ರಾಜ್ಯ

ಬಸ್ ಪ್ರಯಾಣ ದರ ಹೆಚ್ಚಳ ಸದ್ಯಕ್ಕೆ ಇಲ್ಲ ಎಂದ ಡಿಸಿಎಂ ಲಕ್ಷ್ಮಣ ಸವದಿ

ಹುಬ್ಬಳ್ಳಿ prajakiran.com : ಕರೋನಾ ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನಿಗಮಗಳಿಂದ ಸದ್ಯಕ್ಕೆ ಯಾವುದೇ  ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವರು ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ಅವರು ಮಂಗಳವಾರ ಸಂಜೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಹೇಳಿಕೆ ನೀಡಿದರು.

ರಾಜ್ಯದಲ್ಲೆಡೆ ಶೀಘ್ರದಲ್ಲಿಯೇ ರಾತ್ರಿ ವೇಳೆ ಬಸ್ ಸಂಚಾರ ಆರಂಭಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಈ ಬಗ್ಗೆ ಎಲ್ಲಾ ನಿಗಮಗಳ ಎಂಡಿ ಗೆ ಸೂಚನೆ ನೀಡಲಾಗಿದೆ ಎಂದರು.

ಸಾರಿಗೆ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಎಪ್ರಿಲ್ ತಿಂಗಳ ಸಂಬಳ ನೀಡಿದ್ದೇವೆ. ರಾಜ್ಯದ ನಾಲ್ಕು ನಿಗಮಗಳು ನಷ್ಟದಲ್ಲಿವೆ. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಯಾವುದೇ ಆದಾಯವಿಲ್ಲ ಎಂದರು.

ಹೀಗಾಗಿ ಎಲ್ಲಾ ನಿಗಮಗಳ ಸಿಬ್ಬಂದಿಗೆ ಮೇ ತಿಂಗಳ ಅರ್ಧ ಸಂಬಳ ನೀಡಲು ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದೆ.

ಹೀಗಾಗಿ ಮತ್ತೋಮ್ಮೆ ಮುಖ್ಯಮಂತ್ರಿಗಳ ಬಳಿ ನಿಯೋಗ ತೆಗೆದುಕೊಂಡು ಹೋಗಿ ಪೂರ್ತಿ ಸಂಬಳ ನೀಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.  

ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದಿಲ್ಲ. ಈ ಬಗ್ಗೆ ಯಾರೂ ಆತಂಕ ಪಡುವಅಗತ್ಯವಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಯ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *