ರಾಜ್ಯ

ಶಿವಾನಂದ ಕರಿಗಾರ, ನಾಗರಾಜ ಗೌರಿ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ Prajakiran.com :
ಧಾರವಾಡದ ಹೆಬ್ಬಳ್ಳಿ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶನಿವಾರವೂ
ಹಲವರ ವಿಚಾರಣೆ ನಡೆಸಿದರು.

ಧಾರವಾಡ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಪಕ್ಷದ ಮುಖಂಡ ನಾಗರಾಜ ಗೌರಿ ಅವರನ್ನು
ಶನಿವಾರ ಮಧ್ಯಾಹ್ನ
ಹಲವು ಗಂಟೆಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

ಯೋಗೀಶಗೌಡ ಗೌಡರ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದಾಗ ಶಿವಾನಂದ ಕರಿಗಾರ ಜೊತೆಗೆ ಒಡನಾಟ ಹೊಂದಿದ
ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಆನಂತರ ಇವರು ನಾಗರಾಜ ಗೌರಿ, ಜಿಪಂ ಸದಸ್ಯರೊಂದಿಗೆ ಸೇರಿ ರಾಜೀ ಸಂಧಾನದಲ್ಲಿ ಪ್ರಮಖ ಪಾತ್ರವಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಅದೇ ರೀತಿ ನರೇಂದ್ರ ಬಸ್ಸು ಸೇರಿದಂತೆ ಹಲವಾರು ಜನರನ್ನು ವಿಚಾರಣೆಗೆ ಒಳಪಡಿಸಿದ್ದು ಕಂಡು ಬಂತು.

ಐದನೇ ದಿನವೂ ಸಿಬಿಐ ಡ್ರಿಲ್ ಮಾಡುತ್ತಿರುವುದು ಮುಂದುವರೆದಿದೆ.

ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಹಾಗೂ ಹೊರಗಡೆ ಹಲವು ಸ್ಥಳಗಳಿಗೆ ಕರೆದುಕೊಂಡು ಹೋಗಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ಕಂಡು ಬಂದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *