ಅಂತಾರಾಷ್ಟ್ರೀಯ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಸೋಮವಾರ ದೇಶದಲ್ಲಿ 4,329 ಮಂದಿ ಸೋಂಕಿಗೆ ಬಲಿ

ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ‌ ಗಣನೀಯ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,63,533 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ವರದಿ ಪ್ರಕಾರ, ಸೋಮವಾರ 2,63,533 ರಷ್ಟು ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ.

ಇನ್ನು 4,22,43ರಷ್ಟು ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,15,96,512ಕ್ಕೆ ಏರಿಕೆಯಾಗಿದೆ. 33,53,765 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ದೇಶದಲ್ಲಿ 4,329 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 2,78,719ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *