ರಾಜ್ಯ

ಪ್ರಸಕ ಸಾಲಿನಲ್ಲಿ ಧಾರವಾಡ ಜಿಲ್ಲೆಗೆ ಪ್ರಾಮುಖ್ಯತೆ ನೀಡಿ : ಪಿ.ಎಚ್. ನೀರಲಕೇರಿ ಆಗ್ರಹ

ಧಾರವಾಡ prajakiran.com : ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಧಾರವಾಡ ಜಿಲ್ಲೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದು ಹಿರಿಯ ನ್ಯಾಯವಾದಿ ಹಾಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್ ನೀರಲಕೇರಿ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ನೀಡಿದ್ದ ಭರವಸೆಗಳು ಧಾರವಾಡ ಜಿಲ್ಲೆಯ ಜನರಲ್ಲಿ ನಿರಾಸೆ ಮೂಡಿಸಿವೆ.

ಆದ್ದರಿಂದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು.

ವಿಶೇಷವಾಗಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಿಮ್ಸ್ , ಜಿಲ್ಲಾ ಆಸ್ಪತ್ರೆ, ಡಿಮ್ಯಾನ್ಸ್ ಗಳು ಸುಧಾರಣೆಗೆ ಅಗತ್ಯ ಅನುದಾನ ನೀಡಬೇಕು.

ಈ ವರ್ಷವೇ ಜಿಲ್ಲೆಗೆ ಮಲ್ಡಿಸ್ಪೇಷಾಲಿಟಿ ಆಸ್ಪತ್ರೆ ಮಂಜೂರು ಮಾಡಬೇಕು.
ರಸ್ತೆ ಸಂಪರ್ಕ ಸುಧಾರಣೆ ನಿಟ್ಟಿನಲ್ಲಿ‌ ಅವಳಿ ನಗರ ಒಳಗೊಂಡ ವರ್ತುಲ ರಸ್ತೆ ನಿರ್ಮಾಣ, ಧಾರವಾಡ ಅಳ್ನಾವರ ರಸ್ತೆಯಲ್ಲಿನ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳಿಸಬೇಕು.

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ‌ ಸಂಶೋಧನೆ ಮತ್ತು ಇತರ‌ ಅಧ್ಯಯನ ಚಟುವಟಿಕೆಗಳಿಗೆ ಅಗತ್ಯ ಆರ್ಥಿಕ ನೆರವು ಕಲ್ಪಿಸಬೇಕು.

ಶಿಕ್ಷಣ ಕಾಶಿ ಧಾರವಾಡಕ್ಕೆ ವಿದ್ಯಾರ್ಥಿಗಳ/ಅನುಕೂಲಕ್ಕೆ ಹೆಚ್ಚು ವಸತಿನಿಲಯ‌ಗಳನ್ನು ಸ್ಥಾಪಿಸಲು ಅಗತ್ಯ ಕ್ರಮಕೈಕೊಳ್ಳಬೇಕು.

ನಿರುದ್ಯೋಗದಿಂದ ಕಂಗೆಟ್ಟಿರುವ ಯುವಕರಿಗೆ ಉದ್ಯೋಗ ಒದಗಿಸಲು ಆಸಕ್ತಿ ತೋರಿಸಬೇಕು.

ಧಾರವಾಡ ಜಿಲ್ಲೆಯ ಜನರ ನಿರೀಕ್ಷೆಗೆ ತಕ್ಕಂತೆ ಜಿಲ್ಲೆಯವರೇ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ‌ಜಗದೀಶ ಶೆಟ್ಟರ್ ಮತ್ತು ಜನಪ್ರತಿನಿಧಿಗಳು ಕಾಯೋನ್ಮುಖ ಆಗಬೇಕು ಎಂದು ನೀರಲಕೇರಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಕಾರ್ಪೋರೇಟರ್ ಪ್ರತಾಪ ಚವ್ಹಾಣ ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *