ಬೆಂಗಳೂರು prajakiran.com : ಹಿರಿಯ ಸಾಹಿತಿ ಕೆ ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರಿಂದ ಭಗವಾನ್ ಮುಖಕ್ಕೆ ಮಸಿ ಬಳಿಯಲಾಗಿದೆ. ಭಗವಾನ್ ಅವರು ಹಿಂದೂ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಆಕ್ರೋಶ ಭರಿತವಾಗಿ ತೀವ್ರ ಸ್ವರೂಪದ ಅಸಮಾಧಾನ ವ್ಯಕ್ತಪಡಿಸಿದರು. ಭಗವಾನ್ ವಕೀಲೆ ಖಾಸಗಿ ದೂರು ದಾಖಲಿಸಿದ್ದರು. ಹೀಗಾಗಿ ಗುರುವಾರ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಭಗವಾನ್ ಹಾಜರಾಗಿದ್ದರು. ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ […]
ಆಧ್ಯಾತ್ಮ
ಧಾರವಾಡದ ಬಾಲಕನಿಂದ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ
ಧಾರವಾಡ Prajakiran.Com : ದೇಶದಾದ್ಯಂತ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದರಂತೆ ಧಾರವಾಡದ ಸಂಗೋಳ್ಳಿ ರಾಯಣ್ಣ ನಗರದ ಪ್ರಭುರಾಜ ಎಂಬ ಬಾಲಕ ತನ್ನ ಚಿಕ್ಕ ವಯಸ್ಸಿನಲ್ಲೇ ಪ್ರಭು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಮಾಡಿದ್ದಾನೆ. ಸ್ವಯಂ ಪ್ರೇರಿತನಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಧಾರವಾಡದ ವಿವಿಧ ಬಡಾವಣೆಗಳಲ್ಲಿ ತಾನೆ ತಯಾರಿಸಿದ ಹುಂಡಿಯಲ್ಲಿ ಹಣ ಸಂಗ್ರಹಿಸುವ ಮೂಲಕ ನಿಧಿ ಸಮರ್ಪಣೆ ಮಾಡಿದ್ದಾನೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ನಿಧಿ ಸಮರ್ಪಣಾ ಅಭಿಯಾನಕ್ಕೆ […]
ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಚುನಾವಣೆಗೆ ಸುಪ್ರೀಂ ತಡೆ
ಹುಬ್ಬಳ್ಳಿ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಚುನಾವಣೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಹೈಕೋರ್ಟ್ ಚುನಾವಣೆ ನಡೆಸುವಂತೆ ಸೂಚಿಸಿದ ಬೆನ್ನಲ್ಲೇ ಪಾಲಿಕೆ ಚುನಾವಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಚುನಾವಣೆಗೆ ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ ಹೈಕೋರ್ಟ್ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಆನಂದ […]
ಬಿಜೆಪಿಯವರು ಹಿಟ್ಲರ್ ನಂತೆ ವರ್ತನೆ ಮಾಡುತಿದ್ದಾರೆ ಎಂದ ಮಾಜಿ ಸಚಿವ …!
ಹುಬ್ಬಳ್ಳಿ prajakiran.com ; ಬಿಜೆಪಿಯವರು ಹಿಟ್ಲರ್ ನಂತೆ ವರ್ತನೆ ಮಾಡುತಿದ್ದಾರೆ. ಬಿಜೆಪಿ ನಾಯಕರಿಗೆ ರೈತರು, ಜನಸಾಮಾನ್ಯರು, ವಿರೋಧ ಪಕ್ಷದವರು ಕಾಣುತಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪಿಸಿದರು. ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅವರು ಯಾರಿಗೂ ಬೆಲೆ ಕೊಡುತಿಲ್ಲ- ಸರ್ಕಾರದ ವೈಪಲ್ಯ ಕುರಿತು ಪ್ರತಿಭಟನೆ ಮಾಡಿದರು ಏನು ಪ್ರಯೋಜನವಿಲ್ಲದಂತಾಗಿದೆ ಎಂದು ಹೇಳಿದರು. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ ಎಂದು […]
ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ : ಎಸಿಪಿ ಅನುಷಾ ಜಿ. ಚಾಲನೆ
ಧಾರವಾಡ Prajakiran.com : ಧಾರವಾಡ ನಗರದಾದ್ಯಂತ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ ಕಾರ್ಯಕ್ರಮಕ್ಕೆ ಧಾರವಾಡ ಸಹಾಯಕ ಪೊಲೀಸ್ ಆಯುಕ್ತೆ ಅನುಷಾ ಜಿ. ಚಾಲನೆ ನೀಡಿದರು. ನಗರದ ಕಾರ್ಪೋರೇಷನ್ ಸರ್ಕಲ್ ನಿಂದ ಪ್ರಾರಂಭವಾದ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ರ್ಯಾಲಿಯಲ್ಲಿ ಶಾಲಾ ಮಕ್ಕಳು ಹಾಗೂ ಸಂಚಾರಿ ಪೋಲಿಸ್ ಠಾಣೆ ಸಿಬ್ಬಂದಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಧಾರವಾಡ ನಗರದ ಬಸ್ ನಿಲ್ದಾಣ, ಕೆಸಿಸಿ ಬ್ಯಾಂಕ್ ಸರ್ಕಲ್ ವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. […]
ಲಾರಿಗಳಲ್ಲಿದ್ದ ಬ್ಯಾಟರಿ ಕಳ್ಳತನ ಮಾಡಿದ್ದ ಆರೋಪಿ ಬಂಧಿಸಿದ ಪೊಲೀಸರು….!
ಮಂಗಳೂರು prajakiran.com : ಲಾರಿಗಳಲ್ಲಿದ್ದ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಇರ್ಫಾನ್ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಪಣಂಬೂರಿ ನಲ್ಲಿರುವ ಎನ್ಎಂಪಿಟಿ ಟಿಂಬರ್ ಯಾರ್ಡ್ ನಲ್ಲಿ ಪಾರ್ಕ್ ಮಾಡಿದ್ದ ಸುಮಾರು 5 ಲಾರಿಗಳಲ್ಲಿದ್ದ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ. ಈ ಕುರಿತು ಲಾರಿ ಮಾಲೀಕ ಪೊಲೀಸ್ ದೂರನ್ನು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪಣಂಬೂರು ಠಾಣಾ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 5 ಲಾರಿಗಳ ಬ್ಯಾಟರಿಗಳನ್ನು, ಕೃತ್ಯಕ್ಕೆ ಬಳಸಲು ಉಪಯೋಗಿಸಿದ […]
ಧಾರವಾಡ ಬೈ ಪಾಸ್ ಮಿನಿ ಬಸ್ ಅಪಘಾತ ಪ್ರಕರಣ : ಮತ್ತೊರ್ವ ಸ್ನೇಹಿತೆ ಸಾವು…..!
ಧಾರವಾಡ prajakiran.com : ಕಳೆದ ಜ. 15ರಂದು ಇಲ್ಲಿಯ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯ ಇಟಿಗಟ್ಟಿ ಬಳಿ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವೇದ ಮಂಜುನಾಥ (೪೭) ಅವರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಲಾರಿ ಹಾಗೂ ಮಿನಿ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ವೇದ ಅವರ ೮ ಜನ ಸ್ನೇಹಿತೆಯರು ಅಂದು ಮೃತಪಟ್ಟಿದ್ದರು. ಗಾಯಗೊಂಡಿದ್ದ ವೇದ ಅವರಿಗೆ ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಿ ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೇ […]
ಧಾರವಾಡದ ಸಲಕಿನಕೊಪ್ಪ ಬಳಿ ನಾಯಿಗೆ ಬೈಕ್ ಡಿಕ್ಕಿ : ನಾಯಿ, ಮಹಿಳೆ ಸ್ಥಳದಲ್ಲಿಯೇ ಸಾವು….!
ಧಾರವಾಡ prajakiran.com : ನಾಯಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಗುರುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ಸಲಕಿನಕೊಪ್ಪ ಮತ್ತು ನಿಗದಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಇರ್ಷಾದ್ ಚಪ್ಪರಾರ್ ಅನ್ನೋ 43 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ನಿಗದಿ ಗ್ರಾಮದಿಂದ ಪ್ರಕಾಶ ಅನ್ನೋರ ಬೈಕ್ ಮೇಲೆ ಧಾರವಾಡಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವೇಳೆ ಅಪಘಾತ […]
ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರು : ಜನಜಾಗೃತಿ ಸಂಘದ ವತಿಯಿಂದ ಅರ್ಥಪೂರ್ಣ ಆಚರಣೆ
ಧಾರವಾಡ prajakiran.com : ಸ್ವಾಮಿ ವಿವೇಕಾನಂದರ ೧೫೮ನೇ ಜಯಂತಿಯನ್ನು ಇಲ್ಲಿಯ ದೊಡ್ಡನಾಯಕನಕೊಪ್ಪ ಬಡಾವಣೆಯ ಬೇಂದ್ರೆ ನಗರ ಕ್ರಾಸ್ ನಲ್ಲಿ ಜನಜಾಗೃತಿ ಸಂಘದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾನುವಾರ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ ಅವರು ಸ್ವಾಮಿ ವಿವೇಕಾನಂದರ ಕಲಾಕೃತಿಯನ್ನು ಮರಳಿನಲ್ಲಿ ಅರಳಿಸಿದರು. ಬೆಳಗ್ಗೆ ೫-.೩೦ರಿಂದ ೯ಗಂಟೆಯವರೆಗೆ ಸತತ ನಾಲ್ಕು ಗಂಟೆಗಳಲ್ಲಿ ತಮ್ಮ ಕೈ ಚಳಕ ತೋರುವಲ್ಲಿ ಯಶಸ್ವಿಯಾದರು. ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿಗಳು ಕಲಾಕೃತಿಯನ್ನು ವೀಕ್ಷಿಸಿ, ಭಕ್ತಿಯಿಂದ ನಮಿಸಿ ಪೂಜೆ ಸಲ್ಲಿಸಿದರು. ಬಳಿಕ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ […]
ಆರು ಬಾರಿ ಗೆದ್ದಂತಹ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರಗೆ ಸಚಿವನಾಗುವ ಭಾಗ್ಯ
ಮಂಗಳೂರು prajakiran.com: ಆರು ಬಾರಿ ಗೆದ್ದಂತಹ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಸಚಿವನಾಗುವ ಸಮಯ ಬಂದಿದೆ ಈ ಹಿನ್ನೆಲೆಯಲ್ಲಿ ಶಾಸಕ ಪುಲ್ ಆಕ್ಟಿವ್ ಆಗಿ ಸಂಭ್ರಮದಲ್ಲಿದ್ದಾರೆ. ರಾಜ್ಯ ಭವನದಲ್ಲಿ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಪ್ರಮಾಣವಚನ ಸ್ವೀಕರಿಸಲು ಖಚಿತ ಮಾಹಿತಿ ಲಭ್ಯವಾಗಿದ್ದು. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಫೋನ್ ಕರೆಯಿಂದ ಬೆಂಗಳೂರಿಗೆ ಆಗಮಿಸಿದ ಶಾಸಕ ಎಸ್.ಅಂಗಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧವಾಗಿದ್ದಾರೆ ಎಂದು […]










