ಅಂತಾರಾಷ್ಟ್ರೀಯ

ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ಅನಾರೋಗ್ಯದಿಂದ ನಿಧನ

ನವದೆಹಲಿ prajakiran.com : ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ (74) #RamVilasPaswan ಅವರು ಅನಾರೋಗ್ಯದಿಂದ ಗುರುವಾರ ಸಂಜೆ ವಿಧಿವಶರಾಗಿದ್ದಾರೆ.

ಕೆಲವು ವಾರಗಳ ಹಿಂದೆಯಷ್ಟೇ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ತಂದೆ ನಿಧನವಾಗಿರುವ ಕುರಿತು ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.

ರಾಮವಿಲಾಸ್ ಪಾಸ್ವಾನ್ ಅವರು ಲೋಕಜನಶಕ್ತಿ ಪಕ್ಷದ ಸಂಸ್ಥಾಪಕರಾಗಿ ರಾಷ್ಟ್ರರಾಜಕಾರಣದಲ್ಲಿ ಮಿಂಚಿದ್ದ  ಅವರು ಐದು ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿದ್ದರು.

ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ನಿಧನರಾದ ಸುದ್ದಿ ರಾಷ್ಟ್ರ ರಾಜಕಾರಣದಲ್ಲಿ ಕರಾಳ ಛಾಯೆ ಮೂಡಿಸಿದೆ.

ದೇಶದ ಹಿರಿಯ ಸಂಸದೀಯ ಪಟುವಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಸತತ 8 ಬಾರಿ ಸಂಸದರಾಗಿ ಆಯ್ಕೆಯಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *