ರಾಜ್ಯ

ಧಾರವಾಡದಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ

ಧಾರವಾಡ prajakiran.com : ರಸ್ತೆಯಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಎಕಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಸುವರ್ಣ ಪೆಟ್ರೋಲ್ ಬಂಕ್ ಬಳಿ ತಡರಾತ್ರಿ ನಡೆದ ಘಟನೆ ಇದಾಗಿದ್ದು, ಹಠಾತ್ ಬೆಂಕಿ ಕಾಣಿಸಿಕೊಂಡು ಕಾರು ಹೋತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕ ಉಂಟಾಗಿತ್ತು.

ನವನಗರದಿಂದ ಧಾರವಾಡ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಎಚ್ಚೆತ್ತ ಸ್ಥಳಿಯರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇದರಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ವಸೀಂ ಷಾ ಕಿತ್ತೂರು ಎಂಬುವವರಿಗೆ ಸೇರಿದ ಕಾರ್ ಇದಾಗಿದ್ದು, ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮಅವರು ಕೂಡ ಕೆಲ ಕಾಲ ಗಲಿಬಿಲಿಗೊಂಡಿದ್ದರು.

ಜೈಲಾನಿ ಖಾಜಿ ಹಾಗೂ ಸ್ಥಳಿಯ ಪೆಟ್ರೋಲ್ ಬಂಕ್ ಸಿಬ್ಬಂದಿ  ಬೆಂಕಿ ನಂದಿಸುವ ಕಾರ್ಯ ಮಾಡಿದರು. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಇದಕ್ಕೆ ಸಾಥ್ ನೀಡಿದರು.


PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *