ಅಪರಾಧ

ಧಾರವಾಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಕಾರು ….!

ಧಾರವಾಡ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಘಟನೆ ಧಾರವಾಡದಲ್ಲಿ ಸೋಮವಾರ ನಡೆದಿದೆ.

ಅದರ ಪರಿಣಾಮವಾಗಿ ಸಂಪೂರ್ಣ ಕಾರು ಜಖಂಗೊಂಡಿದ್ದು, ಧಾರವಾಡದ ಸಾಧನಕೆರಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗೋವಾ ರಸ್ತೆ ಮೂಲಕ ಹೊರಟಿದ್ದ ವೇಳೆ ಮನೆಯೊಂದರ ಕಂಪೌಂಡ್ ಗೆ ಈ ಕಾರು ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಗ್ಲಾಸು ಪುಡಿ ಪುಡಿಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *