ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿರೋ ಸಿಬಿಐ ತನಿಖೆ

ಹುಬ್ಬಳ್ಳಿ prajakiran.com : ಯೋಗೇಶಗೌಡ ಹತ್ಯೆ ಪ್ರಕರಣ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿದೆ.

ಈ ಕೊಲೆ ಪ್ರಕರಣದಲ್ಲಿ ಈವರೆಗೆ 600ಕ್ಕಿಂತ ಹೆಚ್ಚು ಜನರ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಬಿಐ  ಹಲವು ಮಹತ್ವದ ಅಂಶಗಳನ್ನು ಪತ್ತೆಹಚ್ಚಿದೆ ಎನ್ನಲಾಗಿದೆ.

ಯೋಗಿಶಗೌಡ ಕೊಲೆ ನಡೆದ ವೇಳೆ ದೆಹಲಿಯಲ್ಲಿರೋದಾಗಿ ದಾಖಲೆ ಸೃಷ್ಟಿ ಮಾಡಿದ್ದ ಕುರಿತು ವಿನಯ ಕುಲಕರ್ಣಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಸರಿಯಾದ ಉತ್ತರ ಕೊಡಲಿಲ್ಲ ಎಂದು ಹೇಳಲಾಗಿದೆ.

ಹೀಗಾಗಿ ನಿನ್ನೆ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ಮುಖಾಮುಖಿ ವಿಚಾರಣೆ ನಡೆಸಿದರು.

ವಿನಯ್ ಕುಲಕರ್ಣಿ ಸಚಿವರಿದ್ದ ವೇಳೆ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡನನ್ನು ಮೊದಲು ಪ್ರತ್ಯೇಕ ಹಾಗೂ ಆನಂತರ ಒಟ್ಟಿಗೆ ವಿಚಾರಣೆ ನಡೆಸಿದರು ಎಂದು ತಿಳಿದುಬಂದಿದೆ.

ವಿನಯ ಕುಲಕರ್ಣಿ ಸಚಿವರಿದ್ದ ವೇಳೆ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಲಿಂಗ ನ್ಯಾಮಗೌಡ

ನನ್ನು ಕಳೆದ ಮೂರು ದಿನಗಳಿಂದ ಸಿಬಿಐ  ವಿಚಾರಣೆಗೆ ಒಳಪಡಿಸಿರುವುದು ಪ್ರಕರಣವನ್ನು ಹೊಸ ದಿಕ್ಕಿನತ್ತ ತೆಗೆದುಕೊಂಡು ಹೊರಟಿದೆ ಎನ್ನಲಾಗಿದೆ.

 ವಿನಯ್ ಕುಲಕರ್ಣಿ ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ಪ್ರಕರಣದ ಇಂಚಿಂಚು ಮಾಹಿತಿ ಸಂಗ್ರಹ ನಡೆಸಿದ್ದಾರೆ. ಯೋಗೇಶಗೌಡ ಹತ್ಯೆ ಬಳಿಕ ವಿನಯ್ ಕುಲಕರ್ಣಿ, ಹತ್ಯೆ ಮಾಡಿದ್ದ ಆರೋಪಿಗಳ ಜೊತೆಗೆ ನೇರ ಸಂಪರ್ಕ ಹೊಂದಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿ‌ ಸಿಬಿಐ ಅಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ ಬೆವರಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಪ್ರಕರಣದ ಸಾಕ್ಷ್ಯ ನಾಶಕ್ಕೆ  ಕೋಟಿ, ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎನ್ನಲಾಗಿದ್ದು, ಹಣದ ಹರಿವಿನ ಬಗ್ಗೆ ಸಿಬಿಐ ಅಧಿಕಾರಿಗಳು ಇಬ್ಬರನ್ನು ವಿಚಾರಣೆಗೊಳಪಡಿಸಿದ್ದಾರೆ.ಅಲ್ಲದೆ ಹಣ ಸಾಗಾಟ ಮಾಡಿದ ಕಾರ ಚಾಲಕನನ್ನು ಕೂಡ ವಿಚಾರಣೆ ನಡೆಸಿದರು.

ಯೋಗೇಶಗೌಡ ಹತ್ಯೆಯ ಆರೋಪಿಗಳ ಜೊತೆಗೆ ನೇರ ಸಂಪರ್ಕದಲ್ಲಿದ್ದರೆಂಬ ಮಾಹಿತಿಯನ್ನು ಸಿಬಿಐ ಅಧಿಕಾರಿಗಳು ಸಂಗ್ರಹಿಸಿ, ಕೊಲೆಯ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆಯೂ ವಿನಯ್ ಮೇಲೆ ವಿಚಾರಣೆ ನಡೆಸಿದ್ದು, ಇದಕ್ಕೆ ವಿನಯ್ ಕುಲಕರ್ಣಿ ನನಗೂ, ಕೊಲೆಗೂ ಯಾವುದೇ ಸಂಬಂಧ ಇಲ್ಲ ಅನ್ನೋ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಮೂರು ದಿನಗಳ ಕಾಲ ಸಿಬಿಐ ವಶದಲ್ಲಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಿದೆ.

ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ಸಿಬಿಐ ತಂಡ ಸಾಕಷ್ಟು ಮಾಹಿತಿ ಸಂಗ್ರಹಿಸಲು, ಮತ್ತೆ ವಶಕ್ಕೆ ತೆಗೆದುಕೊಳ್ಳುತ್ತದೇಯಾ? ಇಲ್ಲ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಧಿಸೊತ್ತಾ ಕಾದು ನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *