ಅಂತಾರಾಷ್ಟ್ರೀಯ

ನೂರು ದಿನಗಳ ಆಡಳಿತಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ prajakiran.com : ರಾಜ್ಯದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳು ಹಾಗೂ ನೂತನ ಯೋಜನೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತೃಪ್ತಿ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನವ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಕರ್ನಾಟಕ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಭೇಟಿಯ ಸಂದರ್ಭದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಬಗ್ಗೆ ಹಾಗೂ […]

ಅಂತಾರಾಷ್ಟ್ರೀಯ

ಬಿಟ್ ಕಾಯಿನ್ ದಂಧೆಯ ಕುರಿತು ಸಿಎಂ ಬಳಿ ಮಾಹಿತಿ‌ ಪಡೆದ ಪ್ರಧಾನಿ‌ ಮೋದಿ…..!?

ಬಸವರಾಜ ಬೊಮ್ಮಾಯಿಗೆ ಮೋದಿ ಅಭಯ ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ ಮಾತು ನವದೆಹಲಿ prajakiran.com : ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು […]

ಅಂತಾರಾಷ್ಟ್ರೀಯ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ೧೦ ಕೋಟಿ ಅನುದಾನ ಬಿಡುಗಡೆ

ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಬೆಂಗಳೂರು prajakiran.com : ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ […]

ಅಂತಾರಾಷ್ಟ್ರೀಯ

ಧಾರವಾಡದ ಗರಗದಲ್ಲಿ ಅ. 28,29,30 ರಂದು ಆರ್ ಎಸ್ ಎಸ್ ಬೈಠಕ್

ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್  ಧಾರವಾಡ prajakiran.com : ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ , ಅಕ್ಟೋಬರ್ 28, 29 ಮತ್ತು 30 ರಂದು ಧಾರವಾಡದ ಹೊರವಲಯದಲ್ಲಿರುವ ಗರಗದ ಮಾಧವ ನಗರದಲ್ಲಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆಯಲಿದೆ. ಬೈಠಕ್ ನಲ್ಲಿ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಮಾ. ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ)  ದತ್ತಾತ್ರೇಯ ಹೊಸಬಾಳೆ ಜೊತೆಗೆ ಅಖಿಲ ಭಾರತೀಯ, ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಈ ಬೈಠಕನಲ್ಲಿ […]

ಅಂತಾರಾಷ್ಟ್ರೀಯ

ಹಾವೇರಿ ಜಿಲ್ಲೆಯ ಚಟ್ನಳಿ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ….!

ಹುಬ್ಬಳ್ಳಿ prajakiran.com : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಟ್ನಳಿ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕೆಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಮೇ.ಜಿ.ಎಮ್.ಶುಗರ್ ಮತ್ತು ಎನರ್ಜಿ ಪ್ರೈ ಲಿ. ಕಂಪನಿ ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪರಿಣಾಮ ಸುಮಾರು 70 ಕ್ಕೂ ಹೆಚ್ಚು […]

ಅಂತಾರಾಷ್ಟ್ರೀಯ

ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್, ಪೆಡ್ಲರ್ ಅಂದ ನಳೀನ್ ಕುಮಾರ ಕಟೀಲ್

ಹುಬ್ಬಳ್ಳಿ prajakiran.com : ಕಾಂಗ್ರೆಸ್ ಯುವ ನಾಯಕ  ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದರು. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾತನಾಡುವ ವೇಳೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ದ ವಾಗ್ದಾಳಿ ನಡೆಸಿದರು ಇವರ ಪಕ್ಷದ ರಾಜ್ಯಾಧ್ಯಕ್ಷ ತಿಹಾರ್ ಜೈಲಿಹೋಗಿದ್ರ? ಎಂದು ಕಿಡಿಕಾರಿದರು‌. ಡಿಕೆಶಿ ಮತ್ತು ಸಿದ್ದರಾಮಯ್ಯ ಜಗಳ ಮುಂದಿನ ಚುನಾವಣೆವರೆಗೂ ಮುಂದುವರೆಯತ್ತದೆ ಎಂದರು. ನಮ್ಮ ಪ್ರಧಾನಿ ಸಬ್ ಕಾ ಸಾತ್ […]

ಅಂತಾರಾಷ್ಟ್ರೀಯ

ಧಾರವಾಡ ಕೃಷಿ ವಿವಿಯ 247 ಸ್ನಾತಕೋತ್ತರ, 601 ಸ್ನಾತಕ ಪದವಿ ಸೇರಿ 911 ಅಭ್ಯರ್ಥಿಗಳಿಗೆ ಪದವಿ ಪ್ರದಾನ

ಕೃಷಿ ವಿವಿ, ಧಾರವಾಡ 34ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ಧಾರವಾಡ ಅ. 18 prajakiran.com : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರೈತರ ಜ್ಞಾನಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕೃಷಿ ವಿಶ್ವವಿದ್ಯಾಲಯ ಧಾರವಾಡ 34ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಕೋವಿಡ್ ನಿಯಮಾವಳಿಯಂತೆ ನಡೆದ ಕಾರ್ಯಕ್ರಮದಲ್ಲಿ ಘಟಿಕೋತ್ಸವಕ್ಕೆ ಚಾಲನೆ ನೀಡಿದ ರಾಜ್ಯಪಾಲರು, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ 53 ಚಿನ್ನದ ಪದಕ ಹಾಗೂ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು […]

ಅಂತಾರಾಷ್ಟ್ರೀಯ

ರೈತರು ಸಂಶೋಧನೆ, ಅಭಿವೃದ್ದಿಗೆ ಪರಿಣಾಮಕಾರಿ ಕೊಡುಗೆ ನೀಡಲಿ

ಧಾರವಾಡ prajakiran.com ಅ.18: ಕೃಷಿ ಕ್ಷೇತ್ರದ ಸಂಶೋಧನೆಗಳು ಅನ್ವೇಷಣಾತ್ಮಕವಾಗಿದ್ದು ರೈತರು ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಪರಿಣಾಮಕಾರಿಯಾದ ಕೊಡುಗೆಗಳನ್ನು ನೀಡಿದಾಗ ಅವುಗಳ ಮೌಲ್ಯ ಹೆಚ್ಚಾಗುತ್ತದೆ.ವಿಶ್ವಸಂಸ್ಥೆ ಗೊತ್ತುಪಡಿಸಿರುವ ಸಾಮಾಜಿಕ ಹಾಗೂ ಸುಸ್ಥಿರ ಅಭಿವೃದ್ಧಿಯ ಗುರಿ ತಲುಪಲು ಭಾರತ ಸಮರ್ಥವಾಗಿದೆ.ಕೃಷಿ ಕ್ಷೇತ್ರದ ಸಂಶೋಧಕರು ಮತ್ತು ವಿದ್ಯಾರ್ಥಿಗಳು ಹೊಸ ಅನ್ವೇಷಣಾತ್ಮಕ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೆಲ್ಕೋ ಇಂಡಿಯಾ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಹರೀಶ ಹಂದೆ ಹೇಳಿದರು. ಕೃಷಿ ವಿವಿಯ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಇಂದು ಜರುಗಿದ 34 […]

ಅಂತಾರಾಷ್ಟ್ರೀಯ

ಧಾರವಾಡ ಕೃಷಿ ವಿವಿ ಘಟಿಕೋತ್ಸವ : ಮುದ್ದೇಬಿಹಾಳದ ಬಸವರಾಜ ನಾರಗಲ್‌ಗೆ ಸ್ವರ್ಣಪದಕ

ಧಾರವಾಡ prajakiran.com ಅ.18: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಮದರಿ ಗ್ರಾಮದ ಬಸವರಾಜ ನಾರಗಲ್ ಎಂ.ಎಸ್ಸಿ ಕೃಷಿ ಹವಾಮಾನಶಾಸ್ತ್ರ ಪದವಿಯಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ. ಇಂದು ನಡೆದ ವಿವಿಯ 34 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪದವಿ ಹಾಗೂ ಪದಕ ಪ್ರಧಾನ ಮಾಡಿದರು. ಬೆಳೆ ಹಾನಿ,ಬೆಳೆ ರೋಗ, ಹವಾಮಾನ ಬದಲಾವಣೆಗಳು ಕೃಷಿಕನ ಭವಿಷ್ಯ ನಿರ್ಧರಿಸುತ್ತವೆ. ಕೃಷಿ ಹವಾಮಾನಶಾಸ್ತ್ರವು ಇನ್ನಷ್ಟು ನಿಖರ ವರದಿಗಳನ್ನು ನೀಡಲು ಸಾಧ್ಯವಾದರೆ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಸಾಧ್ಯ ವಿದೇಶದ […]

ಅಂತಾರಾಷ್ಟ್ರೀಯ

ಧಾರವಾಡ ಕೃಷಿ ವಿವಿಗೆ ರಾಜ್ಯಪಾಲರ ಭೇಟಿ : ಬೇಡಿಕೆಗಳ ಈಡೇರಿಕೆ ಕುರಿತ ಭರವಸೆ ಗೌರವಿಸಿ ಶಿಕ್ಷಕರ ಮುಷ್ಕರ ತಾತ್ಕಾಲಿಕಾಗಿ ಹಿಂದಕ್ಕೆ

ಧಾರವಾಡ prajakiran.com ಅ.18: ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರ ಕಲ್ಯಾಣ ಸಂಘದ ಬೇಡಿಕೆಗಳನ್ನು ಪರಿಗಣಿಸಿ ,ಕಾನೂನು ಚೌಕಟ್ಟಿನಲ್ಲಿ ಅವುಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು.10 ರಿಂದ 12 ದಿನಗಳ ಅವಧಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಈ ಕುರಿತು ಪರಿಹಾರಕ್ಕೆ ಸೂತ್ರ ಒದಗಿಸಲಾಗುವುದು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ಶಿಕ್ಷಕರ ಕಲ್ಯಾಣ ಸಂಘ ನಡೆಸುತ್ತಿರುವ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಧರಣಿ ನಿರತರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದರು. 10 ರಿಂದ 12 ದಿನಗಳೊಳಗೆ […]