ಮುಂಬೈ Prajakiran.com : ಬಾಲಿವುಡ್ ಸೆಲೆಬ್ರೆಟಿಗಳಾದ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿಯಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಗರದಲ್ಲಿ ಕೋವಿಡ್ ನಿಯಮವಿದ್ದರೂ ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ಬ್ಯಾಂಡ್ ಸ್ಟಾಂಡ್ ನಲ್ಲಿ ವಾಯುವಿಹಾರ ಮಾಡುತ್ತಿದ್ದರು.
ಹೀಗಾಗಿ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.