ಅಂತಾರಾಷ್ಟ್ರೀಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಹಾಗೂ ಹಲವು ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರ ಭೇಟಿ ಮಾಡಿದ್ದರು.

ಸಚಿವ ಜೋಶಿಯವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ.

ಈ ಬಗ್ಗೆ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಟ್ವೀಟ್ ಮಾಡಿದ್ದು, ಶೀಘ್ರ ಗುಣಮುಖರಾಗಿ ಬಂದು ಮತ್ತೆ ಜನ ಸೇವೆ ಮುಂದುವರೆಸಲಿ ಎಂದು ಹಾರೈಸಿದ್ದಾರೆ.

#Pralhad Joshi #central minister joshi

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *