ಅಪರಾಧ

ಮುಂಬೈ : ಕಟ್ಟಡ ಕುಸಿದು ಸ್ಥಳದಲ್ಲೇ 11 ಜನರ ಸಾವು, 35 ಮಂದಿ ರಕ್ಷಣೆ

ಮುಂಬೈ prajakiran.com : ನಿನ್ನೆ ತಡ ರಾತ್ರಿ ಮಲಾಡ್ ವೆಸ್ಟ್‌ನ ನ್ಯೂ ಕಲೆಕ್ಟರ್ ಕಂಪೌಡ್‌ ನಲ್ಲಿ ವಸತಿ ಕಟ್ಟಡ ಕುಸಿದು ಪರಿಣಾಮ 11 ಜನ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಬಿಡಿಬಿಎ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಮಕ್ಕಳು ಮಹಿಳೆಯರು ಸೇರಿದಂತೆ 35ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ ಮಾಹಿತಿ ನೀಡಿದೆ.

4 ಅಂತಸ್ತಿನ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮತ್ತೊಂದು ಕಟ್ಡಡದ ಮೇಲೆ ಬಿದ್ದಿದ್ದು, ಪಕ್ಕದ ಕಟ್ಟಡದಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ.

ಕಟ್ಟಡ ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿಕೊಳ್ಳುವ ಸಾಧ್ಯತೆಯಿದೆ ಎಂದು ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *