ರಾಜ್ಯ

ಧಾರವಾಡ ಜಿಲ್ಲೆಯ ೨೩ ಪರೀಕ್ಷಾ ಕೇಂದ್ರಗಳಲ್ಲಿ ಜುಲೈ ೩೦, ೩೧ ರಂದು ಸಿಇಟಿ ಪರೀಕ್ಷೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಜುಲೈ ೩೦ ಹಾಗೂ ೩೧ ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಧಾರವಾಡ ಶಹರದಲ್ಲಿ  ೧೨ ಹಾಗೂ ಹುಬ್ಬಳ್ಳಿ ಶಹರದಲ್ಲಿ ೧೧ ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು ೨೩ ಪರೀಕ್ಷಾ ಕೇಂದ್ರಗಳಿವೆ.

ಧಾರವಾಡ ಶಹರದಲ್ಲಿ -೪೦೮೦ ,ಹುಬ್ಬಳ್ಳಿ ಶಹರದಲ್ಲಿ -೩೭೬೮ ವಿದ್ಯಾರ್ಥಿಗಳು ಸೇರಿ ಒಟ್ಟು -೭೮೪೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಜುಲೈ ೩೦ ,ಗುರುವಾರ ಬೆಳಿಗ್ಗೆ ೧೦.೩೦ ರಿಂದ ೧೧.೫೦ ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ ೨.೩೦ ರಿಂದ ೩.೫೦ ರವರೆಗೆ ಗಣಿತ, ಜುಲೈ ೩೧ ,ಶುಕ್ರವಾರ ಬೆಳಿಗ್ಗೆ ೧೦.೩೦ ರಿಂದ ೧೧.೫೦ ರವರೆಗೆ ಭೌತಶಾಸ್ತ್ರ,   ಮಧ್ಯಾಹ್ನ ೨.೩೦ ರಿಂದ ೩.೫೦ ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ಹಿರಿಯ ಪ್ರಾಚಾರ್ಯರು/ಉಪನ್ಯಾಸಕರನ್ನು ಪ್ರಶ್ನೆಪತ್ರಿಕಾ ಪಾಲಕರನ್ನಾಗಿ ನೇಮಕಮಾಡಲಾಗಿದೆ. 

ಪ್ರತಿ ಪರಿಕ್ಷಾ ಕೇಂದ್ರಕ್ಕೆ ಇಬ್ಬರು ಉಪನ್ಯಾಸಕರನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ ನೇಮಕಮಾಡಲಾಗಿದೆ.

ಒಬ್ಬ ಉಪನ್ಯಾಸಕರನ್ನು ಕೋವಿಡ್ -೧೯ ಮೇಲ್ವಿಚಾರಕರನ್ನಾಗಿ ನೇಮಕ ಮಾಡಲಾಗಿದೆ. ಇವರು ಅಗತ್ಯ ಮಾಹಿತಿಗಳನ್ನು ಅಭ್ಯರ್ಥಿಗಳಿಗೆ ನೀಡುವಲ್ಲಿ ಸಹಾಯಕರಾಗಿರುತ್ತಾರೆ.

ಆರೋಗ್ಯ ತಪಾಸಣೆ ಮಾಡಲು ಆರೋಗ್ಯ ಇಲಾಖೆ ವತಿಯಿಂದ ಇಬ್ಬರು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ಗೆ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.

ಜಿಲ್ಲೆಯಲ್ಲಿ ಇಬ್ಬರು ಕೋವಿಡ್ ಸೋಂಕಿತ ಅಭ್ಯರ್ಥಿಗಳಿದ್ದು, ಅವರುಗಳಿಗಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರತ್ಯೇಕ ಕೇಂದ್ರವನ್ನು ನಿಗದಿಪಡಿಸಲಾಗಿದೆ.

ಅಲ್ಲಿ ವೈದ್ಯಕೀಯ ಸೌಲಭ್ಯ ಕುರಿತಂತೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಸಹಾಯವಾಣಿ: ಮೊ. ಸಂಖ್ಯೆ: ೯೪೪೯೬೮೫೯೮೦/೯೮೮೦೭೪೯೭೦೩ ಸಂಪರ್ಕಿಸಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *