ರಾಜ್ಯ

ಸಿಡಿ ಪ್ರಕರಣದ ತನಿಖೆ ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ : ಬಸವರಾಜ ಬೊಮ್ಮಾಯಿ

ಧಾರವಾಡ Prajakiran.com : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿ.ಡಿ. ಪ್ರಕರಣದ ತನಿಖೆಯನ್ನು ಎಸ್‌ಐಟಿ ಸಮರ್ಥವಾಗಿ ನಡೆಸುತ್ತಿದೆ.

ಏನು ತೊಂದರೆ ಇಲ್ಲ. ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ.

ಎಸ್ ಐ ಟಿ   ಸ್ವತಂತ್ರವಾಗಿ ತನಿಖೆ ನಡೆಸುತ್ತಿರುವ ಸಂಸ್ಥೆ  ಎಂದು ಧಾರವಾಡದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್‌ಐಟಿ ಸಿ.ಡಿ. ಪ್ರಕರಣವನ್ನು ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುತ್ತಿದೆ’ ಎಂದರು.

ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದ್ದು, ಈ‌ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಮತಗಳನ್ನು ಪಡೆದು ಜಯ ಗಳಿಸಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

‘ಹೊರ ರಾಜ್ಯಗಳಲ್ಲಿ ಕೋವಿಡ್–19 ಸೋಂಕು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ.

ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ.

ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *