ನವದೆಹಲಿ prajakiran.com : ಕರೋನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಕೇಂದ್ರದ ಹತ್ತನೇ ತರಗತಿಯ ಸಿಬಿಎಸ್ಇ ಪರೀಕ್ಷೆ ರದ್ದುಗೊಳಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ಅವರು ಸಿಬಿಎಸ್ಇ ಬೋರ್ಡ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ.
ದೇಶದ ಎಲ್ಲಾ ಭಾಗಗಳಿಗೂ ತಂತ್ರಜ್ನಾದ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿಲ್ಲವಾದ್ದರಿಂದ ಆನ್ ಲೈನ್ ಪರೀಕ್ಷೆ ನಡೆಸುವುದು ಸಾಧ್ಯವಿಲ್ಲ .
ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ವಿಪಕ್ಷ ಕಾಂಗ್ರೆಸ್ ಸೇರಿದಂತೆ ಅನೇಕ ಪ್ರಾದೇಶಿಕ ಪಕ್ಷದ ನಾಯಕರು ಕೇಂದ್ರಕ್ಕೆ ಆಗ್ರಹಿಸಿದ್ದರು.
ಪರೀಕ್ಷೆ ರದ್ದುಪಡಿಸುವಂತೆ 2 ಲಕ್ಷ ಮನವಿ ಸಲ್ಲಿಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.