ರಾಜ್ಯ

ಮನೆ ಕಟ್ಟಿಕೊಡದ ಬಿಲ್ಡರ್ ಗೆ ಬಡ್ಡಿಸಮೇತ, ಪರಿಹಾರ, ದಂಡ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಆದೇಶ

ಧಾರವಾಡ ಪ್ರಜಾಕಿರಣ. ಕಾಮ್  ನ.22: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಾ ಬನವಾಸಿ ಗ್ರಾಮದ ಪರಮೇಶ್ವರ ವಿಘ್ನೇಶ್ವರ ಭಟ್ ಎಂಬುವವರು ಧಾರವಾಡದ ಶ್ರೀ. ವೀರಭದ್ರೇಶ್ವರ ಇನ್‍ಪ್ರಾಸ್ಟ್ರಕ್ಚರ್ ಮತ್ತು ಹೌಸಿಂಗ್ ಪ್ರೈ.ಲಿ. ಇದರ ಆಡಳಿತಾತ್ಮಕ ನಿರ್ದೇಶಕರಾದ ನಾಗನಗೌಡ ಶಿವನಗೌಡ ನೀರಲಗಿ ರವರ ಜೊತೆ ಪೂರ್ಣಿಮಾ ಲೇಔಟ್‍ನಲ್ಲಿ 1200 ಚ.ಅ. ವಿಸ್ತೀರ್ಣದ ಜಾಗೆಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಡಲು ರೂ.16,86,167/- ಗಳಿಗೆ ದಿ:05/02/2007 ರಂದು ಒಪ್ಪಂದ ಮಾಡಿಕೊಂಡಿದ್ದು ಆ ಪೈಕಿ ರೂ.13,95,097/-ಮುಂಗಡವಾಗಿ ನೀಡಿದ್ದರು.

ಮುಂಗಡ ಹಣಕೊಟ್ಟು ಒಪ್ಪಂದ ಆಗಿದ್ದರೂ ಬಿಲ್ಡರ್ ತನಗೆ ಮನೆ ನಿರ್ಮಾಣ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ಬಿಲ್ಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಮನೆ ಕಟ್ಟಿಕೊಡದೇ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿರುತ್ತಾರೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ಈ ಬಗ್ಗೆ ವೀರಭದ್ರೇಶ್ವರ ಹೌಸಿಂಗ್ ಪ್ರೈ.ಲಿ. ಆಡಳಿತಗಾರ ಎನ್.ಎಸ್. ನೀರಲಗಿ ದೂರುದಾರರಿಂದ ಪಡೆದ ರೂ.13,95,097/- ಗಳನ್ನು ದಿ:04/06/2015ರಿಂದ ಶೇ.9% ರಂತೆ ಬಡ್ಡಿ ಲೆಕ್ಕ ಹಾಕಿ ಹಾಗೂ ಮಾನಸಿಕ ತೊಂದರೆಗೆ ರೂ.1,00,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/-ಗಳನ್ನು ಈ ಆದೇಶದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ತೀರ್ಪು ನೀಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *