ತದೆ. ಅಲ್ಲದೇ, ರಾಜ್ಯದ ಉಳಿದ ಕಾರಾಗೃಹಗಳಲ್ಲಿಯೂ ಸಹ 1,465 ಬಂದಿಗಳ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮವಹಿಸಲಾಗಿದೆ.
423. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್‍-2 ಯೋಜನೆ ಅಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ 125 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಯಲು ಹಾಗೂ ರಕ್ಷಣಾ ಕಾರ್ಯ ನಿರ್ವಹಿಸಲು 90 ಮೀಟರ್ ಎತ್ತರ ತಲುಪಬಲ್ಲ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಖರೀದಿಸಲಾಗಿರುತ್ತದೆ. ಇವೆಲ್ಲ ಕ್ರಮಗಳಿಂದ ಪ್ರಸ್ತುತ ಸಾಲಿನಲ್ಲಿ ಅಗ್ನಿಶಾಮಕ ಇಲಾಖೆಯಿಂದ 3,521 ಮಾನವ ಜೀವ ಹಾಗೂ 794.6 ಕೋಟಿ ರೂ. ಮೊತ್ತದ ಆಸ್ತಿ ಪಾಸ್ತಿ ರಕ್ಷಣೆ ಮಾಡಲು ಸಾಧ್ಯವಾಗಿರುತ್ತದೆ. ಈ ಯೋಜನೆಗೆ ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಗಳನ್ನು ಕಾಯ್ದಿರಿಸಲಾಗಿದೆ.
424. ದಾವಣಗೆರೆ ನಗರದಲ್ಲಿ ಹೊಸ ಎಸ್‍.ಡಿ.ಆರ್‍.ಎಫ್. ಕಂಪನಿ ಮಂಜೂರು ಮಾಡಲಾಗಿರುತ್ತದೆ. ರಾಜ್ಯದಲ್ಲಿನ ಎಸ್‍.ಡಿ.ಆರ್‍.ಎಫ್. ಪಡೆಗಳಿಗೆ 30 ಕೋಟಿ ರೂ.ಮೊತ್ತದ ಶೋಧನಾ ಮತ್ತು ರಕ್ಷಣಾ ಉಪಕರಣಗಳನ್ನು ಒದಗಿಸಲಾಗಿದೆ.
425. ರಾಜ್ಯದಲ್ಲಿ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಸಹಾಯಕ ಪಡೆಯಾಗಿ ಕಾರ್ಯ ನಿರ್ವಹಿಸುತ್ತಿರುವ 35 ಸಾವಿರ ನೋಂದಾಯಿತ ಗೃಹರಕ್ಷಕರಿಗೆ ಪ್ರಸ್ತುತ ಪ್ರತಿ ದಿನಕ್ಕೆ ನೀಡುತ್ತಿರುವ ಕರ್ತವ್ಯಭತ್ಯೆ 100 ರೂ. ನಷ್ಟು ಹೆಚ್ಚಿಸಲಾಗುವುದು.
426. ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ಇನ್ನಷ್ಟು ಬಲಪಡಿಸಲು 1,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
427. ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ವೆಬ್‌ ಸೈಟ್‌ ಗಳು, ಆನ್-ಲೈನ್‌ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್‌ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ 24×7 ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು.
428. ರಾಜ್ಯದ ಸಾರಿಗೆ ಇಲಾಖೆಯ ವಾಹನ ಹಾಗೂ ಸಾರಥಿ ಸೇವೆಗೆ ಸಂಬಂಧಿಸಿದ 31 ಸೇವೆಗಳನ್ನು ಸಂಪರ್ಕ ರಹಿತವಾಗಿ ಸಾರ್ವಜನಿಕರಿಗೆ ಆನ್‌ಲೈನ್‌ ಮೂಲಕ ಒದಗಿಸಲಾಗುತ್ತಿದೆ. ಅಲ್ಲದೇ, ಕೇಂದ್ರ ಸರ್ಕಾರದ ಮಾದರಿಯಲ್ಲಿ ʻನೊಂದಾಯಿತ ವಾಹನಗಳ ನಾಶಪಡಿಸುವಿಕೆ ನೀತಿ-2022ʼನ್ನು (Registered Vehicle Scrapping Policy-2022) ಜಾರಿಗೊಳಿಸಿದೆ. ಕೇಂದ್ರದ ಸಹಭಾಗಿತ್ವದಲ್ಲಿ 22 ಕೋಟಿ ರೂ. ವೆಚ್ಚದಲ್ಲಿ Vehicle Location Tracking System (VLTS) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
429. ಮಂಗಳೂರು ಮತ್ತು ಕಲಬುರಗಿಗಳಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಭಾರಿ ವಾಹನ ಚಾಲಕರ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸಲಾಗಿರುತ್ತದೆ. ರಾಜ್ಯದ ಶಿವಮೊಗ್ಗ, ಹಾಸನ, ಧಾರವಾಡ, ಮಂಗಳೂರು, ರಾಯಚೂರು ಮತ್ತು ಬೆಳಗಾವಿ ನಗರಗಳಲ್ಲಿ
38 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ. ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್, ಯಾದಗಿರಿ ಮತ್ತು ದಾವಣಗೆರೆಗಳಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಮೈಸೂರು ಹಾಗೂ ಧಾರವಾಡಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ವಾಹನ ತಪಾಸಣಾ ಮತ್ತು ಪ್ರಮಾಣೀಕರಣ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
430. ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿರುತ್ತದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿನ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಲಾರಿ ಚಾಲಕರಿಗೆ ಹಾಗೂ
ಇ-ಕಾಮರ್ಸ್‌ನಡಿ ಡೆಲಿವರಿ ಸೇವೆಯನ್ನು ನೀಡುತ್ತಿರುವವರ ಅವಲಂಬಿತರಿಗೆ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರು ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳ ವಿಮಾ ಸೌಲಭ್ಯ ಹಾಗೂ ಅಪಘಾತದಲ್ಲಿ ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳಂತೆ ಒಟ್ಟು 4 ಲಕ್ಷ ರೂ. ಗಳ ವಿಮಾ ಸೌಲಭ್ಯ ಕಲ್ಪಿಸಲು ʻಮುಖ್ಯಮಂತ್ರಿ ವಿಮಾ ಯೋಜನೆʼ ಯನ್ನು ರೂಪಿಸಲಾಗುವುದು. ಇದರಿಂದ ಒಟ್ಟು 16.50 ಲಕ್ಷ ಜನರಿಗೆ ಸಹಾಯವಾಗುತ್ತಿದೆ.
431. ತುಮಕೂರು, ಹಾವೇರಿ, ಯಲಹಂಕ, ಕಸ್ತೂರಿನಗರ, ಸಕಲೇಶಪುರ, ಕೆಜಿಎಫ್‌, ಚಿಂತಾಮಣಿ, ಸಾಗರ, ಗೋಕಾಕ್‌, ರಾಣೆಬೆನ್ನೂರು, ದಾಂಡೇಲಿ, ಶಿರಸಿ ಮತ್ತು ಭಾಲ್ಕಿ ನಗರಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ಒಟ್ಟು 85 ಕೋಟಿ ರೂ. ಗಳ ವೆಚ್ಚದಲ್ಲಿ ರಸ್ತೆ ಸುರಕ್ಷತಾ ನಿಧಿಯ ಅನುದಾನದಿಂದ ನಿರ್ಮಿಸಲಾಗುವುದು.
432. ಸಾರಿಗೆ ಇಲಾಖೆಯಲ್ಲಿ ಇ-ಚಲನ್ ವ್ಯವಸ್ಥೆಯಡಿ ಪ್ರವರ್ತನ ಚಟುವಟಿಕೆಗಳಲ್ಲಿ ಸಂಗ್ರಹವಾದ ರಾಜಿ ದಂಡವನ್ನು ಪಾವತಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾದೇಶಿಕ
ಸಾರಿಗೆ ಅಧಿಕಾರಿಗಳ ಕಛೇರಿ, ರಾಜಾಜಿನಗರದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಹಂತ ಹಂತವಾಗಿ ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು.
433. ವಿದ್ಯುತ್‌ ಚಾಲಿತ ವಾಹನಗಳ ಉಪಯೋಗವನ್ನು ಉತ್ತೇಜಿಸುವ ಮೂಲಕ ವಾಯುಮಾಲಿನ್ಯವನ್ನು ಕಡಿಮೆಗೊಳಿಸುವ ದೃಷ್ಟಿಯಿಂದ ರಾಜ್ಯದಲ್ಲಿನ ಸರ್ಕಾರಿ ಕಛೇರಿಗಳು ಮತ್ತು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಡಿಪೋಗಳಲ್ಲಿ ಹಸಿರು ತೆರಿಗೆ ನಿಧಿಯ ಅನುದಾನದಡಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿರುತ್ತದೆ.
434. ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿನ ವ್ಯವಸ್ಥೆಯನ್ನು ಸುಧಾರಿಸುವ ಮತ್ತು ನಿಗಮಗಳನ್ನು ಬಲಪಡಿಸುವ ಉದ್ದೇಶದಿಂದ ರಚಿಸಲಾಗಿದ್ದ ಎಂ. ಆರ್‌ ಶ್ರೀನಿವಾಸಮೂರ್ತಿ ಸಮಿತಿಯು ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿನ ಶಿಫಾರಸ್ಸುಗಳ ಅನುಸಾರ ನಿಗಮಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣೆ ಸೇರಿದಂತೆ ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
435. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ 2022-23ನೇ ಸಾಲಿನಲ್ಲಿ 2,335 ಕೋಟಿ ರೂ. ಗಳ ಮೊತ್ತದ ಆರ್ಥಿಕ ಸಹಾಯವನ್ನು ಒದಗಿಸಲಾಗಿದೆ. ಇದಲ್ಲದೇ 1,505 ಕೋಟಿ ರೂ. ಮೊತ್ತದಲ್ಲಿ ವಾಹನ ತೆರಿಗೆಯಿಂದ ವಿನಾಯಿತಿ ಹಾಗೂ ತೆರಿಗೆಯನ್ನು ಬಂಡವಾಳವಾಗಿ ಪರಿವರ್ತಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ವಿಶೇಷ ಅವಕಾಶವನ್ನು ಮಾಡಿಕೊಡಲಾಗಿರುತ್ತದೆ. ಒಟ್ಟಾರೆಯಾಗಿ 3,840 ಕೋಟಿ ರೂ. ಗಳ ಸಹಾಯವನ್ನು ಒದಗಿಸಲಾಗಿರುತ್ತದೆ.
436. 2022-23ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 3,526 ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 1,200 ಹೊಸ ಬಸ್ಸುಗಳನ್ನು ಸಂಸ್ಥೆಗಳಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರದಿಂದ 500 ಕೋಟಿ ರೂ. ಗಳ ಆರ್ಥಿಕ ಸಹಾಯವನ್ನು ಒದಗಿಸಲಾಗುವುದು. ಪ್ರಪ್ರಥಮ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಸಾರಿಗೆ ಸಂಸ್ಥೆಗಳಿಗೆ ಹೊಸ ಬಸ್‌ ಖರೀದಿಗಾಗಿ ಸರ್ಕಾರದಿಂದ ನೆರವು ನೀಡಲಾಗುತ್ತಿದೆ.
437. ವಾಯುಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸಾರಿಗೆ ನಿಗಮಗಳಲ್ಲಿ ಈಗಾಗಲೇ ವಿದ್ಯುತ್‌ ಚಾಲಿತ ಬಸ್ಸುಗಳನ್ನು ಅಳವಡಿಸಲು ಆರಂಭಿಸಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 1,311 ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 50 ಬಸ್ಸುಗಳ ಕಾರ್ಯಾಚರಣೆ ಪ್ರಾರಂಭಿಸಿದೆ. ಮುಂಬರುವ ವರ್ಷಗಳಲ್ಲಿ ವಿದ್ಯುತ್‌ ಚಾಲಿತ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
438. ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಒಂದು ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿಗೆ ತರಲಾಗಿದೆ.
439. ರಾಜ್ಯದ ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮ ರೂಪಿಸಲು 100 ಕೋಟಿ ರೂ. ಕಾರ್ಪಸ್ ಫಂಡ್ ರಚಿಸಲು ರಾಜ್ಯ ಸರ್ಕಾರದಿಂದ ಶೇ. 50 ರಷ್ಟು ಮೊತ್ತ ನೀಡಲು ಅನುಮೋದನೆ ನೀಡಲಾಗಿದೆ.
440. ನ್ಯಾಯಾಂಗ ಕಟ್ಟಡಗಳ ಯೋಜನೆಯಡಿಯಲ್ಲಿ ಕಳೆದ
4 ವರ್ಷಗಳಲ್ಲಿ 580 ಕೋಟಿ ರೂ. ವೆಚ್ಚ ಭರಿಸಿದ್ದು, ಇದರಲ್ಲಿ ರಾಜ್ಯದ ಪಾಲು 397 ಕೋಟಿ ರೂ. ಗಳಾಗಿರುತ್ತದೆ. ಈ ಅವಧಿಯಲ್ಲಿ 39 ನ್ಯಾಯಾಂಗ ಕಟ್ಟಡಗಳನ್ನು ಪೂರ್ಣಗೊಳಿಸಲಾಗಿದೆ. ಹಿಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 83 ನ್ಯಾಯಾಲಯಗಳನ್ನು ಪ್ರಾರಂಭಿಸಲಾಗಿದೆ.
441. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು ವಲಯಕ್ಕೆ 2023-24ನೇ ಸಾಲಿಗೆ 68,585 ಕೋಟಿ ರೂ. ಗಳ ಅನುದಾನ ಒದಗಿಸಿದೆ
[17/02, 12:55 pm] Shankar Pagoji: ವಲಯ 5: ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ
340. ಕರ್ನಾಟಕ ರಾಜ್ಯವು ಸಾಂಸ್ಕೃತಿಕವಾಗಿ, ನೈಸರ್ಗಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಈ ಸಂಪನ್ಮೂಲಗಳನ್ನು ಅತ್ಯಂತ ಸಮರ್ಥವಾಗಿ, ಸುಸ್ಥಿರವಾಗಿ ಬಳಸಲು ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ.
341. ನಮ್ಮ ನಾಡು, ನುಡಿ, ಸಂಸ್ಕೃತಿ ಬಿಂಬಿಸಲು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.
342. ಕರ್ನಾಟಕದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯನ್ನು ಹಾಗೂ ಉಡುಪಿ ಜಿಲ್ಲೆಯಲ್ಲಿ ಯಕ್ಷರಂಗಾಯಣವನ್ನು ಸ್ಥಾಪಿಸಲಾಗಿದೆ.
343. ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ʻಶ್ರೀ ಭುವನೇಶ್ವರಿʼ ತಾಯಿಯ ಬೃಹತ್‌ ಮೂರ್ತಿ ಹಾಗೂ ಥೀಮ್‌ ಪಾರ್ಕ್‌ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು.
344. ʻನಮ್ಮ ಜಿಲ್ಲೆ ನಮ್ಮ ಸಂಸ್ಕೃತಿʼ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು.
345. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗುವುದು.
346. ಕರ್ನಾಟಕ ಜಗತ್ತಿನೆಲ್ಲೆಡೆ ಒಂದು ಶಕ್ತಿಯಾಗಿ ಹೊರ ಹೊಮ್ಮುತ್ತಿದ್ದು, ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಹೆಮ್ಮೆಯ ಕನ್ನಡಿಗರನ್ನು ಒಳಗೊಂಡ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು.
347. ಬೆಂಗಳೂರಿನ ಸಂಸ್ಕೃತಿ ಹಾಗೂ ಧಾರ್ಮಿಕ ಶ್ರದ್ಧೆಯ ಅವಿಭಾಜ್ಯ ಅಂಗವಾಗಿರುವ ಕರಗ ಉತ್ಸವ ಆಚರಣೆಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಒದಗಿಸಲಾಗುವುದು.
348. ಆಡಳಿತದಲ್ಲಿ, ಕೈಗಾರಿಕೋದ್ಯಮಗಳಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಕನ್ನಡದ ವ್ಯಾಪಕ ಬಳಕೆಗಾಗಿ ಹಾಗೂ ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗಾಗಿ ʻಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅಧಿನಿಯಮʼ ವನ್ನು ಜಾರಿಗೆ ತರಲಾಗುವುದು.
349. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಬದುಕು ಮತ್ತು ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವರ ಜೀವನಗಾಥೆಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗುವುದು.
350. ನಾಡು ನುಡಿ ಸಂಸ್ಕೃತಿ ಕುರಿತು ಅಮೂಲ್ಯ ಕೃತಿಗಳನ್ನು ಪ್ರಕಟಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ
2 ಕೋಟಿ ರೂ. ನೆರವು ನೀಡಲಾಗುವುದು.
351. ದೇಶವನ್ನು ಆಳಿದ ಗಂಗ, ಕದಂಬ, ರಾಷ್ಟ್ರಕೂಟ, ಚಾಲುಕ್ಯ, ಹೊಯ್ಸಳ ಮತ್ತಿತರ ಕನ್ನಡದ ರಾಜವಂಶಗಳ ಇತಿಹಾಸ ಹಾಗೂ ಕೊಡುಗೆಗಳ ಬಗ್ಗೆ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಅಧ್ಯಯನ ಮಾಡಲಾಗುವುದು.
352. ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಹಾಗೂ ಇಂದಿಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಸಕ್ರಿಯವಾಗಿರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳಿಗೆ ನೆರವು ನೀಡಲಾಗುವುದು.
353. ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯುವ ನೀತಿ 2022 ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ
ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000
ರೂ. ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ. ಒಳಗೊಂಡಂತೆ ಬ್ಯಾಂಕ್‌ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು.
354. ʻಬದುಕುವ ದಾರಿʼ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ. ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು.
355. ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ʻಯುವಸ್ನೇಹಿʼ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು.
356. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
357. ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್‌ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
358. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು.
359. ಬಾಸ್ಕೆಟ್‌ ಬಾಲ್‌ ಮತ್ತು ವಾಲಿ ಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.
360. ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
361. ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು.
362. ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ
ನಿಧಿ (Karnataka Olympic Dream Project Fund) ಸ್ಥಾಪಿಸಲಾಗುವುದು. ಈ ಯೋಜನೆಯಡಿ 12 ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.
363. ಶ್ರೀ ಆಂಜನೇಯ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗಳಿಗೆ ಮೂಲಸೌಕರ್ಯ ಒದಗಿಸಲು 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಒಳಗೊಂಡ ವಿಸ್ತೃತವಾದ ಯೋಜನೆಯನ್ನು ತಯಾರಿಸಿ, ಟೆಂಡರ್‌ ಕರೆಯಲಾಗಿದೆ.
364. ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ C.R.Z ಮಾನದಂಡಗಳನ್ನು ಸಡಿಲಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನು ತಯಾರಿಸಲಾಗುವುದು.
365. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ʻಪ್ರಸಾದ್ʼ ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ.
366. ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಸಲಾಗುವುದು.
367. ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್ ಒಂದನ್ನು ಈ ವರ್ಷದಲ್ಲಿ ಪ್ರಾರಂಭಿಸಲಾಗುವುದು.
368. ಸಂತ ಸೇವಾ ಲಾಲ್‌ ರವರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ಸೌಲಭ್ಯವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಕಲ್ಪಿಸಲಾಗುವುದು.
369. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ಮಹಾರಾಜ್ ಸಮಾಧಿ ಸ್ಥಳವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ, ಮೂಲಸೌಲಭ್ಯ ಕಲ್ಪಿಸಲಾಗುವುದು.
370. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ 12ನೇ ಶತಮಾನದಲ್ಲಿ ನಿರ್ಮಿಸಲಾದ ಐತಿಹಾಸಿಕ 101 ಕಂಬಗಳ ನಗರೇಶ್ವರ ದೇವಸ್ಥಾನದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು.
371. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ರೋಪ್‌-ವೇ ನಿರ್ಮಾಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
372. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 398 ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ಆಯವ್ಯಯದಲ್ಲಿ ಘೋಷಿಸಿದಂತೆ ನೀಡಲಾಗುತ್ತಿರುವ 2,000 ರೂ. ಪ್ರೋತ್ಸಾಹಧನವನ್ನು 5,000 ರೂ. ಗಳಿಗೆ ಹೆಚ್ಚಿಸಿ ಒಟ್ಟು 1.10 ಕೋಟಿ ರೂ. ನೀಡಲಾಗಿದೆ.
373. ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆಯನ್ನು ಬಿಂಬಿಸುವ ಹಂಪಿಯ ವಿಜಯವಿಠಲ ದೇವಾಲಯ ಮತ್ತು ಪುರಂದರ ಮಂಟಪ, ವಿಜಯಪುರದ ಗೋಲ್ ಗುಂಬಜ್, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇವಾಲಯ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಬೀದರ್ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ, 3D projection mapping, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 2023-24 ರಲ್ಲಿ 60 ಕೋಟಿ ರೂ. ಗಳನ್ನು ಒದಗಿಸಲಾಗುವುದು.
374. ರಾಜ್ಯದಲ್ಲಿನ ವಿವಿಧ ಸ್ಮಾರಕಗಳನ್ನು 3ಡಿ ಮ್ಯಾಪಿಂಗ್‌ ಮತ್ತು ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲೀಕರಿಸುವ ಕಾರ್ಯವನ್ನು ಪೂರ್ಣಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ. Adopt a Monument ಯೋಜನೆಯಡಿ ಕೊಪ್ಪಳ ಜಿಲ್ಲೆಯ ಆನೆಗುಂದಿಯ ಗಗನ್‌ ಮಹಲ್‌ ಮತ್ತು ವಿಜಯಪುರ ನಗರದ ತಾಜ್‌ ಬಾವಡಿ ಸ್ಮಾರಕಗಳ ಸಂರಕ್ಷಣೆಗೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ.
375. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಲಾಗುವುದು.
376. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಎಕರೆ ಜಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ರಾಜ್ಯ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
377. ಕಿತ್ತೂರು ಚೆನ್ನಮ್ಮ, ಉಳ್ಳಾಲದ ರಾಣಿ ಅಬ್ಬಕ್ಕ ಹಾಗೂ ಬೆಳವಡಿ ಮಲ್ಲಮ್ಮರ ಸಾಲಿಗೆ ಸೇರುವ ಮತ್ತೊಬ್ಬ ಧೀರ ವನಿತೆ ರಾಣಿ ಚೆನ್ನಭೈರಾದೇವಿ ಅವರ ಹೆಸರನ್ನು ಶಾಶ್ವತಗೊಳಿಸಲು ಹೊನ್ನಾವರದಲ್ಲಿ ʻಚೆನ್ನಭೈರಾದೇವಿ ಸ್ಮಾರಕ ಉದ್ಯಾನʼ ನಿರ್ಮಾಣ ಮಾಡಲಾಗುವುದು.
378. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೂಲಕ ʻರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ʼನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಮತ್ತು ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
379. ರಾಮನಗರ ಜಿಲ್ಲೆಯ ಮಂಚನಬೆಲೆ ಜಲಾಶಯದ ಹಿನ್ನೀರಿನಲ್ಲಿ
10 ಎಕರೆ ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ಲಿ. ಮೂಲಕ ಒಂದು ರೆಸಾರ್ಟ್ ನಿರ್ಮಿಸಲಾಗುವುದು.
380. ರಾಜ್ಯದಲ್ಲಿನ ಪಾರಂಪರಿಕ ತಾಣಗಳ ಪ್ರವಾಸಿ ಸರ್ಕ್ಯುಟ್ ಪ್ರಾರಂಭಿಸುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಲ್ಲಿರುವ
ಸನ್ನತಿ-ಚಂದ್ರಲಾಂಬಾ ದೇವಾಲಯ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಾಲಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಬನವಾಸಿಯ ಮಧುಕೇಶ್ವರ ದೇವಾಲಯ ಸಂಕೀರ್ಣಗಳ ಸಮಗ್ರ ಅಭಿವೃದ್ಧಿಗಾಗಿ ಅನುದಾನ ಒದಗಿಸಲಾಗುವುದು.
381. ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿರುವ ಮಳಖೇಡ ಕೋಟೆ ಸಂರಕ್ಷಣೆ ಕಾಮಗಾರಿಯನ್ನು 20 ಕೋಟಿ ರೂ. ಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.
382. ಕರ್ನಾಟಕದ ಇತಿಹಾಸದ ಪ್ರಮುಖ ಘಟನಾವಳಿಗಳಲ್ಲಿ ತಾಳಿಕೋಟೆ ಯುದ್ಧವೂ ಸೇರಿದೆ. ಈ ಹಿನ್ನೆಲೆಯಲ್ಲಿ ರಕ್ಕಸಗಿ, ತಂಗಡಗಿ ಮತ್ತು ತಾಳಿಕೋಟೆ ಸುತ್ತಲಿನ ಐತಿಹಾಸಿಕ ಪ್ರಸಿದ್ಧ ತಾಣಗಳನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗುವುದು.
383. ಮಾನವ–ವನ್ಯಪ್ರಾಣಿ ಸಂಘರ್ಷದಿಂದ ಸಂಭವಿಸುವ ಮಾನವ ಪ್ರಾಣ ಹಾನಿಗೆ ನೀಡುವ ಪರಿಹಾರವನ್ನು 7.50 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಬೆಳೆಹಾನಿ ಪ್ರಕರಣಗಳಲ್ಲಿ ನೀಡುತ್ತಿರುವ ಪರಿಹಾರ ಧನವನ್ನೂ ದ್ವಿಗುಣಗೊಳಿಸಲಾಗಿದೆ,
384. ಮಾನವ-ಪ್ರಾಣಿ ಸಂಘರ್ಷವನ್ನು ನಿಯಂತ್ರಿಸಲು, ಸಂಘರ್ಷ ಕ್ಷೇತ್ರದಿಂದ ಸೆರೆಹಿಡಿಯಲ್ಪಟ್ಟ ವನ್ಯಪ್ರಾಣಿಗಳನ್ನು, ಅವುಗಳ ನೈಸರ್ಗಿಕ ಆವಾಸ ಸ್ಥಾನ ಪ್ರದೇಶಗಳನ್ನು ಗುರುತಿಸಿ ಬಿಡುಗಡೆ ಮಾಡಲು ಭದ್ರಾ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವನಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
385. ಕಾಡಾನೆ ಹಾವಳಿ ತಡೆಗಟ್ಟಲು ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಕಾರ್ಯಪಡೆಯನ್ನು ರಚಿಸಲಾಗಿದೆ. ಇದೇ ಮಾದರಿಯಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚಿರತೆ ದಾಳಿ ತಡೆಯಲು ಸಹ ಕಾರ್ಯಪಡೆಯನ್ನು ರಚಿಸಲಾಗಿದೆ. ಈ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚುವರಿಯಾಗಿ 199 ಸಿಬ್ಬಂದಿಗಳನ್ನು ನೇಮಿಸಲು ಅನುಮೋದನೆ ನೀಡಲಾಗಿದೆ.
386. ಮಾನವ-ಆನೆ ಸಂಘರ್ಷವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ 72 ಕಿ.ಮೀ. ರೈಲ್ವೆ ಬ್ಯಾರಿಕೇಡ್, 36 ಕಿ.ಮೀ. ಆನೆ ನಿರೋಧಕ ಕಂದಕ, 186 ಕಿ.ಮೀ. ಸೌರಶಕ್ತಿ ಬೇಲಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. 2022-23ನೇ ಸಾಲಿನಲ್ಲಿ ಈ ಕಾಮಗಾರಿಗಳಿಗೆ 150 ಕೋಟಿ ರೂ. ಗಳ ಅನುದಾನ ಒದಗಿಸಲಾಗಿದೆ.
387. ಪ್ರಪ್ರಥಮ ಬಾರಿಗೆ ನಾನು 100 ಕೋಟಿ ರೂ. ಅನುದಾನದಲ್ಲಿ ಹಸಿರು ಆಯವ್ಯಯವನ್ನು (Eco Budget) ಘೋಷಿಸಿದ್ದೇನೆ. ಅದರಂತೆ ಪರಿಸರದ ಮೇಲೆ ಮಾನವ ನಿರ್ಮಿತ ಒತ್ತಡಗಳಿಂದ ಉಂಟಾದ ದುಷ್ಪರಿಣಾಮವನ್ನು ಸರಿದೂಗಿಸಲು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಬೋಳುಗುಡ್ಡ ಪ್ರದೇಶಗಳ ಪುನಶ್ಚೇತನ, ಕ್ಷೀಣಿಸಿದ ಅರಣ್ಯ ಪ್ರದೇಶದ ಮರುಸ್ಥಾಪನೆ, ಕರಾವಳಿ ಪ್ರದೇಶದಲ್ಲಿ ಕಾಂಡ್ಲಾ ಅರಣ್ಯೀಕರಣ ಮತ್ತು ಶೆಲ್ಟರ್ ಬೆಲ್ಟ್ ನಿರ್ವಹಣೆ ಅಡಿಯಲ್ಲಿ 3,211 ಹೆಕ್ಟೇರ್‌ ಪ್ರದೇಶದಲ್ಲಿ ಹಾಗೂ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ 168 ಕಿ.ಮೀ. ಉದ್ದದ ಅರಣ್ಯೀಕರಣ ಹಾಗೂ 25 ಲಕ್ಷ ಸಸಿಗಳನ್ನು ನೆಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
388. ಮೇಲ್ಕಂಡ ಎಲ್ಲಾ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ನೆರವಾಗಲು ಹಾಗೂ ಸಮಗ್ರ ಪರಿಸರ ಅಭಿವೃದ್ಧಿಗೆ ಸಂಬಂಧಿಸಿದ ರೂಪುರೇಷೆಗಳನ್ನು ಸಿದ್ಧಪಡಿಸಲು ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಥಾಪಿಸಲಾಗುವುದು.
389. ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 3,458 ಕೋಟಿ ರೂ. ಅನುದಾನ ಒದಗಿಸಲಾಗಿದೆ.
[17/02, 1:15 pm] Shankar Pagoji: ತೆರಿಗೆ ಪ್ರಸ್ತಾವನೆಗಳು
ವಾಣಿಜ್ಯ ತೆರಿಗೆಗಳು
442. ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಳ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ 15,000 ರೂ. ಗಳಿಂದ 25,000 ರೂ. ಗಳಿಗೆ ಏರಿಕೆ ಮಾಡಲು ಪ್ರಸ್ತಾಪಿಸಿದೆ.
443. ವರ್ತಕರ ವ್ಯವಹಾರಗಳ ನಿಖರವಾದ ಪರಿಶೀಲನೆಗಾಗಿ ಮತ್ತು ದತ್ತಾಂಶಗಳ ಸಾಮ್ಯತೆಯನ್ನು ಹೊಂದಲು, ಜಿ.ಎಸ್‍.ಟಿ PRO ನಿಂದ ಹೊಸ ತಂತ್ರಾಂಶಕ್ಕೆ ಬದಲಾವಣೆ ಮಾಡಲಾಗಿದೆ. ಇದರ ಪರಿಣಾಮವಾಗಿ ವರ್ತಕರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಲಭ್ಯವಿರುವ ದತ್ತಾಂಶಗಳು ಒಂದೇ ಆಗಿದ್ದು, ಇದರಿಂದಾಗಿ ದತ್ತಾಂಶ ಹೊಂದಾಣಿಕೆಯ ಸಮಸ್ಯಗೆ ಪರಿಹಾರ ಕಂಡುಕೊಳ್ಳಲಾಗಿದೆ.
444. ಜಿ.ಎಸ್.ಟಿ. ಪೂರ್ವ ತೆರಿಗೆ ವಿವಾದಗಳನ್ನು ತ್ವರಿತಗತಿಯಲ್ಲಿ ಪರಿಹರಿಸುವ ಸಲುವಾಗಿ ಮತ್ತು ತೆರಿಗೆ ಬಾಕಿಗಳನ್ನು ಯಾವುದೇ ದಾವೆಯಿಲ್ಲದೆ ಕ್ಷಿಪ್ರವಾಗಿ ಸಂಗ್ರಹಿಸುವುದಕ್ಕಾಗಿ, ನಾನು ಕರಸಮಾಧಾನ ಯೋಜನೆಯನ್ನು ಪ್ರಸ್ತಾಪಿಸುತ್ತೇನೆ. ಈ ಯೋಜನೆಯಡಿ ಎಲ್ಲಾ ಜಿಎಸ್‌ಟಿ-ಪೂರ್ವ ಅಧಿನಿಯಮಗಳ ಅಡಿಯಲ್ಲಿ ಬಾಕಿಯಿರುವ ಪೂರ್ಣ ತೆರಿಗೆಯನ್ನು
30ನೇ ಅಕ್ಟೋಬರ್‌ 2023 ರ ಒಳಗೆ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುವುದು.
445. ಪ್ರಸಕ್ತ ಸಾಲಿನಲ್ಲಿ ಕರ್ನಾಟಕವು ದೇಶದ ದೊಡ್ಡ ರಾಜ್ಯಗಳಿಗೆ ಹೋಲಿಸಿದಾಗ ಜಿ.ಎಸ್.ಟಿ. ಸಂಗ್ರಹಣೆಯಲ್ಲಿ ಅತೀ ಹೆಚ್ಚು ಬೆಳವಣಿಗೆ ದರವನ್ನು ದಾಖಲಿಸಿದೆ. 2022-23ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಗೆ ಆಯವ್ಯಯದಲ್ಲಿ, ಜಿ.ಎಸ್‍.ಟಿ ಪರಿಹಾರ ಹೊರತುಪಡಿಸಿ, 72,010 ಕೋಟಿ ರೂ. ಗಳ ಗುರಿ ನೀಡಲಾಗಿದ್ದು, ವರ್ಷಾಂತ್ಯಕ್ಕೆ 83,010 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಮಾಡಲಾಗುವುದು. ಇದು ಆಯವ್ಯಯ ಅಂದಾಜಿಗಿಂತ ಶೇ.15 ರಷ್ಟು ಹೆಚ್ಚಾಗಿರುತ್ತದೆ. ರಾಜ್ಯಕ್ಕೆ ಜಿ.ಎಸ್‍.ಟಿ ಪರಿಹಾರವಾಗಿ 10,548 ಕೋಟಿ ರೂ. ಗಳು ಸ್ವೀಕೃತವಾಗಿದ್ದು, ಜಿ.ಎಸ್.ಟಿ. ಪರಿಹಾರ ಒಳಗೊಂಡಂತೆ ವರ್ಷಾಂತ್ಯಕ್ಕೆ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆಯು 93,558 ಕೋಟಿ ರೂ. ಗಳಾಗುತ್ತದೆ.
