ರಾಜ್ಯ

ದೀಪಾವಳಿ ಮುಗಿದ ಬೆನ್ನಲ್ಲೇ ಸಿಬಿಐ ತನಿಖೆ ಚುರುಕು

ಧಾರವಾಡ prajakiran.com :
ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದ ತನಿಖೆಯನ್ನು
ಸಿಬಿಐ ಅಧಿಕಾರಿಗಳು ಮತ್ತೆ ತನಿಖೆ ಚುರುಕುಗೊಳಿಸಿದ್ದಾರೆ.

ದೀಪಾವಳಿ ಹಬ್ಬ ಮುಗಿಸಿ ಮತ್ತೆ ಧಾರವಾಡಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಮತ್ತೆ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಗುರುವಾರ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಬಸವರಾಜ ಮುತ್ತಗಿ, ಮಾಜಿ ಸಚಿವರ ಆಪ್ತರಾದ ಶ್ರೀಶಾ ಪಾಟೀಲ, ರೂಪೇಂದ್ರಕುಮಾರ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಬಾಬು ಕಟಗಿ ಅವರನ್ನು ಸಿಬಿಐ ಅಧಿಕಾರಿಗಳು ಕರೆದು ವಿಚಾರಣೆ ನಡೆಸಿದರು.

ಬಸವರಾಜ ಮುತ್ತಗಿ ಡ್ರಿಲ್ ನಡೆಸಿದ ಸಿಬಿಐ ತಂಡ ಹಲವು ಆಯಾಮದಲ್ಲಿ ಪ್ರಶ್ನೆಗಳನ್ನು ಕೇಳಿದರು ಎಂದು ತಿಳಿದುಬಂದಿದೆ.
ಇದರಿಂದಾಗಿ ಕೆಲಕಾಲ ಗಲಿಬಿಲಿಗೊಂಡಿದ್ರು ಎಂದು ಹೇಳಲಾಗುತ್ತಿದೆ.

ಈಗಾಗಲೇ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದು, ಇನ್ನೂ ಹಲವು ವಿಷಯಗಳ ಕುರಿತು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿನಯ್ ಕುಲಕರ್ಣಿ ಅವರ ಆಪ್ತರ ವಿಚಾರಣೆ ಮತ್ತೆ ಸಂಕಷ್ಟ ಸವಾಲುಗಳಿಂದ ಕೂಡಿದೆ ಎಂದು ಹೇಳಲಾಗುತ್ತಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *