ಬೆಂಗಳೂರು ಪ್ರಜಾಕಿರಣ.ಕಾಮ್ ನ. 27 : ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇವಲ ಆರೋಪ ಮಾಡುವ ಉದ್ದೇಶದಿಂದ ಆರೋಪಿಸುತ್ತಿದ್ದಾರೆ. ಇದುವರೆಗೆ 1.17 ಕೋಟಿ […]
ರಾಜ್ಯ
ಬಸವರಾಜ ಕೊರವರ ಮೇಲಿನ ರಾಜದ್ರೋಹ ಪ್ರಕರಣ ರದ್ದು ಮಾಡಿದ ಹೈಕೋರ್ಟ್
ಧಾರವಾಡ ಪ್ರಜಾಕಿರಣ.ಕಾಮ್ : ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷಾಂತರ ಪೊಲೀಸರಿಗೆ ವಾರದ ರಜೆ, ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹೊಂದಿರುವ ರಾಘವೇಂದ್ರ ಔರಾದಕರ್ ವರದಿ ಜಾರಿಗೆ ಆಗ್ರಹಿಸಿ ಅಂದು 2016ರಲ್ಲಿ ಪೊಲೀಸ ಕುಟುಂಬದ ಸದಸ್ಯರೊಂದಿಗೆ ಉಗ್ರ ಹೋರಾಟಕ್ಕೆ ಮುಂದಾಗಿದ್ದ ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ ಹಾಗೂ ಹಾವೇರಿಯ ಗುರುಪಾದಯ್ಯ ಹೊಂಗಲ್ ಮಠ ಅವರ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಅಂದು ಧಾರವಾಡದ ಪೊಲೀಸರು ಕಲಾಭವನ ಮೈದಾನಕ್ಕೆ ಬರುವ ಮುನ್ನವೇ ಅವರನ್ನು ಬಂಧಿಸಿದ್ದರು. ಅಂದಿನ ಸಿದ್ದರಾಮಯ್ಯ ನೇತೃತ್ವದ […]
ಜೆಡಿಎಸ್ ರಾಜಕೀಯ ಪಕ್ಷ ಅಲ್ಲ, ಕುಟುಂಬದ ಪಕ್ಷ ಅಷ್ಟೆ ಎಂದ ಸಿದ್ದರಾಮಯ್ಯ
*ಜೆಡಿಎಸ್ ಪಕ್ಷದಿಂದ “ಎಸ್”(Secular) ತೆಗೆದು ಹಾಕಬೇಕಾಗಿದೆ* *ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ* ಬೆಂಗಳೂರು ಪ್ರಜಾಕಿರಣ.ಕಾಮ್ ನ 15: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. ನಾವಿದ್ದಾಗ ಜನತಾದಳ ಸೆಕ್ಯುಲರ್ […]
ಕಾಂಗ್ರೆಸ್ ಲೋಕಸಭಾ ಟಿಕೆಟ್ ಸಿಗುವ ಭರವಸೆ ಇದೆ ಎಂದ ಬಸವರಾಜ ಗುರಿಕಾರ
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಅನ್ನು ನನಗೆ ನೀಡುವಂತೆ ವರಿಷ್ಠರನ್ನು ಕೇಳಿದ್ದು ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಬಸವರಾಜ ಗುರಿಕಾರ ತಿಳಿಸಿದ್ದಾರೆ. ಅವರು ಸೋಮವಾರ ಧಾರವಾಡದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಹೀಗಾಗಿ ಈ ಬಾರಿ ಟಿಕೆಟ್ ದೊರಕುವ ವಿಶ್ವಾಸ ಇದೆ ಎಂದರು. ನಾನು ಸಹ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, […]
ಕೆ ಇ ಎ ಪರೀಕ್ಷೆ ಅಕ್ರಮ : ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅರೆಸ್ಟ್
ಕಲಬುರಗಿ ಪ್ರಜಾಕಿರಣ.ಕಾಮ್ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯ ಅಕ್ರಮ ಆರೋಪದ ಕಿಂಗ್ ಪಿನ್ ಆರ್.ಡಿ. ಪಾಟೀಲನನ್ನು ಕೊನೆಗೂ ಕಲಬುರಗಿಯ ಅಶೋಕ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಫಜಲ್ ಪುರ ಗಡಿ ಭಾಗದಲ್ಲಿ ಇರುವ ಸೊಲ್ಲಾಪುರದ ಸಂಬಂಧಿಕರ ಮನೆಯಲ್ಲಿ ಇತ ಅಡಗಿದ್ದ ಎನ್ನಲಾಗಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿಶೇಷ ತಂಡ ರಚಿಸಿದ್ದರು. ಆತನ ವಿರುದ್ದ ಕಲಬುರಗಿ, ಯಾದಗಿರಿ ಸೇರಿದಂತೆ ಹಲವಡೆ ಪ್ರಕರಣ ದಾಖಲಾದ ಬಳಿಕ ಪೊಲೀಸರು ಅವನನ್ನು ಬಂಧಿಸಲು ಮೀನಾಮೇಷ ಎಣಿಸಿದ ಆರೋಪ ಕೇಳಿಬಂದಿತ್ತು. […]
ಪಿಎಸ್ಐ 545 ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು ಪ್ರಜಾಕಿರಣ.ಕಾಮ್ : ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್ಐ 545 ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ದ್ವಿಸದಸ್ಯ ಪೀಠದ ನ್ಯಾಯಮೂರ್ತಿ ಗಳಾದ ಪಿ.ಎಸ್.ದಿನೇಶ್ ಕುಮಾರ್ ಹಾಗೂ ಟಿ.ಜಿ.ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಅದೂ ಅಲ್ಲದೆ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪದ ಹಿನ್ನೆಲೆಯಲ್ಲಿ ನೇಮಕಾತಿ ಸಂಬಂಧ ಈ ಹಿಂದೆ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, […]
ಜೆಡಿಎಸ್ ನ ರೈತ ಸಾಂತ್ವನ ಯಾತ್ರೆಗೆ ಸಿಎಂ ಸ್ವಾಗತ
*ಕೇಂದ್ರದ ಗಮನ ಸೆಳೆದು ಬರ ಪರಿಹಾರ ತರಲಿ ಎಂದು ಸಲಹೆ* ಬೆಂಗಳೂರು ಪ್ರಜಾಕಿರಣ.ಕಾಮ್ : ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ ಎಂದಿದ್ದಾರೆ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ. ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ […]
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್
*ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಹೆಸರಿನಲ್ಲಿ ಇಡೀ ವರ್ಷ ಸ್ವಾಭಿಮಾನಿ ಕನ್ನಡ ಸಾಂಸ್ಕೃತಿಕ ಸಂಭ್ರಮ* *ಹಿಂದಿನ ಬಿಜೆಪಿ ಸರ್ಕಾರ 50 ನೇ ವರ್ಷಕ್ಕೆ ಇದನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಹೀಗಾಗಿ 50 ವರ್ಷ ತುಂಬಿದ ಸಂದರ್ಭದಲ್ಲಿ ನಾವು ಆಚರಿಸುತ್ತಿದ್ದೇವೆ* ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ* ಬೆಂಗಳೂರು ಪ್ರಜಾಕಿರಣ.ಕಾಮ್ ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ […]
ಪದೇ ಪದೇ ಸರ್ಕಾರ ಕೆಡವಲು ಬಿಜೆಪಿ ಕೈ ಹಾಕ್ತಿದೆ ಎಂದ ಸಚಿವ ಲಾಡ್
*ಸರ್ಕಾರ ಬೀಳಿಸಲಿ ಬಿಡಿ… ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಸಂತೋಷ ಲಾಡ* ಧಾರವಾಡ ಪ್ರಜಾಕಿರಣ.ಕಾಮ್ : ಸರ್ಕಾರ ಬಿಳಿಸಿದ್ರೇ… ಬೀಳಿಸಲಿ ಬಿಡಿ… ಪದೇ ಪದೇ ಸರ್ಕಾರ ಕೆಡವಲು ಬಿಜೆಪಿ ಕೈ ಹಾಕ್ತಿದೆ ಎಂದು ಸಚಿವ ಸಂತೋಷ ಲಾಡ ಖಾರವಾಗಿ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾದ್ಯಮದವರ ಜೋತೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರಕಾರ ಅಧಿಕಾರಕ್ಕೆ ಬಂದಿದೆ. ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರ ಅವರನ್ನೇ ಕೇಳಿ ಎಂದರು. ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಮಾತನಾಡಲು ಹೇಳಿ… […]
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಖೈದಿ ಸಿಬ್ಬಂದಿ ನಡುವೆ ಜಟಾಪಟಿ
ಧಾರವಾಡ ಪ್ರಜಾಕಿರಣ.ಕಾಮ್* : ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಕೈದಿ ಹಾಗೂ ಸಿಬ್ಬಂದಿಯೊಬ್ಬರ ನಡುವೆ ಮಾರಾಮಾರಿ ನಡೆದ ಪರಿಣಾಮ ಇಬ್ಬರು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೋಹನ ಬಡಿಗೇರ ಎಂಬ ಜೈಲು ಸಿಬ್ಬಂದಿ ಹಾಗೂ ಪ್ರಶಾಂತ್ ಅಲಿಯಾಸ್ ಪಾಚು ಎಂಬ ಕೈದಿ ನಡುವೆಯೇ ಈ ಮಾರಾಮಾರಿ ನಡೆದಿದೆ. ಪ್ರಶಾಂತ ಎಂಬ ಕೈದಿ ಅನೇಕ ದಿನಗಳಿಂದ ಧಾರವಾಡದ ಕೇಂದ್ರ ಕಾರಾಗೃಹದಲ್ಲಿಯೇ ಸೆರೆವಾಸ ಅನುಭವಿಸುತ್ತಿದ್ದಾನೆ. ಇಂದು ಕ್ಷುಲ್ಲಕ ಕಾರಣಕ್ಕಾಗಿ ಕೈದಿ ಹಾಗೂ ಸಿಬ್ಬಂದಿ ಮಧ್ಯೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಪ್ರಶಾಂತ […]