446. 2023-24 ನೇ ಸಾಲಿಗೆ ವಾಣಿಜ್ಯ ತೆರಿಗೆಗಳ ಇಲಾಖೆಗೆ 92,000 ಕೋಟಿ ರೂ. ಗಳ (ಜಿ.ಎಸ್‍.ಟಿ ಪರಿಹಾರ ಹೊರತುಪಡಿಸಿ) ತೆರಿಗೆ ಸಂಗ್ರಹಣೆಯ ಗುರಿಯನ್ನು ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ
447. ದಿನಾಂಕ 01.01.2022 ರಿಂದ 31.03.2022 ರವರೆಗೆ ಮಾರ್ಗಸೂಚಿ ದರಗಳ ಮೇಲೆ ಶೇ.10 ರಷ್ಟು ರಿಯಾಯಿತಿ ನೀಡಿದ್ದು, ಸದರಿ ಅವಧಿಯಲ್ಲಿ 82,784 ದಸ್ತಾವೇಜುಗಳು ನೋಂದಣಿಯಾಗಿದ್ದು, 4,343 ಕೋಟಿ ರೂ. ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದ್ದು, ಇದು ರಾಜ್ಯದಲ್ಲಿ ಇತಿಹಾಸದಲ್ಲಿಯೇ ಮೂರು ತಿಂಗಳ ಅವಧಿಯಲ್ಲಿ ದಾಖಲೆ ರಾಜಸ್ವ ಸಂಗ್ರಹಣೆಯಾಗಿರುತ್ತದೆ.
448. ಮತ್ತೊಮ್ಮೆ ಮಾರ್ಗಸೂಚಿ ದರಗಳ ಮೇಲೆ ಶೇ.10 ರಷ್ಟು ರಿಯಾಯಿತಿ ದಿನಾಂಕ:24.04.2022 ರಿಂದ 27.07.2022 ರವರೆಗೆ ವಿಸ್ತರಿಸಿದ್ದು, ಸದರಿ ಅವಧಿಯಲ್ಲಿ 1,73,937 ದಸ್ತಾವೇಜುಗಳು ನೋಂದಣಿಯಾಗಿದ್ದು, 4,018.66 ಕೋಟಿ ರೂ. ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದೆ.
449. 2022-23ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಆಯವ್ಯಯದಲ್ಲಿ 15,000 ಕೋಟಿ ರೂ. ಗಳ ಗುರಿ ನೀಡಲಾಗಿದ್ದು, ವರ್ಷಾಂತ್ಯಕ್ಕೆ ಗುರಿ ಮೀರಿ 17,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಮಾಡಲಿದ್ದೇವೆ. ಇದು ಆಯವ್ಯಯ ಅಂದಾಜಿಗಿಂತ ಶೇ.13 ರಷ್ಟು ಹೆಚ್ಚಾಗಿರುತ್ತದೆ.
450. 2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 19,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಅಬಕಾರಿ
451. ಸಾರಾಯಿ/ಸೇಂದಿಗೆ ಸಂಬಂಧಪಟ್ಟ ಅಬಕಾರಿ ಬಾಕಿಗಳನ್ನು ವಸೂಲು ಮಾಡುವುದಕ್ಕಾಗಿ, ನಾನು, ನೂತನ ಕರಸಮಾಧಾನ ಯೋಜನೆಯನ್ನು ರೂಪಿಸಲು ಪ್ರಸ್ತಾಪಿಸುತ್ತೇನೆ. ಸದರಿ ಯೋಜನೆಯಡಿ ಸಾರಾಯಿ/ಸೇಂದಿಗೆ ಬಾಡಿಗೆಗಳ ಸಂಬಂಧದಲ್ಲಿ ಮೂಲಧನವನ್ನು ದಿನಾಂಕ:30.06.2023 ರಂದು ಅಥವಾ ಅದಕ್ಕೂ ಮುಂಚಿತವಾಗಿ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುವುದು.
452. 2022-23ನೇ ಸಾಲಿಗೆ ಅಬಕಾರಿ ಇಲಾಖೆಗೆ ಆಯವ್ಯಯದಲ್ಲಿ 29,000 ಕೋಟಿ ರೂ. ಗಳ ಗುರಿ ನೀಡಲಾಗಿದ್ದು, ವರ್ಷಾಂತ್ಯಕ್ಕೆ 32,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಮಾಡಲಿದ್ದೇವೆ. ಇದು ಆಯವ್ಯಯ ಅಂದಾಜಿಗಿಂತ ಶೇ.10 ರಷ್ಟು ಹೆಚ್ಚಾಗಿರುತ್ತದೆ.
453. 2023-24ನೇ ಆರ್ಥಿಕ ವರ್ಷಕ್ಕೆ ಅಬಕಾರಿ ಇಲಾಖೆಗೆ 35,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಸಾರಿಗೆ
454. 2022-23 ನೇ ಸಾಲಿಗೆ ಸಾರಿಗೆ ಇಲಾಖೆಗೆ ಆಯವ್ಯಯದಲ್ಲಿ 8,007 ಕೋಟಿ ರೂ. ಗಳ ಗುರಿ ನೀಡಲಾಗಿದ್ದು, ವರ್ಷಾಂತ್ಯಕ್ಕೆ 9,007 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಮಾಡಲಿದ್ದೇವೆ. ಇದು ಆಯವ್ಯಯ ಅಂದಾಜಿಗಿಂತ ಶೇ.13 ರಷ್ಟು ಹೆಚ್ಚಾಗಿರುತ್ತದೆ.
455. 2023-24ನೇ ಆರ್ಥಿಕ ವರ್ಷಕ್ಕೆ ಸಾರಿಗೆ ಇಲಾಖೆಗೆ 10,500 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ
456. ರಾಜ್ಯವು ಇಲ್ಲಿಯವರೆಗೆ 34 ಖನಿಜ ಬ್ಲಾಕ್‍ಗಳನ್ನು ಯಶಸ್ವಿಯಾಗಿ ಹರಾಜು ಮಾಡಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಹರಾಜು ಮಾಡಿದ ರಾಜ್ಯಗಳ ಪೈಕಿ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ.
457. 2022-23 ನೇ ಸಾಲಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 6,500 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆಯ ಗುರಿಯನ್ನು ನಿಗದಿಪಡಿಸಲಾಗಿದ್ದು, ಜನವರಿ ಅಂತ್ಯಕ್ಕೆ 4,620 ಕೋಟಿ ರೂ. ಗಳ ರಾಜಸ್ವವನ್ನು ಕ್ರೊಢೀಕರಿಸಲಾಗಿರುತ್ತದೆ. ಪ್ರಸಕ್ತ ಸಾಲಿನ ತೆರಿಗೆ ಸಂಗ್ರಹಣೆ ಗುರಿಯನ್ನು ಸಾಧಿಸಲಾಗುವುದು.
458. 2023-24ನೇ ಸಾಲಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 7,500 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಪರಿಷ್ಕೃತ ಅಂದಾಜು 2022-23
459. 2022-23ರ ಪರಿಷ್ಕೃತ ಅಂದಾಜುಗಳ ಅನ್ವಯ ಆಯವ್ಯಯದಲ್ಲಿ ಅಂದಾಜಿಸಲಾದ 2,61,977 ಕೋಟಿ ರೂ. ಗಳಿಗೆ ಹೋಲಿಸಿದಲ್ಲಿ ಒಟ್ಟಾರೆ ಜಮೆ 2,79,540 ಕೋಟಿ ರೂ.ಗಳಾಗಿದೆ. ರಾಜ್ಯ ರಾಜಸ್ವ ಕ್ರೊಡೀಕರಣದ ಪ್ರಯತ್ನಗಳು 2,12,360 ಕೋಟಿ ರೂ. ಗಳಾಗಿದ್ದು, ಇದರಲ್ಲಿ ಸ್ವಂತ ತೆರಿಗೆ ರಾಜಸ್ವ ಸಂಗ್ರಹಣೆಯು ಜಿ.ಎಸ್‍.ಟಿ ಪರಿಹಾರ ಒಳಗೊಂಡಂತೆ 1,54,431 ಕೋಟಿ ರೂ.ಗಳಾಗಿರುತ್ತದೆ.
460. ಪರಿಷ್ಕೃತ ಅಂದಾಜಿನ ಪ್ರಕಾರ ಒಟ್ಟು ವೆಚ್ಚವು 2,89,653 ಕೋಟಿ ರೂ. ಗಳಾಗಿದೆ. ಇದು ಆಯವ್ಯಯ ಅಂದಾಜು 2,65,720 ಕೋಟಿ ರೂ. ಗಳಿಗೆ ಹೋಲಿಸಿದಲ್ಲಿ ಶೇ.9 ರಷ್ಟು ಹೆಚ್ಚಳ ಕಂಡಿದೆ.
ಆಯವ್ಯಯ ಅಂದಾಜು 2023-24
461. 2023-24 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು 1,64,653 ಕೋಟಿ ರೂ. ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 11,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ. ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರವು ನಿರೀಕ್ಷಿಸಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 77,750 ಕೋಟಿ ರೂ. ಗಳ ಒಟ್ಟು ಸಾಲಗಳು, 23 ಕೋಟಿ ರೂ. ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ. ಗಳ ಸಾಲಗಳ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,03,910 ಕೋಟಿ ರೂ. ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.
462. 2,25,507 ಕೋಟಿ ರೂ. ಗಳ ರಾಜಸ್ವ ವೆಚ್ಚ, 61,234 ಕೋಟಿ ರೂ. ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ. ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,09,182 ಕೋಟಿ ರೂ. ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.
463. ಕೋವಿಡ್‍ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ರಾಜಸ್ವ ಸ್ವೀಕೃತಿಯು ರಾಜಸ್ವ ವೆಚ್ಚಕ್ಕಿಂತ 402 ಕೋಟಿ ರೂ. ಗಳ ಹೆಚ್ಚುವರಿಯನ್ನು ಅಂದಾಜು ಮಾಡಲಾಗಿದ್ದು, ಇದು ರಾಜಸ್ವ ಹೆಚ್ಚುವರಿ (Revenue Surplus) ಆಯವ್ಯಯವಾಗಿರುತ್ತದೆ. ವಿತ್ತೀಯ ಕೊರತೆ 60,581 ಕೋಟಿ ರೂ. ಗಳಾಗುತ್ತದೆಂದು ನಿರೀಕ್ಷಿಸಲಾಗಿದ್ದು, ಅದು GSDP ಯ ಶೇ.2.60% ರಷ್ಟಾಗಿರುತ್ತದೆ. 2023-24ರ ಕೊನೆಯಲ್ಲಿ 5,64,896 ಕೋಟಿ ರೂ. ಗಳ ಒಟ್ಟು ಹೊಣೆಗಾರಿಕೆಗಳು GSDP ಯ ಶೇ.24.20 ರಷ್ಟಾರುತ್ತದೆಂದು ಅಂದಾಜು ಮಾಡಲಾಗಿದೆ. ಈ ಮೂಲಕ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ, 2002 ರಲ್ಲಿ ಸೂಚಿಸಿರುವ ಎಲ್ಲಾ ಮಾನದಂಡಗಳನ್ನು ಪಾಲನೆ ಮಾಡಲಾಗಿದೆ ಎಂದು ಹೇಳಲು ಹರ್ಷಿಸುತ್ತೇನೆ.
ಸನ್ಮಾನ್ಯ ಸಭಾಧ್ಯಕ್ಷರೇ,
464. ನಾನು ಈಗ ಆಯವ್ಯಯವನ್ನು ಗೌರವಾನ್ವಿತ ಸದನದ ಪರಿಗಣನೆಗಾಗಿ ಮಂಡಿಸುತ್ತಿದ್ದೇನೆ ಹಾಗೂ ಆಯವ್ಯಯ ಅಂದಾಜಿನನ್ವಯ 2023-24ನೇ ಸಾಲಿನ 31ನೇ ಜುಲೈ 2023ರ ವರೆಗಿನ ವೆಚ್ಚವನ್ನು ನಿರ್ವಹಿಸಲು ಲೇಖಾನುದಾನವನ್ನು ಕೋರುತ್ತಿದ್ದೇನೆ.
ಜೈ ಹಿಂದ್‌
ಜೈ ಕರ್ನಾಟಕ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *