ಮಂಡ್ಯ Prajakiran.com : ಚಾಲಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಿಗೆ ಬೆಂಕಿ ಹತ್ತಿ, ಕಾರಿನಲ್ಲಿದ್ದ ಐದು ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ.
ಶುಕ್ರವಾರ ಬೆಳಗಿನ ಜಾವ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಈ ವೇಳೆ ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಕಾರು ಹಳ್ಳಕ್ಕೆ ಪಲ್ಟಿಯಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದೆ.
ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಶೇಖ್ ಫಸಲ್, ಮೆಹಕ್ ಮತ್ತು ಶೇಕ್ ಆಯಿಲ್ ಮೃತರು. ಗಾಯಾಳುಗಳು ಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.