ಧಾರವಾಡ prajakiran.com : ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ಸು ಒಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಬಳಿ ನಡೆದಿದೆ.
ಪಲ್ಟಿಯಾದ ಬಸ್ ಧಾರವಾಡದಿಂದ ಮೊರಬಕ್ಕೆ ಹೊರಟಿತ್ತು.
ಇದರಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.