ಧಾರವಾಡ prajakiran. com : ಧಾರವಾಡದ ಹೊರವಲಯದಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ನಲ್ಲಿ ಬೆಳಗ್ಗೆ 4 ಗಂಟೆಗೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ವಿಜಯಪುರ ನಿಯೋಜಿತ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಅವರ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣಕುಮಾರ ಕಾರಿನಲ್ಲಿದ್ದರು.
ನಾಲ್ವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ.
ಬೆಳಗ್ಗೆ ೫.೩೦ ಕ್ಕೆ ಎಸ್ ಡಿ ಎಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರವಹಿಕೊಳ್ಳಲು ಅವರು ದಾವಣಗೆರೆ ಯಿಂದ ಧಾರವಾಡ ಮಾರ್ಗ ವಿಜಯಪುರ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅವರು ಈ ಹಿಂದೆ ದಾವಣಗೆರೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ರಾಜ್ಯ ಸರ್ಕಾರ ನಿನ್ನೇಯಷ್ಟೇ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗೆ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.