ಅಂತಾರಾಷ್ಟ್ರೀಯ

ಕುರುಬ ಸಮುದಾಯ ಎಸ್ ಟಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿಎಂ

ಬೆಂಗಳೂರು ಪ್ರಜಾಕಿರಣ.ಕಾಮ್ :  ಸಿದ್ದರಾಮಯ್ಯ ಸಿಎಂ ಆದ ತಕ್ಷಣ ತಮ್ಮ ಸಮುದಾಯಕ್ಕೆ ಬಿಗ್ ರಿಲೀಫ್ ನೀಡಿದ್ದಾರೆ. ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನ ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ತಮ್ಮ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ   ಮಣಿವಣ್ಣನ್ ಪಿ. ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ‌ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಏರಿಯಾಗಳಲ್ಲಿ ಇದ್ದ ಕಾಡು ಕುರುಬರನ್ನ ಮಾತ್ರ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು. […]

ಅಂತಾರಾಷ್ಟ್ರೀಯ

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ…….!?

*ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು* *ಸಿಸಿಬಿ ಪೊಲೀಸರ ಭರ್ಜರಿ* *ಬಂಧಿತರಿಂದ 7 ಪಿಸ್ತೂಲ್, 42 ಮದ್ದುಗುಂಡು, 2 ಡ್ರಾಗನ್ ವಶಕ್ಕೆ* ಬೆಂಗಳೂರು ಪ್ರಜಾಕಿರಣ.ಕಾಮ್ : ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಸೈಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್​ ಎಂದು ಗುರುತಿಸಲಾಗಿದೆ. ಹೆಬ್ಬಾಳ ಪೊಲಿಸ್ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದ ಮಸೀದಿ ಬಳಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿತರು ಖೆಡ್ಡಾಕ್ಕೆ ಬಿದ್ದಿದ್ದಾರೆ. ಅವರ ಬಳಿಯಿದ್ದ […]

ಅಂತಾರಾಷ್ಟ್ರೀಯ

ಕೇರಳದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಇನ್ನಿಲ್ಲ….!

ಬೆಂಗಳೂರು ಪ್ರಜಾಕಿರಣ.ಕಾಮ್  ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 2004 ರಿಂದ 2006 ಮತ್ತು […]

ಅಂತಾರಾಷ್ಟ್ರೀಯ

ಚಂದ್ರಯಾನ-3 ಯಶಸ್ವಿ ಉಡಾವಣೆ

ನವದಹಲಿ ಪ್ರಜಾಕಿರಣ.ಕಾಮ್ : ಭಾರತದ ಹೆಮ್ಮೆಯ ಪ್ರತೀಕವಾದ ಚಂದ್ರಯಾನ-3 ಇಂದು ಶುಕ್ರವಾರ ಅಪರಾಹ್ನ 2.35 ಗಂಟೆಗೆ ಆಂಧ್ರದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3ರ ಚಾಲನೆ ಯಶಸ್ವಿ ಆಯಿತು. ದೇಶದ ಜನರ ನಿರೀಕ್ಷೆಯಂತೆ ಈ ಬಾರಿ ಇಸ್ರೋ ಗೆದ್ದಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಮುಗಿಲೆತ್ತರಕ್ಕೆ ಏರಿದೆ. ನಮ್ಮ ಹೆಮ್ಮೆಯ ಇಸ್ರೋ ಇನ್ನೊಂದು ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದೆ. ಸಮಸ್ತ ಭಾರತೀಯರ ಬಹು ನಿರೀಕ್ಷಿತ ಬಾಹ್ಯಾಕಾಶ ಯೋಜನೆ ಚಂದ್ರಯಾನ-3 ಉಡ್ಡಯನದ […]

ಅಂತಾರಾಷ್ಟ್ರೀಯ

ಫ್ರಾನ್ಸ್ ನ “ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್” ಪ್ರಶಸ್ತಿಗೆ ಪ್ರಧಾನಿ ಮೋದಿ ಭಾಜನ

ನವದೆಹಲಿ ಪ್ರಜಾಕಿರಣ.ಕಾಮ್  :  ಫ್ರಾನ್ಸ್ ದೇಶ ನೀಡುವ ಅತ್ಯುನ್ನತ ನಾಗರಿಕ ಗೌರವವಾದ “ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್” ಪ್ರಶಸ್ತಿಗೆ ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಭಾಜನರಾಗಿದ್ದಾರೆ.  ಈ ಪ್ರತಿಷ್ಠಿತ ಗೌರವವು ಪ್ರಧಾನಮಂತ್ರಿಗಳ ರಾಜತಾಂತ್ರಿಕತೆಯ ನೈಪುಣ್ಯತೆಗೆ ಒಲಿದ ಮನ್ನಣೆಯಾಗಿದ್ದು, 140 ಕೋಟಿ ಭಾರತೀಯರೆಲ್ಲರೂ ಹೆಮ್ಮೆ ಪಡುವ ಕ್ಷಣವಾಗಿದೆ. 🇮🇳🇫🇷  #LegionofHonour ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ವಿಶ್ವ ವ್ಯಾಪ್ತಿ ಈಗಾಗಲೇ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿ, ದೇಶದ ಮನ್ನಣೆಯನ್ನು ಹೆಚ್ಚಿಸಿರುವುದು ಇಲ್ಲಿ ಸ್ಮರಿಸಬಹುದು […]

ಅಂತಾರಾಷ್ಟ್ರೀಯ

ವರ್ಗಾವಣೆಯಲ್ಲಿ ಲಂಚ ಸಾಬೀತಾದರೆ ರಾಜಕೀಯ ನಿವೃತ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

*ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ* *4000 ಬಸ್ ಗಳ ಖರೀದಿ* *ಕೇಂದ್ರ ಸರ್ಕಾರದಿಂದ ಕನ್ನಡ ನಾಡಿಗೆ ನಿರಂತರ ದ್ರೋಹ, ಅನ್ಯಾಯ* *ಬಿಜೆಪಿಯ ಆರ್ಥಿಕ ನೀತಿಯಿಂದ ರಾಜ್ಯ ಮತ್ತು ದೇಶದ ಆರ್ಥಿಕತೆ ಸಿಕ್ಕಾಪಟ್ಟೆ ಹದಗೆಟ್ಟಿದೆ* *ಸದನದಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು* *ವರ್ಗಾವಣೆಯಲ್ಲಿ ಲಂಚ: ಸಾಬೀತಾದರೆ ರಾಜಕೀಯ ನಿವೃತ್ತಿ:ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ13: “ನನ್ನ ಸುದೀರ್ಘ ರಾಜಕಾರಣ ಜೀವನದಲ್ಲಿ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂಬ ಯಾವ ಹಗರಣ, ಆರೋಪಗಳೂ ಇಲ್ಲ. ಸರ್ಕಾರ ರಚನೆಯಾದ ಮೊದಲನೇ ದಿನವೇ ಯಾವ ಕಾರಣಕ್ಕೂ ವರ್ಗಾವಣೆಯಲ್ಲಿ […]

ಅಂತಾರಾಷ್ಟ್ರೀಯ

ಕೇಂದ್ರದ ಅಕ್ಕಿ ಕಡಿತ ಮಾಡಿ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ

ಬೆಂಗಳೂರು ಪ್ರಜಾಕಿರಣ.ಕಾಮ್   : ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿಯನ್ನೂ ಈ ತಿಂಗಳು ರಾಜ್ಯ ಸರ್ಕಾರ ಎರಡು ಕೆಜಿ ಕಡಿಮೆ ಮಾಡಿದೆ. ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. […]

ಅಂತಾರಾಷ್ಟ್ರೀಯ

ಧಾರವಾಡದ ಸದಾನಂದ ಅಂತರ್ ರಾಷ್ಟ್ರೀಯ ಐರನ್ ಮ್ಯಾನ್

*ಸದಾನಂದ ಅಮರಾಪುರ್ ಈಗ ಅಂತರಾಷ್ಟ್ರೀಯ ಐರನ್ ಮ್ಯಾನ್ ;*   *ಈ ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿ ಅಮರಾಪುರ* *ಆತ್ಮೀಯತೆಯಿಂದ ಅಭಿನಂದಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ* ಧಾರವಾಡ ಪ್ರಜಾಕಿರಣ.ಕಾಮ್  ಜು.12: ಜುಲೈ 2ನೇ ತಾರೀಖಿನಂದು ಕಜಕಿಸ್ಥಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಧಾರವಾಡದ ಸದಾನಂದ ಅಮರಾಪುರ ಅವರು 3.9 ಕಿ.ಮೀ ಈಜನ್ನು 180 ಕಿ. ಮೀ ಸೈಕ್ಲಿಂಗ್‍ನ್ನು ಹಾಗೂ 42 ಕೀ.ಮೀ. ಓಟವನ್ನು 13 ಗಂಟೆ […]

ಅಂತಾರಾಷ್ಟ್ರೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಬಿಜೆಪಿಯಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಬಿಜೆಪಿಯಿಂದ ವಿಕಾಸಸೌಧ ಬಳಿ‌ಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿ ವಿಕಾಸಸೌಧದ ಗಾಂಧಿ ಪ್ರತಿಮೆ ಬಳಿ ಬುಧವಾರ ಬೆಳಿಗ್ಗೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯದ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿ ಕಾರಿದರು‌. […]

ಅಂತಾರಾಷ್ಟ್ರೀಯ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷದ ರಾಜಕಾರಣ : ಕಾಂಗ್ರೆಸ್ ನಿಂದ ಮೌನ‌ ಪ್ರತಿಭಟನೆ

ಬಾಯಿಗೆ ಕಪ್ಪು ಪಟ್ಟಿಗೆ ಕಟ್ಟಿಕೊಂಡು ಆಕ್ರೋಶ ಬೆಂಗಳೂರು ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರದ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರು ಬೆಂಗಳೂರಿನ ಫ್ರೀಡಮ್ ಪಾರ್ಕ್‌ ನಲ್ಲಿ ಮೌನ ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿಯನ್ನು ಶತಾಯ ಗತಾಯ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಹುನ್ನಾರ ನಡೆಸಿದೆ ಎಂದು ದೂರಿದರು ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿರುವುದನ್ನು ತೀವ್ರವಾಗಿ ವಿರೋಧಿಸಿದರು. ಕೆಪಿಸಿಸಿ […]