ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ 12ನೇ ತರಗತಿ ಸಿಬಿಎಸ್ಇ ಮತ್ತು ಐಸಿಎಸ್ ಇ ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕುರಿತು ಮಾನವೀಯ ನಿರ್ದೇಶನಗಳನ್ನು ನೀಡಲಾಗಿದೆ.
ಕಳೆದ ವರ್ಷ ಅಂಗೀಕರಿಸಿದ ನಿರ್ದೇಶನಗಳನ್ನು ಅನುಸರಿಸುವ ಬದಲು ಅಂತಿಮ ಪರೀಕ್ಷೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಬೇಕು ಎಂದು ಅರ್ಜಿದಾರರ ಪರ ವಕೀಲೆ ಮಮತಾ ಶರ್ಮಾ ಕೋರಿದ್ದಾರೆ.
12ನೇ ತರಗತಿಯ ಫಲಿತಾಂಶಗಳನ್ನು ನಿರ್ದಿಷ್ಟ ಸಮಯದೊಳಗೆ ಘೋಷಿಸಲು ವಸ್ತುನಿಷ್ಠ ವಿಧಾನವನ್ನು ರೂಪಿಸುವಂತೆ ಮನವಿ ಮಾಡಲಾಗಿದ್ದು, ಕೊರೋನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಆಫ್ ಲೈನ್ ಹಾಗೂ ಆನ್ ಲೈನ್ ಪರೀಕ್ಷೆಗಳು ಸಹ ಕಷ್ಟವೇ ಎಂದು ಮಮತಾ ಶರ್ಮಾ ಹೇಳಿದ್ದಾರೆ.