ಅಪರಾಧ

ಧಾರವಾಡದ ಅಮ್ಮಿನಬಾವಿ ಬಳಿ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಧಾರವಾಡ prajakiran.com :  ಬೈಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಪೀರಗಣಿ ದರ್ಗಾ ಕ್ರಾಸ್ ಬಳಿ ಈ ರ್ದುಘಟನೆ ಸಂಭವಿಸಿದೆ.

ಧಾರವಾಡದ ಮದಾರಮಡ್ಡಿಯ  ಮಹಾಂತೇಶ ಮೂಲಿಮನಿ ಹಾಗೂ ಚೇತನ ಮೇಲಿನಮನಿ ಎಂಬುವವರೇ ಈ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ.



ಧಾರವಾಡ ಕಡೆಗೆ ಇವರು ಬೈಕ್ ತೆಗೆದುಕೊಂಡು ಬರುತ್ತಿದ್ದ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *