ಬೆಂಗಳೂರು ಪ್ರಜಾಕಿರಣ.ಕಾಮ್ :
ಖ್ಯಾತ ನೇತ್ರ ತಜ್ಞರಾದ ಡಾ. ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ನಿಧನ ಹೊಂದಿದರು.
‘ರಿವರ್ಸ್ ಡಯಾಬಿಟಿಸ್’ ಮೂಲಕ ಮಧುಮೇಹ ಗೆದ್ದ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ (69 ವರ್ಷ) ಇಂದು ಸಂಜೆ 6 ಗಂಟೆಗೆ ಮನೆಯಲ್ಲಿ ಜಿಮ್ ಮಾಡಬೇಕಾದರೆ ತೀವ್ರ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದರು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಸಮೀಪದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯ್ತು
ಆದರೆ ಅವರು ಬದುಕುಳಿಯಲಿಲ್ಲ. ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ.
ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದು ಪ್ರಾರ್ಥಿಸಿದ್ದಾರೆ.