ರಾಜ್ಯ

ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ

*ಸ್ವಾಮೀಜಿ ಕಾರು ಪಲ್ಟಿ ಭಕ್ತರಲ್ಲಿ ಆತಂಕ*

ಧಾರವಾಡ prajakiran.com : ಧಾರವಾಡ ತಾಲೂಕಿನ ತೇಗೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಮರಳಿ ಊರಿಗೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತವಾಗಿದ್ದು , ಕಾರಿನಲ್ಲಿದ್ದ ಚಾಲಕ ರಮೇಶ ಮಾಳಿ ಸೇರಿದಂತೆ ಇಬ್ಬರು ಆಪ್ತ ಸಹಾಯಕರು ಸಹ ಸಣ್ಣ ಪುಟ್ಟ ಗಾಯಗಳಾಗಿವೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಶ್ರೀಗಳಿಗೆ ಯಾವುದೇ ರೀತಿಯ ಅನಾಹುತವಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *