ರಾಜ್ಯ

ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್, ಗುರು ಸಾರ್ವಭೌಮ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ

ಬೆಂಗಳೂರು ಪ್ರಜಾಕಿರಣ.ಕಾಮ್ ;

ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

ಈ ಬ್ಯಾಂಕ್ ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು.

ಮೂರೂ ಬ್ಯಾಂಕ್ ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಅಂದು ಬೆಂಬಲ ಸೂಚಿಸಿದ್ದರು.

ಇದೀಗ ಸಿಎಂ ಆಗಿ ಮರು ಆಯ್ಕೆಯಾದ ಬೆನ್ನಲ್ಲೇ ಮತ್ತೊಮ್ಮೆ ನುಡಿದಂತೆ ನಡೆದಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *