ರಾಜ್ಯ

ಯೋಗೀಶಗೌಡ ಕೊಲೆ ಪ್ರಕರಣ : ಮತ್ತೇ ಚುರುಕುಗೊಂಡ ಸಿಬಿಐ ಅಧಿಕಾರಿಗಳ ತನಿಖೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಮತ್ತೇ ತನಿಖೆ ಚುರುಕುಗೊಳಿಸಿದ್ದಾರೆ.

8 ಜನ ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದ ಬೆನ್ನಲ್ಲೇ ಮತ್ತೇ ತನಿಖೆ ಮುಂದುವರೆರಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

2016ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಉದಯ ಜಿಮ್ ನಲ್ಲಿ ಬೆಳ್ಳಂಬೆಳಗ್ಗೆ ಯೋಗೀಶ ಗೌಡ ಗೌಡರ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಆ ದಿನದಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ (ಡಿಸಿಪಿ) ಹಾಗೂ ಪ್ರಸ್ತುತ ಹಾವೇರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಮಲ್ಲಿಕಾರ್ಜುನ ಬಾಲದಂಡಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

ಈ ಹಿನ್ನಲೆಯಲ್ಲಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ಗೊತ್ತಾಗಿದೆ.

ಕೊಲೆಯಾದ ದಿನದಂದು ಹಾಗೂ ನಂತರ ನಡೆದ ಬೆಳವಣಿಗೆಗಳು, ಆರು ಜನ ಆರೋಪಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದರು.

ಯಾವ ಆಧಾರದಲ್ಲಿ ಇವರನ್ನು ಬಂಧಿಸಲಾಗಿತ್ತು. ಬಂಧಿತರಿಂದ ಏನೆಲ್ಲಾ ವಶಪಡಿಸಿಕೊಳ್ಳಲಾಗಿತ್ತು. ಇದರಲ್ಲಿ ಯಾವ್ಯಾವ ಪೊಲೀಸ್ ಅಧಿಕಾರಿಗಳ ಪಾತ್ರ ಏನಿದೆ ಎಂಬುದರ ಕುರಿತು ಮಹತ್ತರ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆಯಿಂದ ವಿಚಾರಣೆ ನಡೆಯುತ್ತಿದ್ದು, ಹತ್ತು ಹಲವು ಆಯಾಮಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಸಿಬಿಐ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಧಾರವಾಡ ಸಹಾಯಕ ಪೊಲೀಸ್ ಆಯುಕ್ತ ವಾಸುದೇವ ನಾಯ್ಕ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಆಗಿದ್ದ ಚನ್ನಕೇಶವ ಟಿಂಗರಿಕರ್, ಪೊಲೀಸ್ ಹೆಡ್ ಕಾನ್ಸಟೇಬಲ್ ಬಾಬು ಕಟಗಿಯನ್ನು ವಿಚಾರಣೆ ನಡೆಸಿದ್ದರು.

ಇದೀಗ ಆ ದಿನದಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ (ಡಿಸಿಪಿ) ಹಾಗೂ ಪ್ರಸ್ತುತ ಹಾವೇರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಮಲ್ಲಿಕಾರ್ಜುನ ಬಾಲದಂಡಿಯವರನ್ನು ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇವರಿಂದ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಮತ್ತೇ ಯಾರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂಬುದು ಕಾದುನೋಡಬೇಕಿದೆ.

 

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *