ರಾಜ್ಯ

ಧಾರವಾಡದ ಎಸ್‌ಡಿಎಂನಲ್ಲಿ ೧೩, ಹುಬ್ಬಳ್ಳಿಯ ಕಿಮ್ಸ ನಲ್ಲಿ ೧೮೮ ಜನರಿಗೆ ಚಿಕಿತ್ಸೆ

ಧಾರವಾಡ prajakiran.com : ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಚಿಕಿತ್ಸೆಗೆ ಕಿಮ್ಸ ನಲ್ಲಿ ೧೮೮, ಎಸ್‌ಡಿಎಂನಲ್ಲಿ ೧೩, ಕೋವಿಡ್ ಕೇರ್ ಸೆಂಟರ್‌ನಲ್ಲಿ ೧೩೮ ಸೇರಿ ಒಟ್ಟು ೩೩೯ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ನಡೆದ ಸಭೆಗೆ  ಈ ಕುರಿತು ಮಾಹಿತಿ ನೀಡಿದ್ದಾರೆ. ಧಾರವಾಡದ ಡಿಮ್ಹಾನ್ಸ್ ಪ್ರಯೋಗಾಲಯದಲ್ಲಿ ೩೧,೮೦೭, ಕಿಮ್ಸ್ ೧೯೫೯೬, ಖಾಸಗಿ ಎನ್‌ಎಂಆರ್ ಪ್ರಯೋಗಾಲಯದಲ್ಲಿ ೬೩ ಜನರನ್ನು ಇದುವರೆಗೆ […]

ರಾಜ್ಯ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಎಂದ ಲಕ್ಷ್ಮಿ ಹೆಬ್ಬಾಳಕರ್  

ಬೆಳಗಾವಿ prajakiran.com : ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತ, ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುವುದಾಗಿ ಹೇಳಿಕೆ ನೀಡಿದ್ದರು. […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 668ಕ್ಕೆ ಏರಿದ ಕರೋನಾ : ಮಂಗಳವಾರ ಮತ್ತೇ ಹೊಸದಾಗಿ 57 ಪ್ರಕರಣ

*ಒಟ್ಟು 668ಕ್ಕೇರಿದ ಪ್ರಕರಣಗಳ ಸಂಖ್ಯೆ  *ಇದುವರೆಗೆ ಹದಿಮೂರು ಮರಣ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೇ ಹೊಸದಾಗಿ 57 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ  ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 668 ಕ್ಕೆ ಏರಿದೆ.ಇದುವರೆಗೆ 260 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ13 ಜನ ಮೃತಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ. DWD 612 (03 ಬಾಲಕಿ) ತಾಜ್ ನಗರ ಉಣಕಲ್  ಹುಬ್ಬಳ್ಳಿ ನಿವಾಸಿ, DWD 613 ( 32 ಪುರುಷ) […]

ರಾಜ್ಯ

ಹುಡಾ ಕಾರ್ಯಾಚರಣೆಗೆ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆಕ್ರೋಶ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರ ಅಕ್ರಮ ಲೇಔಟ್ ವಿರುದ್ದ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಇದು ಹಣ ಮಾಡುವ ತಂತ್ರವಾಗಿದೆ ಎಂದು  ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಕೋವಿಡ್ -19 ಸಂದರ್ಭದಲ್ಲಿ ಈ ಕಾರ್ಯಾಚರಣೆ ನಡೆಸುವ ಅಗತ್ಯವಿರಲಿಲ್ಲ. ಇದು ಜನರಿಗೆ ಭಯ ಹುಟ್ಟಿಸುವ ತಂತ್ರವಾಗಿದೆ ಎಂದು ಗುಡುಗಿದ್ದಾರೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿಯ ಎಲ್ಲ ಅಕ್ರಮ ಸಕ್ರಮ ತೆರವು ಗೊಳಿಸಲಿ ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಕಂದಾಯ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೇ 57 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 57 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 668 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ  15 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಜೂನ್ 5ರಂದು 18 ಜನರಿಗೆ ಹೇಗೆ ಕರೋನಾ ಬಂತು ಎಂಬ ಮಾಹಿತಿ ಇರದಿದ್ದರೆ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಕರೋನಾಕ್ಕೆ 15 ಸಾವು, 1498 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 15  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1498   ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 26815ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  571 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  11098   ಜನ ಗುಣಮುಖರಾಗಿದ್ದು, 15297 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  279   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರ […]

ರಾಜ್ಯ

ಲಕ್ಷ್ಮೀ‌ ಹೆಬ್ಬಾಳ್ಕರ್ ಗೆ ಕುಕ್ಕರ್ ಕೊಡಿಸಿದ್ದು ನಾನೇ ಎಂದ ರಮೇಶ ಜಾರಕಿಹೊಳಿ….!

ಬೆಳಗಾವಿ prajakiran.com : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಗ್ರಾಮೀಣ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಡಿದ ಸಚಿವ ರಮೇಶ ಜಾರಕಿಹೊಳಿ ಮತ್ತೆ ಶಾಸಕಿ ಲಕ್ಷ್ಮಿ‌ ಹೆಬ್ಬಾಳಕರ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಕಚೇರಿ ಉದ್ಘಾಟಿಸಿ  ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌ ಭಾಷಣದ ಉದ್ದಕ್ಕೂ ಲಕ್ಷ್ಮಿ ಹೆಬ್ಬಾಳಕರ ವಿರುದ್ದ  ಹರಿಹಾಯದ್ರು.  ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗಮಂಡ್ ಬಹಳ ಇದೆ. ಆ ಹಣದ ಗಮಂಡ್‌ನ್ನು‌ ನಾವು ತೋರಿಸಲು ನಾನು ರೆಡಿ ಇದ್ದೇನೆ ಎಂದು ಗುಡುಗಿದರು. ಕಳೆದ ಚುನಾವಣೆಯಲ್ಲಿ […]

ರಾಜ್ಯ

ಸಚಿವ ಜಾರಕಿಹೊಳಿ, ಮಾಧುಸ್ವಾಮಿ ವಿರುದ್ದ ಕೇಂದ್ರ ಸಚಿವ ಜೋಶಿ ಅಸಮಾಧಾನ

ಧಾರವಾಡ prajakiran.com :  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು 2023 ರ ಚುನಾವಣೆ ವಿಚಾರ ಪ್ರಸ್ತಾಪಿಸಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರ  ಕೋವಿಡ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ. ನಾವಂತು ನಮ್ಮ‌ ಕೆಲಸವನ್ನ ಮಾಡುತ್ತಿದ್ದೇವೆ. ಅವರು ಯಾವ ಅರ್ಥದಲ್ಲಿ ಎನೂ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಸಮಜಾಯಿಸಿ ನೀಡಿದರು. ಆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ.ಈಗ ಆದ್ಯತೆ ಇರೋದು ಕರೊನಾ ನಿಯಂತ್ರಣಕ್ಕೆ ರಾಜಕೀಯಕ್ಕೆ‌ಅಲ್ಲ ಎಂದು ನುಣಿಚಿಕೊಂಡರು. ಆ ಮೂಲಕ ಸಚಿವ […]

ರಾಜ್ಯ

ಧಾರವಾಡದ ಶಿರಕೋಳದಲ್ಲಿ ಕರೋನಾಗೆ ಬಲಿ : 13ಕ್ಕೆ ಏರಿಕೆಯಾದ ಜಿಲ್ಲೆಯ ಸಾವಿನ ಸಂಖ್ಯೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಗೆ  ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯ ಸಾವಿನ ಸಂಖ್ಯೆ ಹದಿಮೂರಕ್ಕೆ ಏರಿಕೆಯಾದಂತಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ಪಿ. 18713 ಸೋಂಕಿತ 43 ವಯಸ್ಸಿನ  ನಿವಾಸಿ ನಿನ್ನೆ ಸಂಜೆ ಮೃತಪಟ್ಟಿದ್ದಾನೆ.  ಇದರಿಂದಾಗಿ ಶಿರಕೋಳ ಗ್ರಾಮದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಆರಂಭದಲ್ಲಿ ಪಕ್ಕದ ಮೊರಬ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕರೋನಾಕ್ಕೆ ಆಗಮಿಸಿತ್ತು. ಆನಂತರ   ಶಿರಕೋಳ ಗ್ರಾಮಕ್ಕೂ ಪಾದಾರ್ಪಣೆ ಮಾಡಿತ್ತು. ಶಿರಕೋಳ ಗ್ರಾಮದ 120 ಜನ ಇರುವ ಕುಟುಂಬದ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎಸಿಪಿ, ಇನ್ಸಪೆಕ್ಟರ್ ಸೇರಿ 6 ಜನರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಎಸಿಪಿ ಹಾಗೂ ಸದ್ಯ ಗದಗ ಎಸಿಬಿ ಡಿವೈಎಸ್ಪಿ ಆಗಿರುವ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ಸೇರಿ ಆರು ಜನ ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ಆರಂಭಿಸಿ ರಾತ್ರಿಯವರೆಗೆ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. 2016ರ […]