ಬೆಂಗಳೂರು prajakiran.com : ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣ ಮಾಡಲು ಕರ್ನಾಟಕವು ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಿ.ಟಿ.ರವಿ ಅವರು, ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ.
ಹೀಗಾಗಿ ರಾಜ್ಯದಲ್ಲೂ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಜಾರಿಗೊಳಿಸಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ.