ರಾಜ್ಯ

ಫೆಬ್ರವರಿ ತಿಂಗಳಲ್ಲಿ ಆಯವ್ಯಯ ಮಂಡನೆ : ಮುಖ್ಯಮಂತ್ರಿ

ಹಾವೇರಿ ಪ್ರಜಾಕಿರಣ.ಕಾಮ್ ಡಿ. 24 :

ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ.

ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.

ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಸನಿವಾರ ಶಿಗ್ಗಾಂವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

*ಕರೋನಾ ನಿಯಂತ್ರಣಾ ಕ್ರಮ :*

ಕರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು.

ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಬೆಡ್ ಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು.

ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

*ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರೋನಾ ಮುಂಜಾಗ್ರತಾ ಕ್ರಮ :*

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರೋನಾ ದಿಂದ ತೊಡಕುಂಟಾಗುವುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *